
ಕಾಪು: ಮೋದೀಜಿ ಜನ್ಮದಿನದ ಅಂಗವಾಗಿ ಮಹಿಳಾಮೋರ್ಚ ವತಿಯಿಂದ ಆದರ್ಶ ಅಂಗನವಾಡಿ ಕಾರ್ಯಕ್ರಮದಡಿ ಯಲ್ಲಿ ಕುತ್ಯಾರಿನಲ್ಲಿ ಅಂಗನವಾಡಿ ದತ್ತು ಸ್ವೀಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ರಾಜ್ಯದ ಎಲ್ಲ ಮಂಡಲಗಳಲ್ಲಿ ಮಹಿಳಾಮೋರ್ಚ ವತಿಯಿಂದ ತಲಾ ಒಂದು ಅಂಗನವಾಡಿ ದತ್ತು ಸ್ವೀಕಾರ ಮಾಡಿ ಅಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಸುಸ್ಥಿರ ಅಂಗನವಾಡಿ ಮಾಡಿ ಸುಶಾಸನ ದಿನದಂದು ಅವರಿಗೆ ಬಿಟ್ಟುಕೊಡುವ ಆದರ್ಶ ಕಾರ್ಯಕ್ರಮ.
ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ಈ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಉಪಸ್ಥಿತರಿದ್ದರು. ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ ಕಾರ್ಯಕ್ರಮದ ಸ್ವರೂಪ ವಿವರಿಸಿದರು. ಕಾಪು ಮಂಡಲ ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ ಸ್ವಾಗತಿಸಿದರು. ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿಗಳಾದ ನೀತಾ ಗುರುರಾಜ್ , ಸುರೇಖ ಶೈಲೇಶ್ ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಕುತ್ಯಾರು ಪಂಚಾಯತ್ ಅಧ್ಯಕ್ಷರಾದ ಲತಾ ಆಚಾರ್ಯ, ಜಿಲ್ಲಾ ಪಂಚಾಯತ್ ನಿಕಟಪೂರ್ವ ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ ಪಕ್ಷದ ವಿವಿಧ ಪದಾಧಿಕಾರಿಗಳು, ಮಹಿಳಾಮೋರ್ಚ ಪದಾಧಿಕಾರಿಗಳು ಉಪಸ್ಥಿತರಿದ್ದರು.