






ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆಯಂತೆ ‘ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜ’ ಅಭಿಯಾನದ ಪ್ರಯುಕ್ತ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಜಿಲ್ಲೆಯ ಪ್ರಮುಖರನ್ನು ಬೇಟಿಯಾಗಿ ರಾಷ್ಟ್ರ ಧ್ವಜವನ್ನು ಹಸ್ತಾಂತರಿಸಲಾಯಿತು.
ಮಣಿಪಾಲ್ ಯುನಿವರ್ಸಿಟಿಯ ಉಪ ಕುಲಾಧಿಪತಿ ಡಾ! ಹೆಚ್.ಎಸ್. ಬಲ್ಲಾಳ್, ಉಡುಪಿ ಜಿಲ್ಲಾ ಸಂಘ ಚಾಲಕ್ ನಾರಾಯಣ ಶೆಣೈ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ವಿಧ್ವಾಂಸ ಬನ್ನಂಜೆ ಬಾಬು ಅಮೀನ್, ‘ವೈದೇಹಿ’ ಕಾವ್ಯನಾಮದ ಖ್ಯಾತ ಸಾಹಿತಿ ಶ್ರೀಮತಿ ಜಾನಕಿ ಶ್ರೀನಿವಾಸಮೂರ್ತಿ, ಉಡುಪಿ ಜಿಲ್ಲಾ ಬಿಲ್ಡರ್ಸ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಮಾಂಡವಿ ಬಿಲ್ಡರ್ಸ್ ಎಂಡ್ ಡೆವಲಪರ್ಸ್ ಆಡಳಿತ ನಿರ್ದೇಶಕ ಜೆರ್ರಿ ವಿನ್ಸೆಂಟ್ ಡಯಾಸ್, ‘ಹರ್ಷ’ ಸಮೂಹ ಸಂಸ್ಥೆ ಹಾಗೂ ಪ್ರಕಾಶ್ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಸೂರ್ಯಪ್ರಕಾಶ್, ಉಡುಪಿ ಜಿಲ್ಲಾ ಬಳಕೆದಾರರ ವೇದಿಕೆಯ ಅಧ್ಯಕ್ಷ ಡಾ! ರವೀಂದ್ರನಾಥ ಶ್ಯಾನಭಾಗ್ ಮುಂತಾದ ಗಣ್ಯರಿಗೆ ರಾಷ್ಟ್ರ ಧ್ವಜವನ್ನು ವಿತರಿಸಲಾಯಿತು.
ಆಗಸ್ಟ್ 13ರ ಮುಂಜಾನೆಯಿಂದ ಆಗಸ್ಟ್ 15ರ ಸಂಜೆಯ ತನಕ ಪ್ರತೀ ಮನೆಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸುವ ಜೊತೆಗೆ ಎಲ್ಲಾ ಕಛೇರಿಗಳು, ಸಂಘ-ಸಂಸ್ಥೆಗಳು, ಎಲ್ಲಾ ಧರ್ಮ ಸಮುದಾಯಗಳ ಮಠ ಮಂದಿರ ದೇವಸ್ಥಾನಗಳು ಹಾಗೂ ಅಂಗಡಿ ಮುಂಗಟ್ಟುಗಳ ಮೇಲೆ ತ್ರಿವರ್ಣ ಧ್ವಜವನ್ನು ಅರಳಿಸಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಸಂಭ್ರಮಿಸುವಂತೆ ಕರೆ ನೀಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಪೆರ್ಣಂಕಿಲ ಶ್ರೀಶ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ನಗರಸಭಾ ಸದಸ್ಯ ಸಂತೋಷ್ ಜತ್ತನ್ ಉಪಸ್ಥಿತರಿದ್ದರು.