
News by : ಜನತಾಲೋಕವಾಣಿನ್ಯೂಸ್
ಬಿಜೆಪಿ ಉಡುಪಿ ಗ್ರಾಮಾಂತರ ಮತ್ತು ರೈತ ಮೋರ್ಚಾದಿಂದ ಕೆರೆ ಸ್ಛಚ್ಚತೆ, ವನಮಹೋತ್ಸವ, ಅಡಿಕೆ ಸಸಿ ವಿತರಣೆ
ಪ್ರಧಾನಿ ನರೇಂದ್ರ ಮೋದಿ ಪರಿಕಲ್ಪನೆಯ ‘ಅಮೃತ ಸರೋವರ’ ಅಭಿಯಾನದಡಿ ಜಿಲ್ಲೆಯಾದ್ಯಂತ ಕೆರೆ, ನದಿಗಳಿಗೆ ಸ್ವಚ್ಛತಾ ಸೇವಾ ಕಾರ್ಯದ ಮೂಲಕ ಕಾಯಕಲ್ಪ ದೊರೆತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಬಿಜೆಪಿ ಉಡುಪಿ ಗ್ರಾಮಾಂತರ ಮತ್ತು ಬಿಜೆಪಿ ರೈತ ಮೋರ್ಚಾ ಉಡುಪಿ ಗ್ರಾಮಾಂತರ ಇದರ ಜಂಟಿ ಆಶ್ರಯದಲ್ಲಿ ‘ಸೇವಾ ಪಾಕ್ಷಿಕ’ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ 72ನೇ ಹುಟ್ಟು ಹಬ್ಬದ ಪ್ರಯುಕ್ತ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ನೇತೃತ್ವದಲ್ಲಿ ನಡೆದ ಉಪ್ಪೂರು ಶ್ರೀ ಕ್ಷೇತ್ರಪಾಲ ದೇವಸ್ಥಾನದ ಕೆರೆ ಸ್ವಚ್ಛತೆ, ವನಮಹೋತ್ಸವ ಮತ್ತು ಅಡಿಕೆ ಸಸಿ ವಿತರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಸೆ.17ರಂದು ಅರಂಭಗೊಂಡ ‘ಸೇವಾ ಪಾಕ್ಷಿಕ’ ಅಭಿಯಾನವು ಜಿಲ್ಲೆಯಾದ್ಯಂತ ವೈವಿಧ್ಯಮಯ ಸೇವಾ ಚಟುವಟಿಕೆಗಳೊಂದಿಗೆ ಯಶಸ್ಸನ್ನು ಕಂಡಿದೆ. ಅ.2 ರಂದು ಜಿಲ್ಲೆಯ ಎಲ್ಲಾ 1,111 ಬೂತ್ ಗಳಲ್ಲಿ ಗಾಂಧಿ ಜಯಂತಿ ಆಚರಣೆ, ಸ್ವಚ್ಛತಾ ಅಭಿಯಾನ ಹಾಗೂ ಜಿಲ್ಲಾ ಕಛೇರಿ ಮತ್ತು ಮಂಡಲ ಕೇಂದ್ರಗಳಲ್ಲಿ ಖಾದಿ ಮೇಳ ಆಯೋಜನೆಗೊಳ್ಳಲಿದೆ. ‘ಸೇವಾ ಪಾಕ್ಷಿಕ’ ಅಭಿಯಾನದ ಸಾರ್ಥಕ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳ ಸಮರ್ಪಣಾಭಾವದ ಸೇವೆ ಪ್ರಶಂಸನೀಯ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಸುಪ್ರಸಾದ್ ಶೆಟ್ಟಿ, ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಉಪ್ಪೂರು ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕೋಟ್ಯಾನ್, ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಉಪ್ಪೂರು, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಧೀರಜ್ ಕೆ.ಎಸ್., ರೈತ ಮೋರ್ಚಾ ಗ್ರಾಮಾಂತರ ಅಧ್ಯಕ್ಷ ಪ್ರವೀಣ್ ಉಪ್ಪೂರು, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಕೆ.ರತ್ನಾಕರ್, ಉಪ್ಪೂರು ಶ್ರೀ ಕ್ಷೇತ್ರಪಾಲ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ
ಉಮೇಶ್, ಜಿಲ್ಲಾ ರೈತ ಮೋರ್ಚಾ ಕಾರ್ಯಾಲಯ ಕಾರ್ಯದರ್ಶಿ ಜ್ಯೋತಿ ಕೃಷ್ಣಮೂರ್ತಿ, ಗ್ರಾಮ ಪಂಚಾಯತ್ ಸದಸ್ಯರಾದ ಗಾಯತ್ರಿ, ವಿದ್ಯಾ, ಉಪ್ಪೂರು ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾದ ಭಾಸ್ಕರ ಉಪ್ಪೂರು, ಪ್ರದೀಪ್ ಮಧ್ಯಸ್ಥ, ಲೋಕೇಶ್ ಮೆಂಡನ್, ಪ್ರಮುಖರಾದ ರಾಜೇಶ್ ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಸ್ಥಳಿಯರು ಉಪಸ್ಥಿತರಿದ್ದರು.