
ಉಡುಪಿ: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಲುವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಚೇರಿ ಕಡಿಯಾಳಿಯಿಂದ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ತನಕ ‘ಬೃಹತ್ ತಿರಂಗಾ ಯಾತ್ರೆ’ ನಡೆಯಿತು.
ತದನಂತರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ರವರು ಗಾಂಧೀಜಿ ಪುತ್ಥಳಿಗೆ ಹಾರಾರ್ಪಣೆಗೈದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿ ಸ್ವಾತಂತ್ರೋತ್ಸವದ ಶುಭಾಶಯಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ. ಉದಯ ಕುಮಾರ್ ಶೆಟ್ಟಿ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಅರ್. ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ರಾಜ್ಯ ಪದಾಧಿಕಾರಿಗಳಾದ ಶ್ರೀಮತಿ ಶಿಲ್ಪಾ ಜಿ. ಸುವರ್ಣ, ದಿನಕರ ಬಾಬು, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಪೆರ್ಣಂಕಿಲ ಶ್ರೀಶ ನಾಯಕ್ , ಬೈಕಾಡಿ ಸುಪ್ರಸಾದ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ , ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಮತ್ತು ಮಂಡಲಗಳ ಅಧ್ಯಕ್ಷರುಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಮತ್ತು ಸಂಚಾಲಕರು, ನಗರಸಭಾ ಸದಸ್ಯರು, ಪಂಚಾಯತ್ ಸದಸ್ಯರುಗಳು, ವಿವಿಧ ಸ್ತರದ ಸಮಿತಿಯ ಪದಾಧಿಕಾರಿಗಳು, ಸಮಿತಿ ಸದಸ್ಯರು, ನೂರಾರು ಸಂಖ್ಯೆಯಲ್ಲಿ 75 ಮೀಟರ್ ಉದ್ದದ ತ್ರಿವರ್ಣ ಧ್ವಜದ ಮೆರವಣಿಗೆಯ ‘ತಿರಂಗಾ ಯಾತ್ರೆ’ಯಲ್ಲಿ ಉಪಸ್ಥಿತರಿದ್ದರು.