Design a site like this with WordPress.com
Get started

ಸಿದ್ದು ಹಿಂದೂ ವಿರೋಧಿ ಹೇಳಿಕೆಗಳೇ ಕಾಂಗ್ರೆಸ್ ಅಧ:ಪತನಕ್ಕೆ ನಾಂದಿ ಹಾಡಲಿದೆ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಮೈಯೆಲ್ಲಾ ಹಿಂದೂ ವಿರೋಧಿ ವಿಷ ತುಂಬಿಕೊಂಡಿರುವ ಮಾಜಿ ಸಿ.ಎಂ. ಸಿದ್ದರಾಮಯ್ಯನವರ ಹಿಂದೂ ವಿರೋಧಿ ಹೇಳಿಕೆಗಳೇ ಕಾಂಗ್ರೆಸ್ ಅಧ:ಪತನಕ್ಕೆ ನಾಂದಿ ಹಾಡಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಅಪ್ಪಟ ದೇಶ ಭಕ್ತ, ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ಹೆಸರೆತ್ತಲೂ ಯೋಗ್ಯತೆ ಇಲ್ಲದ ಸಿದ್ದರಾಮಯ್ಯ ಸದಾ ವಿವಾದಾತ್ಮಕ ಹೇಳಿಕೆಗಳಿಂದ ಸಮಾಜ ಒಡೆಯುವ ದುಷ್ಕೃತ್ಯದಲ್ಲಿ ತೊಡಗಿರುವುದು ಜಗಜ್ಜಾಹೀರಾಗಿದೆ. ‘ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಬ್ಯಾನರ್ ಯಾಕೆ ಹಾಕಿದ್ದೀರಿ’ ಎಂದಿರುವ ಸಿದ್ದುಗೆ ಹಿಂದೂ ಏರಿಯಾಕ್ಕೆContinue reading “ಸಿದ್ದು ಹಿಂದೂ ವಿರೋಧಿ ಹೇಳಿಕೆಗಳೇ ಕಾಂಗ್ರೆಸ್ ಅಧ:ಪತನಕ್ಕೆ ನಾಂದಿ ಹಾಡಲಿದೆ: ಕುಯಿಲಾಡಿ ಸುರೇಶ್ ನಾಯಕ್”

ರಾಜಸ್ಥಾನದಲ್ಲಿ ನಡೆದ ದಲಿತ ಬಾಲಕನ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆಯಾಗಲಿ: ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಆಗ್ರಹ

ಉಡುಪಿ: ರಾಜಸ್ಥಾನದಲ್ಲಿ ದಲಿತ ಬಾಲಕನ ಹತ್ಯೆ ನಡೆದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವ ವಿಚಾರ. ಜುಲೈ 25ರಂದು ಶಿಕ್ಷಕನ ಮಡಕೆಯ ನೀರನ್ನು ಮುಟ್ಟಿದ ಕಾರಣಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು ಹುಡುಗನಿಗೆ ಹೊಡೆಯುತ್ತಾರೆ. ಬಾಲಕನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ಮತ್ತು ಆ ಬಳಿಕ ಉದಯಪುರ ಆಸ್ಪತ್ರೆಯಲ್ಲಿ ದಾಖಲಿಸಲಾಗುತ್ತದೆ. ಒಂದು ತಿಂಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ 9 ವರ್ಷದ ಬಾಲಕ ಸಾವಿಗೀಡಾಗುತ್ತಾನೆ. ಬಾಲಕನ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕೆಂದು ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಆಗ್ರಹಿಸುತ್ತದೆ ಎಂದು ಬಿಜೆಪಿ ಜಿಲ್ಲಾContinue reading “ರಾಜಸ್ಥಾನದಲ್ಲಿ ನಡೆದ ದಲಿತ ಬಾಲಕನ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆಯಾಗಲಿ: ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಆಗ್ರಹ”

ಅಂಬಲಪಾಡಿ ಬಿಲ್ಲವ ಸೇವಾ ಸಂಘದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆಯು ಸಂಘದ ವಠಾರದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ರವರು ಧ್ವಜಾರೋಹಣವನ್ನು ನೆರವೇರಿಸಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿ ಹುತಾತ್ಮರಾದ ಸ್ವಾತಂತ್ರ್ಯ ಸೇನಾನಿಗಳನ್ನು ಸ್ಮರಿಸಿಕೊಂಡು, 75ನೇ ಸ್ವಾತಂತ್ರೋತ್ಸವದ ಶುಭಾಶಯಗಳನ್ನು ತಿಳಿಸಿದರು. ಸಂಘದ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಮಾತನಾಡಿ ಅಸಂಖ್ಯಾತ ದೇಶಭಕ್ತ ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮ, ತ್ಯಾಗ ಮತ್ತು ಬಲಿದಾನದಿಂದ ದೊರೆತಿರುವ ಸ್ವಾತಂತ್ರ್ಯದ ಮಹತ್ವವನ್ನು ಅರಿಯುವ ಜೊತೆಗೆ ದೇಶContinue reading “ಅಂಬಲಪಾಡಿ ಬಿಲ್ಲವ ಸೇವಾ ಸಂಘದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆ”

ಉಡುಪಿಯಲ್ಲಿ ಸಾವರ್ಕರ್ ಬ್ಯಾನರ್ ತೆರವುಗೊಳಿಸುವ ಎಸ್ಡಿಪಿಐ ಹುನ್ನಾರದ ಪುಂಡಾಟ ನಿಲ್ಲಿಸದಿದ್ದರೆ ತಕ್ಕ ಶಾಸ್ತಿ : ಕುಯಿಲಾಡಿ

ಉಡುಪಿಯ ಬ್ರಹ್ಮಗಿರಿ ವೃತ್ತದ ಬಳಿ ದೇಶ ಭಕ್ತರು ಅಳವಡಿಸಿರುವ ಅಪ್ರತಿಮ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಾವರ್ಕರ್ ರವರ ಬ್ಯಾನರನ್ನು ಕಾಂಗ್ರೆಸ್ ಹಾಗೂ ಕಾಂಗ್ರೆಸ್ ನ ಪಾಪದ ಕೂಸು ಎಸ್ಡಿಪಿಐ ಸೇರಿ ತೆರವುಗೊಳಿಸುವ ಹುನ್ನಾರದ ಬಗ್ಗೆ ತಿಳಿದುಬಂದಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಎರಡೆರಡು ಬಾರಿ ಕರಿ ನೀರಿನ ಶಿಕ್ಷೆ ಅನುಭವಿಸಿ ಛಲ ಬಿಡದ ಹೋರಾಟದಿಂದ ದೇಶಕ್ಕಾಗಿ ಹುತಾತ್ಮರಾದ ಅಪ್ಪಟ ದೇಶ ಭಕ್ತ ಸಾವರ್ಕರ್ ರವರ ಹೆಸರೆತ್ತಲೂ ಕಾಂಗ್ರೆಸ್ ಗೆ ಯೋಗ್ಯತೆ ಇಲ್ಲ. ದೇಶ ಭಕ್ತ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನದಿಂದContinue reading “ಉಡುಪಿಯಲ್ಲಿ ಸಾವರ್ಕರ್ ಬ್ಯಾನರ್ ತೆರವುಗೊಳಿಸುವ ಎಸ್ಡಿಪಿಐ ಹುನ್ನಾರದ ಪುಂಡಾಟ ನಿಲ್ಲಿಸದಿದ್ದರೆ ತಕ್ಕ ಶಾಸ್ತಿ : ಕುಯಿಲಾಡಿ”

ಎಮ್.ಇ.ಐ. ಅಧ್ಯಕ್ಷ ಕೆ.ಉದಯಕುಮಾರ್ ಶೆಟ್ಟಿ ಯವರಿಗೆ ಪರ್ಯಾಯ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ

ಉಡುಪಿ: ಕರ್ನಾಟಕ ಸರಕಾರದ ಸ್ವಾಮ್ಯದ ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇದರ ನೂತನ ಅಧ್ಯಕ್ಷ ಹಾಗೂ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರು ಪರ್ಯಾಯ ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರನ್ನು ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೇಟಿಯಾದರು. ಉತ್ತಮ ಕೆಲಸ ಕಾರ್ಯಗಳನ್ನು ಮಾಡುವಂತೆ ಸೂಚಿಸಿದ ಶ್ರೀಪಾದರು ಅನುಗ್ರಹ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ ಇದರ ಆಡಳಿತ ಸಮಿತಿContinue reading “ಎಮ್.ಇ.ಐ. ಅಧ್ಯಕ್ಷ ಕೆ.ಉದಯಕುಮಾರ್ ಶೆಟ್ಟಿ ಯವರಿಗೆ ಪರ್ಯಾಯ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ”

ಅಟಲ್ ಜೀ ಮೇರು ವ್ಯಕ್ತಿತ್ವ, ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ: ಕುಯಿಲಾಡಿ

ಉಡುಪಿ: ಶ್ರೇಷ್ಠ ಸಂಸದೀಯ ಪಟು, ಕವಿ ಹೃದಯದ, ಮೇರು ವ್ಯಕ್ತಿತ್ವದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಮಂಗಳವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಯವರ 4ನೇ ವರ್ಷದ ಪುಣ್ಯ ಸಂಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಟಲ್ ಜೀ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು. ಭಾರತೀಯ ಜನ ಸಂಘದ ನಂತರ ಭಾರತೀಯContinue reading “ಅಟಲ್ ಜೀ ಮೇರು ವ್ಯಕ್ತಿತ್ವ, ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ: ಕುಯಿಲಾಡಿ”

ಉಡುಪಿ ಜಿಲ್ಲಾ ಬಿಜೆಪಿಯಿಂದ ನಡೆದ ಯಶಸ್ವೀ ತಿರಂಗಾ ಯಾತ್ರೆ

ಉಡುಪಿ: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಲುವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಚೇರಿ ಕಡಿಯಾಳಿಯಿಂದ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ತನಕ ‘ಬೃಹತ್ ತಿರಂಗಾ ಯಾತ್ರೆ’ ನಡೆಯಿತು. ತದನಂತರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ರವರು ಗಾಂಧೀಜಿ ಪುತ್ಥಳಿಗೆ ಹಾರಾರ್ಪಣೆಗೈದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿ ಸ್ವಾತಂತ್ರೋತ್ಸವದ ಶುಭಾಶಯಗಳನ್ನು ನೀಡಿದರು. ಈ ಸಂದರ್ಭದಲ್ಲಿContinue reading “ಉಡುಪಿ ಜಿಲ್ಲಾ ಬಿಜೆಪಿಯಿಂದ ನಡೆದ ಯಶಸ್ವೀ ತಿರಂಗಾ ಯಾತ್ರೆ”

ಆಗಸ್ಟ್ 15ರಂದು ಉಡುಪಿ ಜಿಲ್ಲಾ ಬಿಜೆಪಿಯಿಂದ ‘ಬೃಹತ್ತಿರಂಗಾ ಯಾತ್ರೆ’

ಸ್ವಾತಂತ್ರ್ಯದ ಅಮೃತ‌ ಮಹೋತ್ಸವ ಆಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಆಗಸ್ಟ್ 15ರಂದು ಬೆಳಿಗ್ಗೆ 8.30ಕ್ಕೆ ಪಕ್ಷದ ಜಿಲ್ಲಾ ಕಛೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ. ಬೆಳಿಗ್ಗೆ 11.30ಕ್ಕೆ ಬಿಜೆಪಿ ಜಿಲ್ಲಾ ಕಛೇರಿ ಬಳಿಯಿಂದ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ವರೆಗೆ ‘ಬೃಹತ್ ತಿರಂಗಾ ಯಾತ್ರೆ’ ನಡೆಯಲಿದ್ದು, ಗಾಂಧಿ ಪ್ರತಿಮೆಗೆ ಹಾರಾರ್ಪಣೆಯೊಂದಿಗೆ ಸಮಾಪನಗೊಳ್ಳಲಿದೆ. ಈ ‘ತಿರಂಗಾ ಯಾತ್ರೆ’ಯಲ್ಲಿ ಪಕ್ಷದ ಪ್ರಮುಖರು, ಬಿಜೆಪಿ ರಾಜ್ಯ, ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾContinue reading “ಆಗಸ್ಟ್ 15ರಂದು ಉಡುಪಿ ಜಿಲ್ಲಾ ಬಿಜೆಪಿಯಿಂದ ‘ಬೃಹತ್ತಿರಂಗಾ ಯಾತ್ರೆ’”

ಎಮ್.ಇ.ಐ.‌ ನೂತನ ಅಧ್ಯಕ್ಷ ಕೆ.ಉದಯಕುಮಾರ್ ಶೆಟ್ಟಿಯವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದ ಜಿಲ್ಲಾ ಪದಾಧಿಕಾರಿಗಳ ತಂಡದಿಂದ ಅಭಿನಂದನೆ

ಉಡುಪಿ: ಕರ್ನಾಟಕ ಸರಕಾರದ ಸ್ವಾಮ್ಯದ ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇದರ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ‌ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ತಂಡದಿಂದ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಪೆರ್ಣಂಕಿಲ ಶ್ರೀಶ ನಾಯಕ್,‌‌ ಕಿಶೋರ್Continue reading “ಎಮ್.ಇ.ಐ.‌ ನೂತನ ಅಧ್ಯಕ್ಷ ಕೆ.ಉದಯಕುಮಾರ್ ಶೆಟ್ಟಿಯವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದ ಜಿಲ್ಲಾ ಪದಾಧಿಕಾರಿಗಳ ತಂಡದಿಂದ ಅಭಿನಂದನೆ”

ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮೆಟೆಡ್ ನೂತನ ಅಧ್ಯಕ್ಷರಾಗಿ ಕೆ.ಉದಯ ಕುಮಾರ್ ಶೆಟ್ಟಿ ಪದಗ್ರಹಣ

ಉಡುಪಿ: ಕರ್ನಾಟಕ ಸರಕಾರದ ಸ್ವಾಮ್ಯದ 77 ವರ್ಷಗಳ ಇತಿಹಾಸವಿರುವ ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇದರ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರ ಪದಗ್ರಹಣ ಸಮಾರಂಭವು ಬೆಂಗಳೂರು ಯಶವಂತಪುರದ ಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ನಡೆಯಿತು. ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು, ಒಳನಾಡ ಜಲಸಾರಿಗೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ರವರು ಕೆ.ಉದಯ ಕುಮಾರ್ ಶೆಟ್ಟಿಯವರ ಪದಗ್ರಹಣವನ್ನು ನೆರವೇರಿಸಿ, ಅಭಿನಂದಿಸಿ ಮಾತನಾಡಿದರು. ಸಂಸ್ಥೆಯ ನೂತನ ಅಧ್ಯಕ್ಷರಾಗಿ ಜಬಾಬ್ದಾರಿContinue reading “ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮೆಟೆಡ್ ನೂತನ ಅಧ್ಯಕ್ಷರಾಗಿ ಕೆ.ಉದಯ ಕುಮಾರ್ ಶೆಟ್ಟಿ ಪದಗ್ರಹಣ”