
News by: ಜನತಾಲೋಕವಾಣಿನ್ಯೂಸ್
ಉಡುಪಿ: ಕೊಡಗಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧಾ ಕೂಟದಲ್ಲಿ ಉಡುಪಿಯ ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಇದರ ವಿಧ್ಯಾರ್ಥಿಗಳು ಭಾಗವಹಿಸಿ 41 ಚಿನ್ನ, 30 ಬೆಳ್ಳಿ, 19 ಕಂಚಿನ ಪದಕಗಳನ್ನು ಪಡೆದು ಟೀಮ್ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಪ್ರಶಸ್ತಿ ವಿಜೇತ ಕರಾಟೆ ಪಟುಗಳಿಗೆ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅವರು ಅಂಬಲಪಾಡಿ ದೇವಳದಲ್ಲಿ ಆಶೀರ್ವದಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಮುಖ್ಯ ಶಿಕ್ಷಕ ರೆಂಶಿ ವಾಮನ್ ಪಾಲನ್, ಕಾರ್ಯದರ್ಶಿ ಸೆನ್ಸೈ ಮೇಘಾ, ಕೋಶಾಧಿಕಾರಿ ಸೆನ್ಸೈ ಚೈತನ್ಯ ಹಾಗೂ ಕರಾಟೆ ಕಪ್ಪು ಪಟ್ಟಿ ವಿದ್ಯಾರ್ಥಿಗಳಾದ ನಿಶಾಂತ್, ರಾಹಿಲ್, ಕಾರ್ತಿಕ್, ಅರ್ಮಾನ್, ರಿಶಾಲ್ ವಿಶ್ವಜಿತ್ ಮತ್ತು ಪ್ರಶಸ್ತಿ ವಿಜೇತ ಕರಾಟೆ ಪಟುಗಳು ಉಪಸ್ಥಿತರಿದ್ದರು.