Design a site like this with WordPress.com
Get started

ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರೇ ತಮ್ಮ ನಾಯಕರ ಮೇಲೆ ಅಟ್ಟಹಾಸ ಮೆರೆಯುತ್ತಿದ್ದಾರೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ,ಕೆ. ಸುಧಾಕರ್‌

ಆರ್‌ಎಸ್‌ಎಸ್‌ ಮತ್ತು ಸಾವರ್ಕರ್‌ ಬಗ್ಗೆ ಮಾತನಾಡುವುದು ಕಾಂಗ್ರೆಸ್‌ ದೌರ್ಬಲ್ಯ


ಬೆಂಗಳೂರು, ಭಾನುವಾರ, ಆಗಸ್ಟ್‌ 21: ಸತ್ಯಕ್ಕೆ ಎರಡು ಮುಖಗಳಿರುತ್ತವೆ. ಈಗ ಕಾಂಗ್ರೆಸ್‌ ಕಾರ್ಯಕರ್ತರೇ ಅವರ ನಾಯಕರ ಮೇಲೆ ಮುಗಿ ಬಿದ್ದಿದ್ದಾರೆ. *ಕೈ ಪಕ್ಷದ ನಾಯಕರು ಸಮಾಜದಲ್ಲಿ ಹೇಗೆ ಇರಬೇಕು ಅನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು* ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಹುಸಂಖ್ಯಾತರ ಬಗ್ಗೆ ಕಾಂಗ್ರೆಸ್‌ ನಾಯಕರು ಲಘುವಾಗಿ ಮಾತನಾಡಿರುವುದು ಕಾರ್ಯಕರ್ತರಿಗೆ ಕೋಪ ತರಿಸಿದೆ. ಭಾವೋದ್ವೇಗಕ್ಕೆ ಒಳಗಾಗಿ ಮೊಟ್ಟೆ ಎಸೆದಿದ್ದು ಖಂಡನಾರ್ಹ. ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರೇ ಈ ಕೃತ್ಯ ಮಾಡಿದ್ದಾರೆ. ಕಾಂಗ್ರೆಸ್‌ ನಾಯಕರು ಈಗಲಾದರೂ ಸಮಾಜದಲ್ಲಿ ಹೇಗೆ ನಡೆದುಕೊಳ್ಳಬೇಕು ಅನ್ನುವುದನ್ನು ಕಲಿತುಕೊಳ್ಳಲಿ ಎಂದು ಹೇಳಿದ್ದಾರೆ, ವಿಪಕ್ಷ ನಾಯಕ ಕಾರಿಗೆ *ಮೊಟ್ಟೆ ಎಸೆದವರ ವಿರುದ್ಧ ಸರ್ಕಾರ ಸರ್ಕಾರ ಕ್ರಮ ತೆಗೆದುಕೊಂಡಿದೆ. ಅದನ್ನು ಅಲ್ಲೇ ಬಿಡಬೇಕು. ಆದರೆ ಅದೇ ರಾಜಕಾರಣವನ್ನು ಮುಂದಕ್ಕೆ ತೆಗೆದುಕೊಂಡು ಹೋಗುವುದು ಶೋಭೆ ತರುವುದಿಲ್ಲ. ಕಾಂಗ್ರೆಸ್‌ ಕಾರ್ಯಕರ್ತನೆ ಈ ಕೆಲಸ ಮಾಡಿರುವುದರಿಂದ ಸಿದ್ದರಾಮಯ್ಯ ಹೇಳಿಕೆ ಏನಿರುತ್ತೆ ಅನ್ನುವ ಕುತೂಹಲವಿದೆ ಎಂದು ತಿಳಿಸಿದ್ದಾರೆ.


ಕಾಂಗ್ರೆಸ್‌ಗೆ ಆರ್‌ಎಸ್‌ಎಸ್‌ ಮತ್ತು ವೀರ್‌ ಸಾವರ್ಕರ್‌ ಬಗ್ಗೆ ಮಾತನಾಡುವುದು ದೌರ್ಬಲ್ಯ. ಇದು ಅವರ ಅಜ್ಞಾನವನ್ನು ತಿಳಿಸುತ್ತದೆ. ಅವರು ಬದಲಾಗದಿದ್ದರೆ ಜನರು ಬದಲಿಸುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.
ಬಿಜೆಪಿ 3 ವರ್ಷದ ಆಡಳಿತದ ಸಂಭ್ರಮವನ್ನು ಹಂಚಿಕೊಳ್ಳಲು ಸೆಪ್ಟಂಬರ್‌ 8 ರಂದು ಜನೋತ್ಸವ ಕಾರ್ಯಕ್ರಮ ನಡೆಸಲಾಗುತ್ತದೆ. ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಜೊತೆಗೆ ಹಲವು ರಾಷ್ಟ್ರೀಯ ನಾಯಕರು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಮುಖ್ಯಮಂತ್ರಿಗಳು, ಎಲ್ಲಾ ನಾಯಕರು, ಸಚಿವರು,ಶಾಸಕರು, ಕಾರ್ಯಕರ್ತರು ಇದರಲ್ಲಿ ಭಾಗಿಯಾಗಲಿದ್ದಾರೆ. 3 ಜಿಲ್ಲೆಯ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು 2 ರಿಂದ 3 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಹೇಳಿದರು.

ಜನೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರದ ಯೋಜನೆಗಳ ಫಲಾನುಭವಿಗಳು ಕೂಡ ಭಾಗಿಯಾಗಲಿದ್ದಾರೆ. ಸರ್ಕಾರದ ಕಾರ್ಯಕ್ರಮ ಮತ್ತು ಯೋಜನೆಗಳನ್ನು ಅಭಿನಂದಿಸಲು ಬರಲಿದ್ದಾರೆ ಎಂದು ತಿಳಿಸಿದ್ದಾರೆ.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Facebook photo

You are commenting using your Facebook account. Log Out /  Change )

Connecting to %s

%d bloggers like this: