ಜನ ಸಂಕಲ್ಪ ಸಮಾವೇಶದ ಪೂರ್ವಭಾವಿ ಸಭೆ

News by: ಜನತಾಲೋಕವಾಣಿನ್ಯೂಸ್



ಕಾಪು: ನವೆಂಬರ್ 7 ನೇ ತಾರೀಕು ಕಾಪು ಕ್ಷೇತ್ರಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ಇವರ ನೇತ್ರತ್ವದಲ್ಲಿ ನಡೆಯುವ ಜನ ಸಂಕಲ್ಪ ಸಮಾವೇಶದ ಪೂರ್ವಭಾವಿ ಸಭೆ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಯಿತು. ವಿವಿಧ ಶಕ್ತಿಕೇಂದ್ರಗಳ ಜವಾಬ್ದಾರಿ ಹೊಂದಿರುವ ಪದಾಧಿಕಾರಿಗಳು ಹಾಗೂ ವಿವಿಧ ಪಂಚಾಯತ್ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು ಉಪಸ್ಥಿತರಿದ್ದರು. ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಜಿಲ್ಲಾ ಮಹಿಳಾಮೋರ್ಚ ಅಧ್ಯಕ್ಷರಾದ ವೀಣಾ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಕ್ತಿಕೇಂದ್ರ ಉಸ್ತುವಾರಿಗಳ ಜವಾಬ್ದಾರಿಯನ್ನು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ವಿವರಿಸಿ ಪ್ರತೀ ಬೂತ್ ಗಳಲ್ಲಿ ಇರುವ ಫಲಾನುಭವಿಗಳನ್ನು ಸಂಪರ್ಕಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕರೆ ನೀಡಿದರು. ಕಾಪು ಕ್ಷೇತ್ರದ ಚುನಾವಣಾ ಪೂರ್ವಭಾವಿಯಾಗಿ ನಡೆಯುವ ಈ ಸಭೆಯಲ್ಲಿ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಲು ಎಲ್ಲ ಪದಾಧಿಕಾರಿಗಳು ಶ್ರಮವಹಿಸಲು ಕರೆ ನೀಡಿದರು.

Leave a comment

Design a site like this with WordPress.com
Get started