
News By: ಜನತಾಲೋಕವಾಣಿನ್ಯೂಸ್
ನ.7 ಕಾಪುವಿನಲ್ಲಿ ‘ಜನಸಂಕಲ್ಪ ಸಮಾವೇಶ’, ಬೈಂದೂರಿನಲ್ಲಿ ‘ಫಲಾನುಭವಿಗಳ ಸಮಾವೇಶ’; ಉಡುಪಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟದ ಬೇಡಿಕೆ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ, ನ.3: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನ.7ರಂದು ಕಾಪು ಬಸ್ ನಿಲ್ದಾಣದ ಬಳಿ ಬೆಳಿಗ್ಗೆ ಗಂಟೆ 10.30ಕ್ಕೆ ನಡೆಯಲಿರುವ ‘ಜನಸಂಕಲ್ಪ ಸಮಾವೇಶ’ದಲ್ಲಿ 20 ಸಾವಿರ ಮಂದಿ ಹಾಗೂ ಬೈಂದೂರಿನ ಮುಳ್ಳಿಕಟ್ಟೆಯಲ್ಲಿ ಸಂಜೆ ಗಂಟೆ 4.00ಕ್ಕೆ ನಡೆಯಲಿರುವ ರೂ.1318 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ‘ಫಲಾನುಭವಿಗಳ ಸಮಾವೇಶ’ದಲ್ಲಿ 25 ಸಾವಿರ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಗುರುವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ಈ ಎರಡೂ ಕಾರ್ಯಕ್ರಮಗಳಲ್ಲೂ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪರವರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ಬೂತ್ ಮಟ್ಟದಲ್ಲೂ ಸಭೆ ನಡೆಸಲಾಗಿದ್ದು ಎಲ್ಲೆಡೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದರು.