
News by: ಜನತಾಲೋಕವಾಣಿನ್ಯೂಸ್
ಕಾಪು: ಬೂತ್ ವಿಜಯ ಅಭಿಯಾನದ ರಾಜ್ಯ ಸಂಚಾಲಕರು, ರಾಜ್ಯ ಸರಕಾರದ ಹಿಂದುಳಿದ ವರ್ಗ ಹಾಗೂ ಸಮಾಜಕಲ್ಯಾಣ ಖಾತೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿಕೇಂದ್ರ ಸಭೆಯಲ್ಲಿ ಭಾಗವಹಿಸಿ ಮಾರ್ಗದರ್ಶನ ಮಾಡಿದರು. ಹಾಗೂ ಬೂತ್ ಸಂಖ್ಯೆ 54 ರಲ್ಲಿ ಅಶೋಕ್ ಶೆಟ್ಟಿಯವರ ಮನೆಯಲ್ಲಿ ಪಕ್ಷದ ಧ್ವಜ ಹಾರಿಸಿದರು. ಕಾರ್ಯಕರ್ತರಿಗೆ ಕಾರ್ಯಕ್ರಮಗಳ ಮಾಹಿತಿ ನೀಡಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪ್ರಸ್ತಾವನೆಗೈದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ರಾಷ್ಟ್ರೀಯ ಹಿಂದುಳಿದ ವರ್ಗ ಮೋರ್ಚ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಜಿಲ್ಲಾ ಪ್ರಧಾನಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕ್ರಷ್ಣ ರಾವ್ ಶಕ್ತಿಕೇಂದ್ರ ಪ್ರಮುಖರಾದ ಪ್ರಜ್ವಲ್ ಹೆಗ್ಡೆ ಹಾಗೂ ರಾಜೇಶ್ ಉಪಸ್ಥಿತರಿದ್ದರು. ತಾರಾ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಮಂಡಲ ಮಹಿಳಾ ಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಹಿಂದುಳಿದ ವರ್ಗಗಳ ಮೋರ್ಚ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ, ಪಂಚಾಯತ್ ಸದಸ್ಯರುಗಳು, ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.