
News by: ಜನತಾಲೋಕವಾಣಿನ್ಯೂಸ್
ಕಾಪು: ಕಾಪು ಮಂಡಲದ ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯುವ ವಿಶೇಷ ಕಾರ್ಯಕಾರಿಣಿ ಸಭೆ ಇಂದು ಕಾಪು ವೀರಭದ್ರ ಸಭಾ ಭವನದಲ್ಲಿ ನಡೆಯಿತು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಾರ್ಯಕಾರಿಣಿಯ ಮಹತ್ವ ವಿವರಿಸಿ ಕಳೆದ ಮೂರು ತಿಂಗಳ ಕಾರ್ಯಕ್ರಮಗಳ ಬಗ್ಗೆ ಅವಲೋಕನ ನಡೆಸಿದರು. ಮುಂಬರುವ ಚುನಾವಣೆಯಲ್ಲಿ ಕಾಪು ಕ್ಷೇತ್ರದಲ್ಲಿ ಭಾರತೀಯ ಜನತಾಪಾರ್ಟಿಯ ವಿಜಯ ಪತಾಕೆ ಹಾರಿಸಲು ಸಿಧ್ಧರಾಗಲು ಕರೆ ನೀಡಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಉದ್ಘಾಟನೆ ಮಾಡಿ ಪಕ಼್ಷದ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಶಾಸಕರಾದ ಲಾಲಾಜಿವರು ಮಾತನಾಡಿ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಮುಂದಿನ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗುವಂತೆ ಕರೆ ನೀಡಿದರು. ರಾಜ್ಯಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಪಕ್ಷ ಸಂಘಟನೆಯ ಬಗ್ಗೆ ಕಾರ್ಯಕರ್ತರು ಮುಂದಿನ ದಿನಗಳಲ್ಲಿವಿಶೇಷ ಒತ್ತು ನೀಡಲು ಕರೆ ನೀಡಿದರು. ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಅನಿಲ್ ಶೆಟ್ಟಿ ಉಪಸ್ಥಿತರಿದ್ದರು. ಮಂಡಲ ಪ್ರಭಾರಿಗಳಾದ ರವೀಂದ್ರ ಮಡಿವಾಳ್ ರವರು ಮುಂದಿನ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ ಸಮಾರೋಪ ಮಾತನಾಡಿದರು. ಮಂಡಲ ಪ್ರಧಾನಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಕಾರ್ಯಕ್ರಮ ನಿರೂಪಿಸಿದರು. ಮಂಡಲ ಕಾರ್ಯದರ್ಶಿ ಮಾಲಿನಿ ಶೆಟ್ಟಿ ಸ್ವಾಗತಿಸಿದರೆ ಮಂಡಲ ಉಪಾಧ್ಯಕ್ಷರಾದ ಚಂದ್ರಶೇಖರ ಕೋಟ್ಯಾನ್ ಧನ್ಯವಾದ ಸಮರ್ಪಿಸಿದರು.