Design a site like this with WordPress.com
Get started

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಜಿಲ್ಲಾ ಬಿಜೆಪಿಯಿಂದ ರಾಷ್ಟ್ರ ಧ್ವಜ ಹಸ್ತಾಂತರ

ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ “ಹರ್ ಘರ್ ತಿರಂಗಾ” ಅಭಿಯಾನದಡಿ ಬಿಜೆಪಿ ಜಿಲ್ಲಾ ಮಾಧ್ಯಮ ವಿಭಾಗದ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿಯವರಿಗೆ ಉಡುಪಿ ಜಿಲ್ಲಾ ಪ್ರೆಸ್ ಕ್ಲಬ್ ನಲ್ಲಿ ರಾಷ್ಟ್ರ ಧ್ವಜವನ್ನು ಹಸ್ತಾಂತರಿಸಲಾಯಿತು. ಅಗಸ್ಟ್ 13ರ ಬೆಳಿಗ್ಗೆಯಿಂದ ಅಗಸ್ಟ್ 15ರ ಸಂಜೆಯ ವರೆಗೆ ಸಮಸ್ತ ಜನತೆ ತಮ್ಮ ಮನೆಯ ಮೇಲೆ ಸಂಭ್ರಮದಿಂದ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಪ್ರಚಾರ ಮೂಲಕ ಜಾಗೃತಿ ಮೂಡಿಸುವಂತೆ ದೃಶ್ಯ ಮತ್ತು ಮುದ್ರಣ ಮಾಧ್ಯಮದContinue reading “ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಜಿಲ್ಲಾ ಬಿಜೆಪಿಯಿಂದ ರಾಷ್ಟ್ರ ಧ್ವಜ ಹಸ್ತಾಂತರ”

ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜ’ : ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ರಾಷ್ಟ್ರ ಧ್ವಜ ವಿತರಣೆ

ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆಯಂತೆ ‘ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜ’ ಅಭಿಯಾನದ ಪ್ರಯುಕ್ತ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ‌ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಜಿಲ್ಲೆಯ ಪ್ರಮುಖರನ್ನು ಬೇಟಿಯಾಗಿ ರಾಷ್ಟ್ರ ಧ್ವಜವನ್ನು ಹಸ್ತಾಂತರಿಸಲಾಯಿತು. ಮಣಿಪಾಲ್ ಯುನಿವರ್ಸಿಟಿಯ ಉಪ ಕುಲಾಧಿಪತಿ ಡಾ! ಹೆಚ್.ಎಸ್. ಬಲ್ಲಾಳ್, ಉಡುಪಿ ಜಿಲ್ಲಾ ಸಂಘ ಚಾಲಕ್ ನಾರಾಯಣ ಶೆಣೈ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ವಿಧ್ವಾಂಸContinue reading “ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜ’ : ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ರಾಷ್ಟ್ರ ಧ್ವಜ ವಿತರಣೆ”

‘ಹರ್ ಘರ್ ತಿರಂಗಾ’ ಅಭಿಯಾನ : ತ್ರಿವರ್ಣ ಧ್ವಜ ಹಸ್ತಾಂತರಕ್ಕೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಚಾಲನೆ

ಉಡುಪಿ: ದೇಶದ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ’ಯ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ‘ಹರ್ ಘರ್ ತಿರಂಗಾ’ ಅಭಿಯಾನದಡಿ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಅರಳಿಸುವ ನಿಟ್ಟಿನಲ್ಲಿ ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ‌ ಪ್ರಮುಖರಾದ ಎ.ಪುಂಡಲೀಕ ಕಾಮತ್ ರವರಿಗೆ ಉಡುಪಿ ಶಾಸಕ ಕೆ.ರಘುಪತಿ ಭಟ್ ರಾಷ್ಟ್ರ ಧ್ವಜವನ್ನು ಹಸ್ತಾಂತರಿಸಿ ಆಗಸ್ಟ್ 13ರ ಮುಂಜಾನೆಯಿಂದ ಆಗಸ್ಟ್ 15ರ ಸಂಜೆಯ ತನಕ ದೇವಸ್ಥಾನ, ಸಂಘ-ಸಂಸ್ಥೆಗಳು ಹಾಗೂ ಪ್ರತೀ ಮನೆಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸುವ ಮೂಲಕ ಸ್ವಾತಂತ್ರ್ಯದContinue reading “‘ಹರ್ ಘರ್ ತಿರಂಗಾ’ ಅಭಿಯಾನ : ತ್ರಿವರ್ಣ ಧ್ವಜ ಹಸ್ತಾಂತರಕ್ಕೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಚಾಲನೆ”

ಅಂದಿನ ಕಾಂಗ್ರೆಸ್ಸಿಗೂ ಇಂದಿನ ನಕಲಿ ಕಾಂಗ್ರೆಸ್ಸಿಗೂ ಯಾವುದೇ ಸಂಬಂಧವಿಲ್ಲ; ಅಪಪ್ರಚಾರದ ಗೀಳಿನಿಂದ ಕಾಂಗ್ರೆಸ್ ಅಸಂಬದ್ಧ ಹೇಳಿಕೆ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಮಹಾತ್ಮಾ ಗಾಂಧೀಜಿ ಹಾಗೂ ಮಹಾನ್ ರಾಷ್ಟ್ರ ಭಕ್ತರ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯ ಸಂಗ್ರಾಮಕ್ಕೆ ದೇಶವಾಸಿಗಳ ಜೊತೆಗೆ ಬೆಂಬಲಿಸಿದ ಅಂದಿನ ರಾಜಕೀಯ ರಹಿತ ಮೂಲ ಕಾಂಗ್ರೆಸ್ಸಿಗೂ ಇಂದಿನ ನಕಲಿ ಕಾಂಗ್ರೆಸ್ಸಿಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿ ವಿರುದ್ಧ ಅಪಪ್ರಚಾರದ ಗೀಳಿನಿಂದ ಕಾಂಗ್ರೆಸ್ ಅಸಂಬದ್ಧ ಹೇಳಿಕೆಯಲ್ಲಿ ತೊಡಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಅಸಂಖ್ಯಾತ ದೇಶ ಭಕ್ತ ಸ್ವಾತಂತ್ರ್ಯ ಹೋರಾಟಗಾರರ ಕಠಿಣ ಪರಿಶ್ರಮ, ತ್ಯಾಗ ಹಾಗೂ ಬಲಿದಾನದ ಫಲವಾಗಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ.Continue reading “ಅಂದಿನ ಕಾಂಗ್ರೆಸ್ಸಿಗೂ ಇಂದಿನ ನಕಲಿ ಕಾಂಗ್ರೆಸ್ಸಿಗೂ ಯಾವುದೇ ಸಂಬಂಧವಿಲ್ಲ; ಅಪಪ್ರಚಾರದ ಗೀಳಿನಿಂದ ಕಾಂಗ್ರೆಸ್ ಅಸಂಬದ್ಧ ಹೇಳಿಕೆ: ಕುಯಿಲಾಡಿ ಸುರೇಶ್ ನಾಯಕ್”

ಅಪಘಾತಕ್ಕೊಳಗಾದ ಆತ್ರಾಡಿ ಚೆನ್ನಿಬೆಟ್ಟು ಆಶೀಶ್ ಶೆಟ್ಟಿಯವರಿಗೆ ಊರ ದಾನಿಗಳಿಂದ ಧನ ಸಹಾಯ ಹಸ್ತಾಂತರ

ಉಡುಪಿ: ಪರ್ಕಳದ ದೇವಿ ನಗರ ಬಳಿ ಇತ್ತೀಚಿಗೆ ಅಪಘಾತಕ್ಕೀಡಾಗಿ ತನ್ನ ಕೈಯನ್ನು ಕಳೆದುಕೊಂಡು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆತ್ರಾಡಿ ಚೆನ್ನಿಬೆಟ್ಟು ನಿವಾಸಿ ಆಶೀಶ್ ಶೆಟ್ಟಿಯವರಿಗೆ ಊರಿನ ದಾನಿಗಳಾದ ವಸಂತ ಶೆಟ್ಟಿ ಚೆನ್ನಿಬೆಟ್ಟು, ಸಾಧು ಪೂಜಾರಿ ಮದಗ, ದೀಪಕ್ ಪೂಜಾರಿ ಮದಗ, ಮಿಥುನ್ ಶೆಟ್ಟಿ ಮದಗ ಇವರ ನೇತೃತ್ವದಲ್ಲಿ ಗ್ರಾಮಸ್ಥರಿಂದ ಸಂಗ್ರಹಿಸಿದ ರೂ.2,06,500/- ಧನ ಸಹಾಯವನ್ನು ಸ್ಥಳೀಯ ಪ್ರಮುಖರಾದ ಶೇಖರ್ ಶೆಟ್ಟಿ ಮತ್ತು ಸತ್ಯಾನಂದ ನಾಯಕ್ ರವರ ಉಪಸ್ಥಿತಿಯಲ್ಲಿ ಅಶೀಶ್ ಶೆಟ್ಟಿಯವರ ತಂದೆ ಪ್ರಸಾದ್ ಶೆಟ್ಟಿContinue reading “ಅಪಘಾತಕ್ಕೊಳಗಾದ ಆತ್ರಾಡಿ ಚೆನ್ನಿಬೆಟ್ಟು ಆಶೀಶ್ ಶೆಟ್ಟಿಯವರಿಗೆ ಊರ ದಾನಿಗಳಿಂದ ಧನ ಸಹಾಯ ಹಸ್ತಾಂತರ”

ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ನೇಮಕ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ತೆರವಾಗಿರುವ ಮತ್ತು ಖಾಲಿ ಉಳಿದಿರುವ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸ್ಥಾನಗಳನ್ನು ಭರ್ತಿ ಮಾಡಿ ಸದಸ್ಯರನ್ನು ನೇಮಕ ಮಾಡಲಾಗಿದೆ. ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಗೀತಾಂಜಲಿ ಎಮ್. ಸುವರ್ಣ ಮತ್ತು ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಕಾರ್ಯದರ್ಶಿಗಳಾಗಿ ಗುರುಪ್ರಸಾದ್ ಶೆಟ್ಟಿ ಕಟಪಾಡಿ ಮತ್ತು ಅನಿತಾ ಶ್ರೀಧರ್ ಕುಂದಾಪುರ ಹಾಗೂ ಜಿಲ್ಲಾ ವಕ್ತಾರರಾಗಿ ಕೆ.ರಾಘವೇಂದ್ರ ಕಿಣಿ ಕಡಿಯಾಳಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ: ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ‌ ಪೂಜೆ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ಮಹಿಳಾ ಘಟಕದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ದಯಾಕರ ಶಾಂತಿ ಬನ್ನಂಜೆ ಇವರ ಪೌರೋಹಿತ್ಯದಲ್ಲಿ ಭಜನಾ ಮಂದಿರದಲ್ಲಿ ನಡೆಯಿತು. ಸುಮಾರು 350ಕ್ಕೂ‌ ಮಿಕ್ಕಿ ಭಕ್ತಾದಿಗಳು ಶ್ರೀ ವರಮಹಾಲಕ್ಷ್ಮೀ ಪೂಜೆಯನ್ನು ಸಲ್ಲಿಸಿ ಭಜನೆ, ಸಾಮೂಹಿಕ ಅಷ್ಟೋತ್ತರ‌ ಮತ್ತು ಕುಂಕುಮಾರ್ಚನೆಯಲ್ಲಿ ಪಾಲ್ಗೊಂಡರು. ಮಹಾಪೂಜೆಯ ಬಳಿಕ ಅನ್ನ ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ,‌Continue reading “ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ: ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ‌ ಪೂಜೆ”

ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿಯಾದ ಸಚಿವೆ ಶೋಭಾ ಕರಂದ್ಲಾಜೆ

ದೆಹಲಿ: ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರನ್ನು ಇಂದು ಸಂಸತ್ತಿನಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಯವರು ಭೇಟಿ ಮಾಡಿದರು. ಸಂಘ ಪರಿವಾರದ ಕಾರ್ಯಕರ್ತ ಶ್ರೀ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದುದಕ್ಕೆ ಅವರಿಗೆ ಧನ್ಯವಾದ ತಿಳಿಸಿ, ಕರಾವಳಿಯಲ್ಲಿ ನಡೆಯುತ್ತಿರುವ ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕೋರಿದರು.