Design a site like this with WordPress.com
Get started

ಅನಧಿಕೃತ ಸಭೆ, ಹೇಳಿಕೆಗಳನ್ನು ಸಹಿಸಲ್ಲ: ಭಾಜಪ ಮುಖಂಡರಿಗೆ ಕುಯಿಲಾಡಿ ಎಚ್ಚರಿಕೆ

News By: ಜನತಾಲೋಕವಾಣಿನ್ಯೂಸ್

ಕುಂದಾಪುರ: ಪಕ್ಷದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ತೀರ್ಮಾನವನ್ನು ಪಕ್ಷ ಹಾಗೂ ವರಿಷ್ಠರು ತೀರ್ಮಾನಿಸಲಿದ್ದಾರೆ. ಪ್ರತಿ ಕಾರ್ಯಕರ್ತನಿಗೂ ಟಿಕೆಟ್ ಕೇಳುವ ಅವಕಾಶ ಇದೆ. ಆದರೆ ಎಲ್ಲಿ, ಯಾರನ್ನ ಕೇಳಬೇಕು ಅಲ್ಲಿಯೇ ಕೇಳಬೇಕೇ ಹೊರತು ನನಗೆ ಟಿಕೆಟ್ ಆಗಿದೆ ಎಂದು ಗೊಂದಲ ನಿರ್ಮಾಣ ಮಾಡುವುದು ಸರಿಯಲ್ಲ. ಪಕ್ಷದ ಹಿತಕ್ಕೆ ತೊಡಕಾಗುವ ಅನಧಿಕೃತ ಸಭೆ, ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸೋದಿಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಎಚ್ಚರಿಕೆ ನೀಡಿದ್ದಾರೆ.

ಹೆಮ್ಮಾಡಿಯ ಖಾಸಗಿ ಹೋಟೇಲ್‌ನಲ್ಲಿ ಡಿ.13ರ ಸಂಜೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಟನೆಗಾಗಿ ಕೆಲಸ ಮಾಡುವ ಯಾರನ್ನೆ ಆಗಲಿ ಸ್ವಾಗತಿಸುತ್ತೇವೆ. ತಳಮಟ್ಟದ ಸಂಘಟನೆ ಇರುವ ಬಿಜೆಪಿಯಲ್ಲಿ ಎಲ್ಲರಿಗೂ ಸಮಾನ ಅವಕಾಶ ಇದೆ. ಗುಜರಾತ್ ಹಾಗೂ ಉತ್ತರಕಾಂಡ್ ರಾಜ್ಯದ ಚುನಾವಣಾ ಮಾದರಿಯಲ್ಲಿ ರಾಜ್ಯದಲ್ಲಿಯೂ ಬದಲಾವಣೆಯ ನಿರೀಕ್ಷೆಗಳು ಇದೆ. 3-4 ಬಾರಿ ಶಾಸಕರಾದವರು, ಹೊಸಬರಿಗೆ ಅವಕಾಶ ನೀಡುವ ಸ್ವಯಂ ತೀರ್ಮಾನ ಕೈಗೊಳ್ಳಬೇಕು. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆ ಹಾಗೂ ಹಿಂದುತ್ವ ಪರವಾದ ಅಲೆ ಪ್ರಬಲವಾಗಿರುವ ಕಾರಣದಿಂದಾಗಿ ಜಾತಿ ಸಮೀಕರಣಗಿಂತ, ಪಕ್ಷದ ತತ್ವ, ಸಿದ್ದಾಂತ ಒಪ್ಪಿಕೊಳ್ಳುವ ಅಭ್ಯರ್ಥಿಗಳಿಗೆ ಅವಕಾಶ ದೊರಕುವ ಸಾಧ್ಯತೆಗಳನ್ನು ಅಲ್ಲಗಳಿಯುವಂತಿಲ್ಲ ಎಂದರು.

ಬೈಂದೂರು ಸೇರಿದಂತೆ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷದಿಂದ ಅಭ್ಯರ್ಥಿಗಳು ಯಾರು ಎನ್ನುವುದು ಇನ್ನೂ ಅಂತಿಮವಾಗಿಲ್ಲ. ಆದರೆ ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ನಮಗೆ ಆಗಿದೆ ಪಕ್ಷ ತಿರುಗಲು ಹೇಳಿದೆ ಎನ್ನುವ ಮೂಲಕ ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ. ಪಕ್ಷ ಇದನ್ನು ಗಂಭೀರವಾಗಿ ಪರಿಗಣಿಸಲಿದ್ದು, ಇಂತಹವರ ವಿರುದ್ಧ ನೋಟಿಸು ನೀಡಿ, ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಬೈಂದೂರು ಕ್ಷೇತ್ರದ ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿಯವರು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಕ್ಷೇತ್ರದ ಜನರಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಪಕ್ಷದ ಶಾಸಕರಾಗಿರುವುದರಿಂದಾಗಿ ಅವರೇ ನಮ್ಮ ನಾಯಕರಾಗಿದ್ದಾರೆ. 243 ಬೂತ್‌ಗಳಲ್ಲೂ ಪಕ್ಷ ಸಶಕ್ತವಾಗಿ ಕೆಲಸ ಮಾಡುತ್ತಿದೆ.

ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ಹಾಗೂ ಬೂತ್ ಮಟ್ಟದಲ್ಲಿ ಸಂಘಟನೆಯ ಅವಲೋಕನ ನಡೆಸಲಾಗಿದೆ. ಜಿಲ್ಲೆಯ ಎಲ್ಲ 5 ಕ್ಷೇತ್ರಗಳ ಶಾಸಕರು ಉತ್ತಮವಾಗಿದ್ದಾರೆ. ಸ್ಥಳಿಯಾಡಳಿತ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ, ವಿಧಾನಸಭೆ, ಲೋಕಸಭೆ, ವಿಧಾನಪರಿಷತ್ ಚುನಾವಣೆಗಳಲ್ಲಿ ಪಕ್ಷಕ್ಕೆ ಬಹುಮತ ಇರುವುದರಿಂದ ಮುಂದಿನ ಚುನಾವಣೆಯಲ್ಲಿಯೂ ಪಕ್ಷದ ಅಭ್ಯರ್ಥಿಗಳು ನಿಚ್ಚಳವಾಗಿ ಗೆಲುವು ಸಾಧಿಸಲಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಹಗಲುಗನಸು ಕಾಣುವುದು ಬೇಡ ಎಂದರು.

ಮತದಾರರು ಉತ್ತರಿಸುತ್ತಾರೆ: ಮುತಾಲಿಕ್ ಗೆ ಕುಯಿಲಾಡಿ ಖಡಕ್‌ ನುಡಿ:

ಬಿಜೆಪಿಯದು ಡೊಂಗಿ ಹಿಂದುತ್ವ ಎನ್ನುವ ಪ್ರಮೋದ್ ಮುತಾಲಿಕ್ ಅವರು ಚುನಾವಣೆಗೆ ಸ್ಪರ್ಧಿಸಿದಲ್ಲಿ, ಕಾರ್ಕಳ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರು ಫಲಿತಾಂಶದಲ್ಲಿ ಉತ್ತರ ಕೊಡುತ್ತಾರೆ. ಸಚಿವ ಸುನೀಲ್ ಕುಮಾರ್ ಪ್ರಖರ ಹಿಂದುತ್ವವಾದಿಯಾಗಿದ್ದು, ಸಂಘಟನೆ ಹಾಗೂ ಅಭಿವೃದ್ಧಿಯಲ್ಲಿ ಕಾರ್ಕಳವನ್ನು ರಾಜ್ಯದಲ್ಲಿಯೇ ಮುಂಚೂಣಿಯಲ್ಲಿ ಇರಿಸಿದ್ದಾರೆ. ಮುತಾಲಿಕ್ ಅವರ ಬಗ್ಗೆ ಗೌರವ ಇದೆ. ಇದು ಖಂಡಿತ ಅವರ ತೀರ್ಮಾನವಲ್ಲ; ಕೆಲ ವಿಘ್ನ ಸಂತೋಷಿಗಳು, ಗೊಂದಲ ಸೃಷ್ಟಿಸಲು ಅವರನ್ನು ಅಭ್ಯರ್ಥಿಯಾಗಿ ಬಿಂಬಿಸಲು ಹೊರಟಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಬೈಂದೂರು ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯದರ್ಶಿನಿ ದೇವಾಡಿಗ, ಪ್ರಕಾಶ್ ಪೂಜಾರಿ ಜಡ್ಡು, ಕೋಶಾಧಿಕಾರಿ ಅಶೋಕ ಕುಮಾರ ಶೆಟ್ಟಿ ಸಂಸಾಡಿ, ಜಿಲ್ಲಾ ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ದಾವೂದ್ ಇದ್ದರು.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

%d bloggers like this: