Design a site like this with WordPress.com
Get started

ರಾಜ್ಯದ ಜನತೆಗೆ ಬಿಜೆಪಿಯೇ ಭರವಸೆ: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ

ಜಿಲ್ಲಾ ಬಿಜೆಪಿಯಿಂದ ‘ವಿಜಯ ಸಂಕಲ್ಪ ಅಭಿಯಾನ’ದ ಸ್ಟಿಕ್ಕರ್ ಬಿಡುಗಡೆ

News By: ಜನತಾಲೋಕವಾಣಿನ್ಯೂಸ್

ಉಡುಪಿ: ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉಡುಪಿ ಜಿಲ್ಲೆಯ ಐದೂ ಸ್ಥಾನಗಳನ್ನು ಗರಿಷ್ಠ ಅಂತರದಿಂದ ಗೆಲ್ಲುವ ಜೊತೆಗೆ ರಾಜ್ಯದಲ್ಲಿ 150 ಕ್ಷೇತ್ರಗಳ ಗೆಲುವಿನ ಮೂಲಕ ಮಗದೊಮ್ಮೆ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯುವುದು ನಿಶ್ಚಿತ ಎಂದು ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್ ಬನ್ನಂಜೆ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ‘ವಿಜಯ ಸಂಕಲ್ಪ ಅಭಿಯಾನ’ದ ಸ್ಟಿಕ್ಕರ್ ಮತ್ತು ಗೋಡೆ ಬರಹವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಬಿಜೆಪಿ ಜನಪರ ಆಡಳಿತ, ವಿನೂತನ ಯೋಜನೆಗಳು ಮತ್ತು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಜನತೆಯ ಮುಂದಿಟ್ಟು ಮತ ಯಾಚಿಸುತ್ತಿದೆ. ಆದರೆ ಕಾಂಗ್ರೆಸ್ ಪಕ್ಷ ಸುಳ್ಳನ್ನೇ ಬಂಡವಾಳವನ್ನಾಗಿರಿಸಿ, ಅಪಪ್ರಚಾರ ಮತ್ತು ಬೋಗಸ್ ಭಾಗ್ಯಗಳ ಆಸೆ ತೋರಿಸಿ ಜನರನ್ನು ಯಾಮಾರಿಸಲು ಯತ್ನಿಸುತ್ತಿದೆ. ಜನತೆ ಪ್ರಬುದ್ಧರಾಗಿದ್ದು ಜನವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ಸಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಜ.21ರಂದು ಜಿಲ್ಲೆಯಾದ್ಯಂತ ಚಾಲನೆಗೊಂಡಿರುವ ‘ವಿಜಯ ಸಂಕಲ್ಪ ಅಭಿಯಾನ’ದಲ್ಲಿ ಪಕ್ಷದ ಪ್ರಮುಖರು, ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಮಸ್ತ ಕಾರ್ಯಕರ್ತ ಬಂಧುಗಳು ಇನ್ನಷ್ಟು ಹುಮ್ಮಸ್ಸಿನಿಂದ ತೊಡಗಿಸಿಕೊಂಡು ಅಭಿಯಾನವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ವಕ್ತಾರ ಹಾಗೂ ಅಭಿಯಾನದ ಜಿಲ್ಲಾ ಸಹ ಸಂಚಾಲಕ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಷ್ಮಿತಾ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಸಾಮಾಜಿಕ ಜಾಲತಾಣ ವಿಭಾಗದ ಚಂದ್ರಶೇಖರ್ ಪ್ರಭು, ಉಡುಪಿ ವಿಧಾನಸಭಾ ಕ್ಷೇತ್ರದ ವಿಸ್ತಾರಕ ಗೋಕುಲ್ ಕೃಷ್ಣ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಅಭಿಯಾನದ ಮಂಡಲ ಸಂಚಾಲಕ ಅನಿಲ್ ಶೆಟ್ಟಿ ಮಾಂಬೆಟ್ಟು, ಉಡುಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಅಭಿಯಾನದ ಮಂಡಲ ಸಂಚಾಲಕ ಸಚಿನ್ ಪೂಜಾರಿ, ಅಭಿಯಾನದ ಉಡುಪಿ ನಗರ ಮಂಡಲ ಸಂಚಾಲಕ ಕಿಶೋರ್ ಕುಮಾರ್ ಕರಂಬಳ್ಳಿ, ನಗರ ಮಂಡಲ ಕಾರ್ಯದರ್ಶಿ ಆನಂದ್ ಸುವರ್ಣ ಮುಂತಾದವರು ಉಪಸ್ಥಿತರಿದ್ದರು.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

%d bloggers like this: