News by: ಜನತಾಲೋಕವಾಣಿನ್ಯೂಸ್

ಉಡುಪಿ: ಜನಸಂಘದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನ ದಯಾಳ್ ಉಪಾಧ್ಯಾಯರವರ ಜೀವನಾದರ್ಶ ಹಾಗೂ ‘ಅಂತ್ಯೋದಯ’ ಪರಿಕಲ್ಪನೆ ಸರ್ವಕಾಲಿಕ ಮಹತ್ವವನ್ನು ಪಡೆದಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಸೆ.25 ರವಿವಾರ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ ಪ್ರಯುಕ್ತ ಪಂಡಿತ್ ಜೀ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಅವನ ಜೀವನ ಮೌಲ್ಯಗಳ ಗುಣಗಾನಗೈದರು.
ಪಕ್ಷದ ರಾಷ್ಟ್ರಿಯ ಅಧ್ಯಕ್ಷರ ಕರೆಯಂತೆ ‘ಸೇವಾ ಪಾಕ್ಷಿಕ’ ಅಭಿಯಾನದ ಅಂಗವಾಗಿ ಜಿಲ್ಲೆಯಾದ್ಯಂತ ಎಲ್ಲಾ ಮಂಡಲಗಳ ವ್ಯಾಪ್ತಿಯಲ್ಲಿ 13 ಅಂಶಗಳ ವೈವಿಧ್ಯಮಯ ಸೇವಾ ಚಟುವಟಿಕೆಗಳು ಅತ್ಯಂತ ಯಶಸ್ವಿಯಾಗಿ ನಡೆಯುತ್ತಿವೆ. ರವಿವಾರ ಪಂಡಿತ್ ಜೀ ಯವರ ಜನ್ಮ ದಿನಾಚರಣೆಯನ್ನು ಜಿಲ್ಲೆಯ ಎಲ್ಲಾ 1,111 ಬೂತ್ ಗಳಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಮೂಲಕ ಆಚರಿಸುವ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕೀ ಬಾತ್’ ಕಾರ್ಯಕ್ರಮದ ನೇರ ಪ್ರಸಾರವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಸಾಮೂಹಿಕವಾಗಿ ವೀಕ್ಷಿಸುವ ಪ್ರಕ್ರಿಯೆ ನಡೆದಿದೆ ಎಂದರು.
ಈ ಸಂದರ್ಭದಲ್ಲಿ ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಸುಪ್ರಸಾದ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಸಲೀಂ ಅಂಬಾಗಿಲು, ಬಿಜೆಪಿ ಜಿಲ್ಲಾ ಕಾಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಗುರ್ಮೆ, ಜಿಲ್ಲಾ ಸಾಮಾಜಿಕ ಜಾಲತಾಣದ ಚಂದ್ರಶೇಖರ್ ಪ್ರಭು, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಅಮೀನ್, ಮಂಜುನಾಥ್ ಮಣಿಪಾಲ, ಪ್ರಮುಖರಾದ ಮೋಹನ ಉಪಾಧ್ಯಾಯ ಮುಂತಾದವರು ಉಪಸ್ಥಿತರಿದ್ದರು.