
News by: ಜನತಾಲೋಕವಾಣಿನ್ಯೂಸ್
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಶಿಕ್ಷಣ ವರ್ಗವು ನ.14 ಮತ್ತು 15ರಂದು ಮಣಿಪಾಲದ ಸರಳೇಬೆಟ್ಟು ಶ್ರೀ ಉಮಾ ಮಹೇಶ್ವರ ದೇವಸ್ಥಾನ ಶಿವಪಾಡಿ ಇದರ ಸಭಾಂಗಣದಲ್ಲಿ ನಡೆಯಲಿದೆ.
ನ.14ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಲಿದ್ದಾರೆ.
ನ.15 ರಂದು ಮಧ್ಯಾಹ್ನ ಗಂಟೆ 12.30ಕ್ಕೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ.ಉದಯಕುಮಾರ್ ಶೆಟ್ಟಿ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಮಹಿಳಾ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆಯೊಂದಿಗೆ ಕಾರ್ಯಕ್ರಮ ಸಮಾಪನಗೊಳ್ಳಲಿದೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.