
ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಶಿಕ್ಷಣ ವರ್ಗವು ಸೆ.24 ಮತ್ತು ಸೆ.25ರಂದು ಉಡುಪಿ ಮಥುರಾ ಕಾಂಫರ್ಟ್ಸ್ ಸಭಾಂಗಣದಲ್ಲಿ ಜರಗಲಿದೆ.
ಸೆ.24ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಇಂದನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಪ್ರಶಿಕ್ಷಣದ ಉದ್ಘಾಟನೆಯನ್ನು ನೆರವೇರಿಸುವರು. ಸೆ.25ರ ಸಂಜೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ.
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ.ಸುವರ್ಣ, ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ಎಮ್. ಸುಕುಮಾರ ಶೆಟ್ಟಿ ಹಾಗೂ ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.