ಉಡುಪಿ: ಸೆ.2ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಾಹ್ನ 1.00 ಗಂಟೆಗೆ ಮಂಗಳೂರಿನ ಬಂಗ್ರಕೂಳೂರು ಗೋಲ್ಡ್ ಪಿಂಚ್ ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಭಾಗವಹಿಸುವ ಈ ಸಮಾವೇಶವನ್ನು ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ವಿವಿಧ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಸೇರಿ ಸಂಘಟಿತ ಪ್ರಯತ್ನದಿಂದ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಹೇಳಿದರು.Continue reading “ಸೆ.2ರ ಪ್ರಧಾನಿ ಮಂಗಳೂರು ಭೇಟಿಯ ಸಾರ್ವಜನಿಕ ಸಭೆ ಯಶಸ್ವಿಗೊಳಿಸಿ: ಕುಯಿಲಾಡಿ ಸುರೇಶ್ ನಾಯಕ್”
Monthly Archives: August 2022
ಅಂಬಲಪಾಡಿ ಗ್ರಾಮ ಪಂಚಾಯತ್ ನಲ್ಲಿ ಸಂಜೀವಿನಿ ಸ್ವಸಹಾಯ ಸಂಘಗಳ ಸದಸ್ಯರಿಂದ ‘ಪ್ರಧಾನಿಯವರ ಮನ್ ಕೀ ಬಾತ್ ವೀಕ್ಷಣೆ’ ಮತ್ತು ಸಂಜೀವಿನಿ ವಿಶೇಷ ಸಂತೆ
ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ‘ಮನ್ ಕೀ ಬಾತ್’ ಕಾರ್ಯಕ್ರಮದ ಆ.28ರ ನೇರ ಪ್ರಸಾರವನ್ನು ದೂರದರ್ಶನದ ಸಹಯೋಗದೊಂದಿಗೆ ಕೇಂದ್ರ ಸರಕಾರದ ಎನ್.ಆರ್.ಎಲ್.ಎಂ. ಯೋಜನೆಯ ಸಂಜೀವಿನಿ ಒಕ್ಕೂಟದ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರು ವೀಕ್ಷಿಸುವ ಕಾರ್ಯಕ್ರಮವು ದೇಶದ 12 ಅಧಿಕೃತ ವೀಕ್ಷಣಾ ಕೇಂದ್ರಗಳಲ್ಲಿ ಒಂದಾದ ಕರ್ನಾಟಕ ರಾಜ್ಯದ ಉಡುಪಿ ಜಿಲ್ಲೆಯ ಅಂಬಲಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು. ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪ್ರೋಟೀನುಯುಕ್ತ ದ್ವಿದಳ ಧಾನ್ಯಗಳ ಉತ್ಪಾದನೆ, ಪೋಷಣ್ ಅಭಿಯಾನ,Continue reading “ಅಂಬಲಪಾಡಿ ಗ್ರಾಮ ಪಂಚಾಯತ್ ನಲ್ಲಿ ಸಂಜೀವಿನಿ ಸ್ವಸಹಾಯ ಸಂಘಗಳ ಸದಸ್ಯರಿಂದ ‘ಪ್ರಧಾನಿಯವರ ಮನ್ ಕೀ ಬಾತ್ ವೀಕ್ಷಣೆ’ ಮತ್ತು ಸಂಜೀವಿನಿ ವಿಶೇಷ ಸಂತೆ”
ಆ.28ರಂದು ಅಂಬಲಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ‘ಪ್ರಧಾನಿಯವರ ಮನ್ ಕೀ ಬಾತ್ ವೀಕ್ಷಣೆ’ ಮತ್ತು ‘ಸಂಜೀವಿನಿ ವಿಶೇಷ ಸಂತೆ’ – ಪೂರ್ವಭಾವಿ ಸಭೆ
ಉಡುಪಿ: ಆಗಸ್ಟ್ 28 ರವಿವಾರ ಬೆಳಿಗ್ಗೆ ಗಂಟೆ 11.00ಕ್ಕೆ ಅಂಬಲಪಾಡಿ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಸಂಜೀವಿನಿ ಒಕ್ಕೂಟದ ಸ್ವಸಹಾಯ ಸಂಘದ ಸದಸ್ಯರಿಂದ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಆಗಸ್ಟ್ ತಿಂಗಳ ‘ಮನ್ ಕೀ ಬಾತ್ ನೇರ ಪ್ರಸಾರ ವೀಕ್ಷಣೆ’ ಮತ್ತು ‘ಸಂಜೀವಿನಿ ಒಕ್ಕೂಟದ ವಿಶೇಷ ಸಂತೆ’ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಎಸ್. ಪೂಜಾರಿ ಅಧ್ಯಕ್ಷತೆಯಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿContinue reading “ಆ.28ರಂದು ಅಂಬಲಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ‘ಪ್ರಧಾನಿಯವರ ಮನ್ ಕೀ ಬಾತ್ ವೀಕ್ಷಣೆ’ ಮತ್ತು ‘ಸಂಜೀವಿನಿ ವಿಶೇಷ ಸಂತೆ’ – ಪೂರ್ವಭಾವಿ ಸಭೆ”
ಆ.28ರಂದು ಬ್ರಹ್ಮಾವರದ ಎಸ್.ಎಮ್.ಎಸ್ ಕಾಂಪ್ಲೆಕ್ಸ್ ನಲ್ಲಿ ‘ಉಡುಪಿಯನ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ(ನಿ.)’ ಉದ್ಘಾಟನೆ
ಉಡುಪಿ: ಉಡುಪಿ ಜಿಲ್ಲೆಯ ಉದ್ಯಮ ಕೇಂದ್ರವಾಗಿ ಬೆಳೆಯುತ್ತಿರುವ ಬ್ರಹ್ಮಾವರದ ಸಹಕಾರಿ ಕ್ಷೇತ್ರದ ಮಜಲಿನಲ್ಲಿ ಇನ್ನೊಂದು ಹೊಸ ಪೈರಿನ ತೆನೆ ಅರಳಲು ಸಜ್ಜಾಗಿದೆ. ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಉಡುಪಿಯನ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ(ನಿ.) ಆಗಸ್ಟ್ 28, ರವಿವಾರ ಬೆಳಿಗ್ಗೆ 10.00 ಗಂಟೆಗೆ ಬ್ರಹ್ಮಾವರದ ಎಸ್.ಎಮ್.ಎಸ್. ಚರ್ಚ್ ಕಾಂಪ್ಲೆಕ್ಸ್ ನ 2ನೇ ಮಹಡಿಯಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಸಚಿನ್ ಪೂಜಾರಿ ತಿಳಿಸಿದ್ದಾರೆ. ಉಡುಪಿಯ ಕ್ರೆಡಿಟ್ ಕೋ-ಅಪರೇಟೀವ್ ಸೊಸೈಟಿ(ನಿ.) ಇದರ ಅಧ್ಯಕ್ಷ ಸಚಿನ್ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯುವ ಸಂಸ್ಥೆಯContinue reading “ಆ.28ರಂದು ಬ್ರಹ್ಮಾವರದ ಎಸ್.ಎಮ್.ಎಸ್ ಕಾಂಪ್ಲೆಕ್ಸ್ ನಲ್ಲಿ ‘ಉಡುಪಿಯನ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ(ನಿ.)’ ಉದ್ಘಾಟನೆ”
ಸೆ.2ರ ‘ಪ್ರಧಾನಿ ಮಂಗಳೂರು ಬೇಟಿ’ ಕಾರ್ಯಕ್ರಮ ಯಶಸ್ವಿಗೊಳಿಸಿ: ಸಚಿವ ವಿ.ಸುನಿಲ್ ಕುಮಾರ್
ಉಡುಪಿ: ದ.ಕ. ಜಿಲ್ಲಾ ಉಸ್ತುವಾರಿ ಸಚಿವನಾದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಪ್ರಥಮ ಕಾರ್ಯಕ್ರಮ ಸೆ.2ರಂದು ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ನಡೆಯಲಿದೆ. ಚುನಾವಣಾ ಸಂಬಂಧಿತ ಉಭಯ ಜಿಲ್ಲೆಗಳ ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿಯವರು ಭಾಗಿಯಾಗಿದ್ದರೂ, ವಿವಿಧ ಅಭಿವೃದ್ಧಿ ಚಟುವಟಿಕೆಗಳಿಗೆ ಚಾಲನೆ ನೀಡುವ ಸರಕಾರಿ ಕಾರ್ಯಕ್ರಮ ಇದಾಗಿದೆ. ದ.ಕ ಜಿಲ್ಲೆಯಿಂದ ಸುಮಾರು 80 ಸಾವಿರ ಮಂದಿ ಹಾಗೂ ಉಡುಪಿ ಜಿಲ್ಲೆಯಿಂದ ಸುಮಾರು 20 ಸಾವಿರ ಮಂದಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ಸರಕಾರದContinue reading “ಸೆ.2ರ ‘ಪ್ರಧಾನಿ ಮಂಗಳೂರು ಬೇಟಿ’ ಕಾರ್ಯಕ್ರಮ ಯಶಸ್ವಿಗೊಳಿಸಿ: ಸಚಿವ ವಿ.ಸುನಿಲ್ ಕುಮಾರ್”
ಸಿ.ಸಿ.ಎ.ಆರ್.ಐ. ಗೋವಾ ಇದರ ಇನ್ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್ ಕಮಿಟಿ ಸದಸ್ಯ ಶಿವಕುಮಾರ್ ಅಂಬಲಪಾಡಿ ಇವರಿಗೆ ಅಂಬಲಪಾಡಿ ಬಿಲ್ಲವ ಸೇವಾ ಸಂಘದಿಂದ ಸನ್ಮಾನ
ಉಡುಪಿ: ಕೇಂದ್ರ ಸರಕಾರದ ಸ್ವಾಮ್ಯದ ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ (ಸಿ.ಸಿ.ಎ.ಆರ್.ಐ) ಗೋವಾ ಇದರ ಆಡಳಿತ ಸಮಿತಿಯ ಸದಸ್ಯರಾಗಿ ಭಾರತೀಯ ಕೃಷಿ ಸಂಶೋಧನಾ ಪರಿಷತ್ ನಿಂದ ನಾಮ ನಿರ್ದೇಶನಗೊಂಡಿರುವ ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಇವರನ್ನು ಬಿಲ್ಲವಾ ಸೇವಾ ಸಂಘ (ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ ಬಂಗೇರ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದContinue reading “ಸಿ.ಸಿ.ಎ.ಆರ್.ಐ. ಗೋವಾ ಇದರ ಇನ್ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್ ಕಮಿಟಿ ಸದಸ್ಯ ಶಿವಕುಮಾರ್ ಅಂಬಲಪಾಡಿ ಇವರಿಗೆ ಅಂಬಲಪಾಡಿ ಬಿಲ್ಲವ ಸೇವಾ ಸಂಘದಿಂದ ಸನ್ಮಾನ”
ಅಂಬಲಪಾಡಿ ಶ್ರೀ ಬಬ್ಬುಸ್ವಾಮಿ ದೈವಸ್ಥಾನದಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಗೌರವಾರ್ಪಣೆ
ಉಡುಪಿ: ಕ್ಷೇತ್ರದ ಅಭಿವೃದ್ಧಿಗೆ ಸರಕಾರದ ವಿವಿಧ ಮೂಲಗಳಿಂದ ಅನುದಾನ ನೀಡುತ್ತಾ ಬಂದಿರುವ ಕರ್ನಾಟಕ ಸರಕಾರದ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಶ್ರೀ ಬಬ್ಬು ಸ್ವಾಮಿ ದೈವಸ್ಥಾನ (ಪಡುಪಾಲು) ಅಂಬಲಪಾಡಿ ಇದರ ವತಿಯಿಂದ ಅವರ ಗೃಹ ಕಛೇರಿಯಲ್ಲಿ ಶಾಲು ಹೊದೆಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ದೈವಸ್ಥಾನದ ಹತ್ತು ಸಮಸ್ತರ ಗುರಿಕಾರ ದೇವದಾಸ್, ಆಡಳಿತ ಸಮಿತಿಯ ಕೋಶಾಧಿಕಾರಿ ಭರತ್Continue reading “ಅಂಬಲಪಾಡಿ ಶ್ರೀ ಬಬ್ಬುಸ್ವಾಮಿ ದೈವಸ್ಥಾನದಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಗೌರವಾರ್ಪಣೆ”
ಸಶಕ್ತ ಬೂತ್’ ಸಂಕಲ್ಪದೊಂದಿಗೆ ಪಕ್ಷ ಸಂಘಟನೆಗೆ ವೇಗ ನೀಡಲು ಕುಯಿಲಾಡಿ ಕರೆ
ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ ಉಡುಪಿ: ಚುನಾವಣಾ ಹೊಸ್ತಿಲಲ್ಲಿರುವ ಪ್ರಸಕ್ತ ಸನ್ನಿವೇಶದಲ್ಲಿ ‘ಸಶಕ್ತ ಬೂತ್’ ಸಂಕಲ್ಪದೊಂದಿಗೆ ಪಕ್ಷ ಸಂಘಟನೆಗೆ ಹೆಚ್ಚಿನ ವೇಗ ನೀಡಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಮಂಗಳವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಬಿಜೆಪಿಯ ಯೋಜನೆಯಂತೆ ಮುಂಬರುವ ದಿನಗಳಲ್ಲಿ ಹಲವಾರು ಕಾರ್ಯ ಚಟುವಟಿಕೆಗಳು ನಡೆಯಲಿವೆ. ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.Continue reading “ಸಶಕ್ತ ಬೂತ್’ ಸಂಕಲ್ಪದೊಂದಿಗೆ ಪಕ್ಷ ಸಂಘಟನೆಗೆ ವೇಗ ನೀಡಲು ಕುಯಿಲಾಡಿ ಕರೆ”
ಕಾಂಗ್ರೆಸ್ ನವರದು ಬಯಲು ನಾಟಕ : ಆರೋಗ್ಯ ಸಚಿವ ಡಾ! ಕೆ.ಸುಧಾಕರ್ ಲೇವಡಿ 75 ವರ್ಷ ರಾಷ್ಟ್ರಧ್ವಜವನ್ನೇ ಮರೆತಿದ್ದವರು ಈಗ ಬೀದಿ ಬೀದಿಯಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ
ಚಿಕ್ಕಬಳ್ಳಾಪುರ : ಕಳೆದ 75 ವರ್ಷದಲ್ಲಿ ಭಾವುಟಗಳನ್ನೇ ಮರೆತಿದ್ದವರು, ರಾಷ್ಟ್ರಧ್ವಜವನ್ನೇ ಮರೆತಿದ್ದವರು ಪ್ರಧಾನಿಯವರು ಹರ್ ಘರ್ ತಿರಂಗ ಘೋಷಣೆ ನಂತರ ಬೆಂಗಳೂರಿನ ಬೀದಿಗಳಲ್ಲಿ ಧ್ವಜ ಹಿಡಿದು ಪಾದಯಾತ್ರೆ ಮಾಡಿರುವುದು ಬಯಲು ನಾಟಕವಲ್ಲವೇ ಎಂದು ಆರೋಗ್ಯ ಸಚಿವ ಡಾ! ಕೆ. ಸುಧಾಕರ್ ಪ್ರಶ್ನಿಸಿದ್ದಾರೆ. ಹರ್ ಘರ್ ತಿರಂಗ ಎಂಬುದು ನಾಟಕ ಎಂಬ ಕಾಂಗ್ರೆಸ್ ಆರೋಪದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಯಲು ನಾಟಕ ಮಾಡುತ್ತಿರುವ ಕಾಂಗ್ರೆಸ್ ಗೆ ಕಳೆದ 75 ವರ್ಷದಲ್ಲಿ ರಾಷ್ಟ್ರಧ್ವಜ ನೆನಪಿತ್ತೇ? ಈಗContinue reading “ಕಾಂಗ್ರೆಸ್ ನವರದು ಬಯಲು ನಾಟಕ : ಆರೋಗ್ಯ ಸಚಿವ ಡಾ! ಕೆ.ಸುಧಾಕರ್ ಲೇವಡಿ 75 ವರ್ಷ ರಾಷ್ಟ್ರಧ್ವಜವನ್ನೇ ಮರೆತಿದ್ದವರು ಈಗ ಬೀದಿ ಬೀದಿಯಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ”
ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರೇ ತಮ್ಮ ನಾಯಕರ ಮೇಲೆ ಅಟ್ಟಹಾಸ ಮೆರೆಯುತ್ತಿದ್ದಾರೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ,ಕೆ. ಸುಧಾಕರ್
ಆರ್‌ಎಸ್‌ಎಸ್ ಮತ್ತು ಸಾವರ್ಕರ್ ಬಗ್ಗೆ ಮಾತನಾಡುವುದು ಕಾಂಗ್ರೆಸ್ ದೌರ್ಬಲ್ಯ ಬೆಂಗಳೂರು, ಭಾನುವಾರ, ಆಗಸ್ಟ್ 21: ಸತ್ಯಕ್ಕೆ ಎರಡು ಮುಖಗಳಿರುತ್ತವೆ. ಈಗ ಕಾಂಗ್ರೆಸ್ ಕಾರ್ಯಕರ್ತರೇ ಅವರ ನಾಯಕರ ಮೇಲೆ ಮುಗಿ ಬಿದ್ದಿದ್ದಾರೆ. *ಕೈ ಪಕ್ಷದ ನಾಯಕರು ಸಮಾಜದಲ್ಲಿ ಹೇಗೆ ಇರಬೇಕು ಅನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು* ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಹುಸಂಖ್ಯಾತರ ಬಗ್ಗೆ ಕಾಂಗ್ರೆಸ್ ನಾಯಕರು ಲಘುವಾಗಿ ಮಾತನಾಡಿರುವುದು ಕಾರ್ಯಕರ್ತರಿಗೆ ಕೋಪ ತರಿಸಿದೆ. ಭಾವೋದ್ವೇಗಕ್ಕೆ ಒಳಗಾಗಿ ಮೊಟ್ಟೆContinue reading “ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರೇ ತಮ್ಮ ನಾಯಕರ ಮೇಲೆ ಅಟ್ಟಹಾಸ ಮೆರೆಯುತ್ತಿದ್ದಾರೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ,ಕೆ. ಸುಧಾಕರ್“