
News by: ಜನತಾಲೋಕವಾಣಿನ್ಯೂಸ್
ಉಡುಪಿ: ಹಿಂದೂ ಪರ ನಾಯಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ನಡೆದ ದಾಳಿ ಯತ್ನವನ್ನು ಖಂಡಿಸಿರುವ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಆರೋಪಿಗಳ ಶೀಘ್ರ ಬಂಧನಕ್ಕೆ ತುರ್ತು ಕ್ರಮ ಜರಗಿಸುವಂತೆ ರಾಜ್ಯ ಗೃಹ ಇಲಾಖೆಯನ್ನು ಆಗ್ರಹಿಸಿದ್ದಾರೆ.
ಇತ್ತೀಚೆಗೆ ಕೇಂದ್ರ ಸರಕಾರ ಪಿ.ಎಫ್.ಐ ಸಹಿತ ಒಂಬತ್ತು ಮತಾಂಧ ಭಯೋತ್ಪಾದಕ ದೇಶದ್ರೋಹಿ ಜಿಹಾದಿ ಸಂಘಟನೆಗಳನ್ನು ನಿಷೇಧಿಸಿರುವ ಕ್ರಮದಿಂದ ಕಂಗೆಟ್ಟಿರುವ ಜಿಹಾದಿ ಮನಸ್ಥಿತಿಯ ದುಷ್ಟಶಕ್ತಿಗಳು ಅಟ್ಟಹಾಸವನ್ನು ಮೆರೆಯಲು ಇಂತಹ ನಪುಂಸಕ ಕೃತ್ಯದಲ್ಲಿ ತೊಡಗಿವೆ.
ಮಂಗಳೂರಿನಿಂದ ಪಡೀಲ್ ಮಾರ್ಗವಾಗಿ ಕಾರಿನಲ್ಲಿ ತೆರಳುವ ಸಂದರ್ಭದಲ್ಲಿ ಅ.13ರ ತಡ ರಾತ್ರಿ ಈ ದುಷ್ಕೃತ್ಯ ನಡೆದಿದ್ದು, ಜಿಹಾದಿಗಳ ಕಾರಿನ ನೊಂದಣಿ ಕೇರಳ ರಾಜ್ಯದ್ದಾಗಿದೆ ಎಂದು ತಿಳಿದು ಬಂದಿದೆ.
ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಪ್ರಕರಣವನ್ನು ಗಂಬೀರವಾಗಿ ಪರಿಗಣಿಸಿ ಶಾಸಕ ಹರೀಶ್ ಪೂಂಜಾರವರಿಗೆ ಸೂಕ್ತ ಭದ್ರತೆ ಒದಗಿಸುವ ಜೊತೆಗೆ ಮತಾಂಧ ಜಿಹಾದಿ ಮಾನಸಿಕತೆಯ ಇಂತಹ ಭಯೋತ್ಪಾದಕ ಸಮಾಜಘಾತುಕ ಶಕ್ತಿಗಳ ಹೆಡೆಮುರಿಕಟ್ಟಲು ಶೀಘ್ರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.