

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆಯು ಸಂಘದ ವಠಾರದಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ರವರು ಧ್ವಜಾರೋಹಣವನ್ನು ನೆರವೇರಿಸಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿ ಹುತಾತ್ಮರಾದ ಸ್ವಾತಂತ್ರ್ಯ ಸೇನಾನಿಗಳನ್ನು ಸ್ಮರಿಸಿಕೊಂಡು, 75ನೇ ಸ್ವಾತಂತ್ರೋತ್ಸವದ ಶುಭಾಶಯಗಳನ್ನು ತಿಳಿಸಿದರು.
ಸಂಘದ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಮಾತನಾಡಿ ಅಸಂಖ್ಯಾತ ದೇಶಭಕ್ತ ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮ, ತ್ಯಾಗ ಮತ್ತು ಬಲಿದಾನದಿಂದ ದೊರೆತಿರುವ ಸ್ವಾತಂತ್ರ್ಯದ ಮಹತ್ವವನ್ನು ಅರಿಯುವ ಜೊತೆಗೆ ದೇಶ ರಕ್ಷಣೆಯಲ್ಲಿ ತೊಡಗಿರುವ ಯೋಧರನ್ನು ಸ್ಮರಿಸಿಕೊಂಡು, ದೇಶ ಭಕ್ತಿಯನ್ನು ಜಾಗೃತಗೊಳಿಸಿ ದೇಶದ ಏಕತೆ, ಅಖಂಡತೆ ಮತ್ತು ಅಭಿವೃದ್ಧಿಗೆ ನಮ್ಮ ಅಳಿಲು ಸೇವೆ ಸಲ್ಲಿಸೋಣ ಎಂದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಸಂಘದ ಮಾಜಿ ಅಧ್ಯಕ್ಷ ಕೆ.ಮಂಜಪ್ಪ ಸುವರ್ಣ, ಮಹಿಳಾ ಘಟಕದ ಸಂಚಾಲಕಿ ವಿಜಯಾ ಜಿ. ಬಂಗೇರ, ಸಂಘದ ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ಆಡಳಿತ ಸಮಿತಿ ಸದಸ್ಯರಾದ ಎ.ಮುದ್ದಣ್ಣ ಪೂಜಾರಿ, ರಮೇಶ್ ಕೋಟ್ಯಾನ್, ಭಾಸ್ಕರ ಕೋಟ್ಯಾನ್, ವಿನಯ್ ಕುಮಾರ್, ನಿತಿನ್ ಕುಮಾರ್, ಭಜನಾ ಸಹ ಸಂಚಾಲಕ ಶಂಕರ ಪೂಜಾರಿ, ಮಂದಿರದ ಸಹ ಅರ್ಚಕ ಜೀವನ್, ಮಹಿಳಾ ಘಟಕದ ಸಹ ಸಂಚಾಲಕಿಯರಾದ ಗೋದಾವರಿ ಎಮ್. ಸುವರ್ಣ, ದೇವಕಿ ಕೆ. ಕೋಟ್ಯಾನ್, ಕಾರ್ಯದರ್ಶಿ ಜಯಂತಿ ಹರೀಶ್, ಜತೆ ಕಾರ್ಯದರ್ಶಿ ಸವಿತಾ ಸಂತೋಷ್, ಸಂಘದ ಸದಸ್ಯರು ಮತ್ತು ಶ್ರೀ ಗುರು ಕುಣಿತ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ಸಂಘದ ಸದಸ್ಯ ಸುನಿಲ್ ಕುಮಾರ್ ಮತ್ತು ಅಶ್ವಿನಿ ದಂಪತಿಗಳಿಂದ ದೇಶ ಭಕ್ತಿ ಗೀತೆಗಳ ಕಾರ್ಯಕ್ರಮ ನಡೆಯಿತು.