Design a site like this with WordPress.com
Get started

ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿಯಾದ ಸಚಿವೆ ಶೋಭಾ ಕರಂದ್ಲಾಜೆ

ದೆಹಲಿ: ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರನ್ನು ಇಂದು ಸಂಸತ್ತಿನಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಯವರು ಭೇಟಿ ಮಾಡಿದರು. ಸಂಘ ಪರಿವಾರದ ಕಾರ್ಯಕರ್ತ ಶ್ರೀ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದುದಕ್ಕೆ ಅವರಿಗೆ ಧನ್ಯವಾದ ತಿಳಿಸಿ, ಕರಾವಳಿಯಲ್ಲಿ ನಡೆಯುತ್ತಿರುವ ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕೋರಿದರು.