Design a site like this with WordPress.com
Get started

ಸಶಕ್ತ ಬೂತ್’ ಸಂಕಲ್ಪದೊಂದಿಗೆ ಪಕ್ಷ ಸಂಘಟನೆಗೆ ವೇಗ ನೀಡಲು ಕುಯಿಲಾಡಿ ಕರೆ

ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ

ಉಡುಪಿ: ಚುನಾವಣಾ ಹೊಸ್ತಿಲಲ್ಲಿರುವ ಪ್ರಸಕ್ತ ಸನ್ನಿವೇಶದಲ್ಲಿ ‘ಸಶಕ್ತ ಬೂತ್’ ಸಂಕಲ್ಪದೊಂದಿಗೆ ಪಕ್ಷ ಸಂಘಟನೆಗೆ ಹೆಚ್ಚಿನ ವೇಗ ನೀಡಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಮಂಗಳವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯ ಬಿಜೆಪಿಯ ಯೋಜನೆಯಂತೆ ಮುಂಬರುವ ದಿನಗಳಲ್ಲಿ ಹಲವಾರು ಕಾರ್ಯ ಚಟುವಟಿಕೆಗಳು ನಡೆಯಲಿವೆ. ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮೂರು ತಂಡಗಳ ಪ್ರವಾಸ ರಾಜ್ಯಾದ್ಯಂತ ನಡೆಯಲಿದೆ. ಇದಕ್ಕೆ ಪೂರಕವಾಗಿ ಜಿಲ್ಲೆಯ ತಂಡ ಅತ್ಯಂತ ಕ್ರಿಯಾಶೀಲತೆಯಿಂದ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕಾಗಿದೆ.

ಸೆಪ್ಟೆಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ, ಸೆಪ್ಟೆಂಬರ್ 25ರಂದು ಪಂಡಿತ್ ದೀನದಯಾಳ್ ಉಪಾಧ್ಯಾಯ ಜಯಂತಿ ಹಾಗೂ ಅಕ್ಟೋಬರ್ 2ರಂದು ಗಾಂಧಿ ಜಯಂತಿ ಆಚರಣೆಯನ್ನು ಜಿಲ್ಲೆಯಾದ್ಯಂತ ಎಲ್ಲಾ ಮಂಡಲಗಳಲ್ಲಿ ಮತ್ತು ಬೂತ್ ಮಟ್ಟದಲ್ಲಿ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ಯೋಜನಾಬದ್ಧವಾಗಿ ಆಯೋಜಿಸಬೇಕು ಎಂದರು.

ಬೂತ್ ಸಶಸ್ತೀಕರಣದ ಕೆಲಸ ಕಾರ್ಯಗಳನ್ನು ಆದ್ಯತೆ ಮೇರೆಗೆ ಆಗಸ್ಟ್ 30ರೊಳಗೆ ಪೂರ್ತಿಗೊಳಿಸಬೇಕು. ಜಿಲ್ಲೆಯ ವಿವಿಧ ಮೋರ್ಚಾ, ಮಂಡಲ, ಪ್ರಕೋಷ್ಠಗಳ ಉಸ್ತುವಾರಿಗಳು ಹಾಗೂ ಮಹಾ ಶಕ್ತಿಕೇಂದ್ರಗಳ ಪ್ರಭಾರಿಗಳು ಪದಾಧಿಕಾರಿಗಳ ಸಹಕಾರದೊಂದಿಗೆ ಪ್ರತೀ ಮಾಸಿಕ ಸಭೆಗಳನ್ನು ಪರಿಣಾಮಕಾರಿಯಾಗಿ ಆಯೋಜಿಸಿ ವರದಿಗಳನ್ನು ಸಲ್ಲಿಸುವ ಜೊತೆಗೆ ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಸರಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವಲ್ಲಿ ಸಕ್ರಿಯರಾಗಬೇಕು ಎಂದರು.

ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆಗೆ 25 ವರ್ಷಗಳು ತುಂಬುವ ಹಿನ್ನೆಲೆಯಲ್ಲಿ ಆಗಸ್ಟ್ 25ರಂದು ಚಾಲನೆಗೊಳ್ಳಲಿರುವ ‘ಉಡುಪಿ ಜಿಲ್ಲಾ ರಜತೋತ್ಸವ’ ಆಚರಣೆಯಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿಯ ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಪೂರ್ಣ ಪ್ರಮಾಣದಲ್ಲಿ ಭಾಗವಹಿಸಿ ಜನವರಿ 25ರ ತನಕ ನಡೆಯುವ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ಅವರು ಕರೆ ನೀಡಿದರು.

ಶಾಸಕ ಕೆ.ರಘುಪತಿ ಭಟ್ ಮಾತನಾಡಿ ಉಡುಪಿ ಜಿಲ್ಲಾ ‘ರಜತೋತ್ಸವ ಆಚರಣೆ’ಯು ಆಗಸ್ಟ್ 25ರಿಂದ ಜನವರಿ 25ರ ವರೆಗೆ ನಡೆಯಲಿದೆ. ಇದರ ಅಂಗವಾಗಿ ಆಗಸ್ಟ್ 24ರಿಂದ ಸಾವಿರಾರು ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಿಂದ ಐತಿಹಾಸಿಕವಾಗಿ ನಡೆಯಲಿರುವ ‘ಅಗ್ನಿಪಥ್ ದೌಢ್’ ಹಾಗೂ ಆಗಸ್ಟ್ 25 ರಂದು ಮಧ್ಯಾಹ್ನ 2.30ಕ್ಕೆ ಉಡುಪಿಯ ಬೋರ್ಡ್ ಹೈಸ್ಕೂಲ್ ನಿಂದ ಅಜ್ಜರಕಾಡು ಮೈದಾನದವರೆಗೆ ನಡೆಯಲಿರುವ ‘ಪುರ ಮೆರವಣಿಗೆ’ ಹಾಗೂ ‘ಉಡುಪಿ ಜಿಲ್ಲಾ ರಜತೋತ್ಸವ’ದ ಉದ್ಘಾಟನಾ ಸಮಾರಂಭದಲ್ಲಿ ಪಕ್ಷದ ಪ್ರಮುಖರು, ಎಲ್ಲ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತ ಬಂಧುಗಳು, ಪಕ್ಷದ ಹಿತೈಷಿಗಳು ಹಾಗೂ ಸಾರ್ವಜನಿಕ ಬಂಧುಗಳು ಗರಿಷ್ಠ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ ಬೂತ್ ಸಶಸ್ತೀಕರಣ ಮತ್ತು ಪಕ್ಷದ ಸಂಘಟನಾತ್ಮಕ ವಿಚಾರಗಳ ಬಗ್ಗೆ ಹಾಗೂ ಮನೋಹರ್ ಎಸ್. ಕಲ್ಮಾಡಿ ಚುನಾವಣಾ ಪೂರ್ವ ಸಿದ್ಧತೆಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್, ಪಕ್ಷದ ಪ್ರಮುಖರು, ಬಿಜೆಪಿ ರಾಜ್ಯ, ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮತ್ತು ಮಂಡಲಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Facebook photo

You are commenting using your Facebook account. Log Out /  Change )

Connecting to %s

%d bloggers like this: