Design a site like this with WordPress.com
Get started

ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ನೇಮಕ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ತೆರವಾಗಿರುವ ಮತ್ತು ಖಾಲಿ ಉಳಿದಿರುವ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸ್ಥಾನಗಳನ್ನು ಭರ್ತಿ ಮಾಡಿ ಸದಸ್ಯರನ್ನು ನೇಮಕ ಮಾಡಲಾಗಿದೆ. ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಗೀತಾಂಜಲಿ ಎಮ್. ಸುವರ್ಣ ಮತ್ತು ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಕಾರ್ಯದರ್ಶಿಗಳಾಗಿ ಗುರುಪ್ರಸಾದ್ ಶೆಟ್ಟಿ ಕಟಪಾಡಿ ಮತ್ತು ಅನಿತಾ ಶ್ರೀಧರ್ ಕುಂದಾಪುರ ಹಾಗೂ ಜಿಲ್ಲಾ ವಕ್ತಾರರಾಗಿ ಕೆ.ರಾಘವೇಂದ್ರ ಕಿಣಿ ಕಡಿಯಾಳಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ: ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ‌ ಪೂಜೆ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ಮಹಿಳಾ ಘಟಕದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ದಯಾಕರ ಶಾಂತಿ ಬನ್ನಂಜೆ ಇವರ ಪೌರೋಹಿತ್ಯದಲ್ಲಿ ಭಜನಾ ಮಂದಿರದಲ್ಲಿ ನಡೆಯಿತು. ಸುಮಾರು 350ಕ್ಕೂ‌ ಮಿಕ್ಕಿ ಭಕ್ತಾದಿಗಳು ಶ್ರೀ ವರಮಹಾಲಕ್ಷ್ಮೀ ಪೂಜೆಯನ್ನು ಸಲ್ಲಿಸಿ ಭಜನೆ, ಸಾಮೂಹಿಕ ಅಷ್ಟೋತ್ತರ‌ ಮತ್ತು ಕುಂಕುಮಾರ್ಚನೆಯಲ್ಲಿ ಪಾಲ್ಗೊಂಡರು. ಮಹಾಪೂಜೆಯ ಬಳಿಕ ಅನ್ನ ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ,‌Continue reading “ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ: ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ‌ ಪೂಜೆ”