
ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ “ಹರ್ ಘರ್ ತಿರಂಗಾ” ಅಭಿಯಾನದಡಿ ಬಿಜೆಪಿ ಜಿಲ್ಲಾ ಮಾಧ್ಯಮ ವಿಭಾಗದ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿಯವರಿಗೆ ಉಡುಪಿ ಜಿಲ್ಲಾ ಪ್ರೆಸ್ ಕ್ಲಬ್ ನಲ್ಲಿ ರಾಷ್ಟ್ರ ಧ್ವಜವನ್ನು ಹಸ್ತಾಂತರಿಸಲಾಯಿತು.
ಅಗಸ್ಟ್ 13ರ ಬೆಳಿಗ್ಗೆಯಿಂದ ಅಗಸ್ಟ್ 15ರ ಸಂಜೆಯ ವರೆಗೆ ಸಮಸ್ತ ಜನತೆ ತಮ್ಮ ಮನೆಯ ಮೇಲೆ ಸಂಭ್ರಮದಿಂದ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಪ್ರಚಾರ ಮೂಲಕ ಜಾಗೃತಿ ಮೂಡಿಸುವಂತೆ ದೃಶ್ಯ ಮತ್ತು ಮುದ್ರಣ ಮಾಧ್ಯಮದ ಪ್ರತಿನಿಧಿ ಬಂಧುಗಳಲ್ಲಿ ವಿನಂತಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಉಡುಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ ಮತ್ತು ಜಿಲ್ಲಾ ದೃಶ್ಯ ಮತ್ತು ಮುದ್ರಣ ಮಾಧ್ಯಮದ ಪ್ರತಿನಿಧಿಗಳು ಉಪಸ್ಥಿತರಿದ್ದರು.