ಕಾಪು ಮಂಡಲ ಯುವ ಮೋರ್ಚಾ, ಮಹಿಳಾ ಮೋರ್ಚಾ – ಜನಸಂಕಲ್ಪ ಸಮಾವೇಶದ ಪೂರ್ವಭಾವಿ ಸಭೆ

NEWS BY: ಜನತಾಲೋಕವಾಣಿನ್ಯೂಸ್

ಉಡುಪಿ: ಚುನಾವಣಾ ಹೊಸ್ತಿಲಲ್ಲಿರುವ ಸಂದರ್ಭದಲ್ಲಿ ನ.7ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಂಡದ ನೇತೃತ್ವದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಕಾಪು ಬಸ್ ನಿಲ್ದಾಣದ ಬಳಿ ನಡೆಯಲಿರುವ ‘ಜನಸಂಕಲ್ಪ ಸಮಾವೇಶ’ವು ಅತ್ಯಂತ ಮಹತ್ವಪೂರ್ಣವಾಗಿದ್ದು ಬಿಜೆಪಿ ಯುವ ಮೋರ್ಚಾ, ಮಹಿಳಾ ಮೋರ್ಚಾ ಸಹಿತ ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಸಂಘಟಿತರಾಗಿ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಹಾಗೂ ಸಾರ್ವಜನಿಕ ಬಂಧುಗಳು ಗರಿಷ್ಠ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಬದ್ಧತೆಯಿಂದ ಶ್ರಮವಹಿಸಿ, ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಕಾಪು ಮಂಡಲಾಧ್ಯಕ್ಷ ಶ್ರೀಕಾಂತ ನಾಯಕ್ ಹೇಳಿದರು.

ಅವರು ನ.3ರಂದು ಬಿಜೆಪಿ ಕಾಪು ಮಂಡಲ ಕಚೇರಿಯಲ್ಲಿ ನಡೆದ ಯುವ ಮೋರ್ಚಾ ಮತ್ತು ಮಹಿಳಾ ಮೋರ್ಚಾ ಪದಾಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈಗಾಗಲೇ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾರ್ಗದರ್ಶನದಲ್ಲಿ ವಿವಿಧ ಜವಾಬ್ದಾರಿಗಳ ನಿರ್ವಹಣೆಯ ಹೊಣೆಯನ್ನು ನಿಗದಿತ ತಂಡಗಳಿಗೆ ವಹಿಸಲಾಗಿದೆ. ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಅತ್ಯಂತ ಕ್ರಿಯಾಶೀಲತೆಯಿಂದ ಕರ್ತವ್ಯದಲ್ಲಿ ತೊಡಗಿಸಿಕೊಂಡು ಜನಸಂಕಲ್ಪ ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸಲು ಕೈಜೋಡಿಸಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಕಾಪು ಮಂಡಲ ಪ್ರಧಾನ‌ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಕಾಪು ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ, ಕಾಪು ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಾ ಶೆಟ್ಟಿ ಹಾಗೂ ಕಾಪು ಮಂಡಲ ಪದಾಧಿಕಾರಿಗಳು ಮತ್ತು ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started