ವಿಧಾನಸಭಾ ಚುನಾವಣಾ ಅಭ್ಯರ್ಥಿ : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಿಗೆ ಮಂಡಲವಾರು ಅಭಿಪ್ರಾಯ ಸಂಗ್ರಹಣಾ ಮತದಾನದ ವರದಿ ಹಸ್ತಾಂತರ

ಉಡುಪಿ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸೂಚನೆಯಂತೆ ವಿಧಾನಸಭಾ ಅಭ್ಯರ್ಥಿಗಳ ಬಗ್ಗೆ ಮಾ.31ರಂದು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಕ್ಷದ ಶಕ್ತಿಕೇಂದ್ರ ಮತ್ತು ಮೇಲ್ಪಟ್ಟ ಪದಾಧಿಕಾರಿಗಳು ಹಾಗೂ ಇತರ ಪ್ರಮುಖರ ಮಂಡಲವಾರು ಅಭಿಪ್ರಾಯದ ಮತದಾನದ ವರದಿಯನ್ನು (ಪೋಲಿಂಗ್ ರಿಪೋರ್ಟ್) ಬಿಜೆಪಿ ರಾಜ್ಯ ತಂಡ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರಿಗೆ ಹಸ್ತಾಂತರಿಸಿತು. ಈ ಸಂದರ್ಭದಲ್ಲಿ ರಾಜ್ಯ ತಂಡದ ನೇತೃತ್ವ ವಹಿಸಿದ ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನೆ, ವಿಧಾನ ಪರಿಷತ್ ಉಪContinue reading “ವಿಧಾನಸಭಾ ಚುನಾವಣಾ ಅಭ್ಯರ್ಥಿ : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಿಗೆ ಮಂಡಲವಾರು ಅಭಿಪ್ರಾಯ ಸಂಗ್ರಹಣಾ ಮತದಾನದ ವರದಿ ಹಸ್ತಾಂತರ”

ಪ್ರಜಾಪ್ರಭುತ್ವ ಮಾದರಿಯಲ್ಲಿ ಬಿಜೆಪಿ ಅಭಿಪ್ರಾಯ ಸಂಗ್ರಹಣೆ ರಾಜಕೀಯ ಕ್ಷೇತ್ರದಲ್ಲೇ ಐತಿಹಾಸಿಕ ಹೆಜ್ಜೆ : ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನೆ

ಉಡುಪಿ: ಭಾರತೀಯ ಜನತಾ ಪಾರ್ಟಿ ತನ್ನ ಪಕ್ಷದ ಸಂವಿಧಾನದ ಚೌಕಟ್ಟಿನೊಳಗೆ ಹಮ್ಮಿಕೊಂಡಿರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗಳಲ್ಲಿ ಒಂದಾಗಿರುವ ಶಕ್ತಿಕೇಂದ್ರ ಮತ್ತು ಮೇಲ್ಪಟ್ಟ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಣೆ ಅಭಿಯಾನವು ರಾಜಕೀಯ ಪಕ್ಷಗಳಲ್ಲೇ ಒಂದು ಐತಿಹಾಸಿಕ ಹೆಜ್ಜೆಯಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನೆ ಹೇಳಿದರು. ಅವರು ಮಾ.31ರಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ವಿಧಾನಸಭಾ ಚುನಾವಣಾ ಮಂಡಲ ಶಹ ಅಭಿಪ್ರಾಯ ಸಂಗ್ರಹಣೆ ಸಭೆಯಲ್ಲಿ ರಾಜ್ಯContinue reading “ಪ್ರಜಾಪ್ರಭುತ್ವ ಮಾದರಿಯಲ್ಲಿ ಬಿಜೆಪಿ ಅಭಿಪ್ರಾಯ ಸಂಗ್ರಹಣೆ ರಾಜಕೀಯ ಕ್ಷೇತ್ರದಲ್ಲೇ ಐತಿಹಾಸಿಕ ಹೆಜ್ಜೆ : ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನೆ”

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶ್ರೀರಾಮನವಮಿ ಆಚರಣೆ

ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಇಂದು ಶ್ರೀರಾಮ ನವಮಿಯನ್ನು ಆಚರಿಸಲಾಯಿತು. ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು ಮತ್ತು ಪಕ್ಷದ ಮುಖಂಡರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಬಿಜೆಪಿ ಗೆಲುವು ನಿಶ್ಚಿತ; ಕಾಂಗ್ರೆಸ್ ಸೋಲು ಖಚಿತ : ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಮೇ 10ರಂದು ಕರ್ನಾಟಕ ರಾಜ್ಯ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಗೆ ಜಿಲ್ಲೆಯ ಐದು ಸ್ಥಾನಗಳ ಸಹಿತ ರಾಜ್ಯದಲ್ಲಿ 150ಕ್ಕೂ ಹೆಚ್ಚಿನ ಸ್ಥಾನಗಳ ಗೆಲುವು ಖಚಿತ; ಉಚಿತ ಪೊಳ್ಳು ಭಾಗ್ಯಗಳ ಆಮಿಷ ಒಡ್ಡಿರುವ ಭ್ರಷ್ಟ ಕಾಂಗ್ರೆಸ್ಸಿಗೆ ಸೋಲು ಖಚಿತ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಐತಿಹಾಸಿಕ ಮೀಸಲಾತಿ ಮತ್ತು ಒಳ ಮೀಸಲಾತಿ ಘೋಷಣೆಯ ಸಹಿತ ವಿವಿಧ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಹಾಗೂContinue reading “ಬಿಜೆಪಿ ಗೆಲುವು ನಿಶ್ಚಿತ; ಕಾಂಗ್ರೆಸ್ ಸೋಲು ಖಚಿತ : ಕುಯಿಲಾಡಿ ಸುರೇಶ್ ನಾಯಕ್”

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೂಹೂರ್ತ ಫಿಕ್ಸ್

News By : ಜನತಾಲೋಕವಾಣಿನ್ಯೂಸ್ ಬೆಂಗಳೂರು: ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯು ಇದೇ ಬರುವ 10 ಮೇ 2023ರಂದು ನಡೆಯಲಿದೆ ಎಂದು ಚುನಾವಣಾ ಆಯೋಗವು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ. ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿಯೂ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು ಮೇ 10ರಂದು ಮತದಾನ ನಡೆಸಿ ಮೇ13ರಂದೇ ಫಲಿತಾಂಶ ಘೋಷಣೆಯಾಗಲಿದೆ. ಎಪ್ರಿಲ್ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಕರ್ನಾಟಕದಲ್ಲಿ ಈ ಬಾರಿ ಒಟ್ಟು 5.22Continue reading “ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೂಹೂರ್ತ ಫಿಕ್ಸ್”

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಅನರ್ಹತೆ ಪ್ರಜಾಪ್ರಭುತ್ವಕ್ಕೆ ಸಂದ ಗೌರವ: ಕುಯಿಲಾಡಿ ಸುರೇಶ್ ನಾಯಕ್

News By: ಜನತಾಲೋಕವಾಣಿನ್ಯೂಸ್ ಉಡುಪಿ: ಭಾರತದಲ್ಲಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ಇದೆ ಎಂದು ಲಂಡನ್ ವಿಶ್ವವಿದ್ಯಾನಿಲಯದಲ್ಲಿ ಹೇಳಿಕೆ ನೀಡಿ ದೇಶದ ಮಾನ ಹರಾಜು ಹಾಕಿದ್ದ ಮಾಜಿ ಸಂಸದ ಹಾಗೂ ಕಾಂಗ್ರೆಸ್ಸಿನ ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ‘ಎಲ್ಲಾ ಕಳ್ಳರ ಹೆಸರೆಲ್ಲಾ ಮೋದಿ ಎಂದೇ ಇರುತ್ತದೆ ಏಕೆ’ ಎಂದು ಕೋಲಾರದಲ್ಲಿ 2019ರಲ್ಲಿ ನೀಡಿದ್ದ ಹೇಳಿಕೆಗೆ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿಯವರಿಗೆ 2 ವರ್ಷಗಳ ಜೈಲುವಾಸ ಶಿಕ್ಷೆಯನ್ನು ವಿಧಿಸಿರುವುದು ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿContinue reading “ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಅನರ್ಹತೆ ಪ್ರಜಾಪ್ರಭುತ್ವಕ್ಕೆ ಸಂದ ಗೌರವ: ಕುಯಿಲಾಡಿ ಸುರೇಶ್ ನಾಯಕ್”

ಕಟಪಾಡಿ ಬೂತ್ ಸಂಖ್ಯೆ 81 ರಲ್ಲಿ ಕಾರ್ಯಕರ್ತರ ಸಭೆ

News By: ಜನತಾಲೋಕವಾಣಿನ್ಯೂಸ್ ಕಾಪು: ಬಿಜೆಪಿ ಕಾಪು ಮಂಡಲದ ಕಟಪಾಡಿ ಗ್ರಾಮ‌ಪಂಚಾಯತ್ ವ್ಯಾಪ್ತಿಯ ವಾರ್ಡ್ ಸಂಖ್ಯೆ 81 ರಲ್ಲಿ ಕಾರ್ಯಕರ್ತರ ಚುನಾವಣಾ ಪೂರ್ವಭಾವಿ ಸಭೆ ನಡೆಯಿತು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಬಿಜೆಪಿಯ ಇತಿಹಾಸದ ಬಗ್ಗೆ, ಪ್ರಸ್ತುತ ಬಿಜೆಪಿ ಆಡಳಿತದ ಬಗ್ಗೆ ಹಾಗೂ ಮುಂದೆ ಬಿಜೆಪಿ ಚುನಾವಣೆ ಗೆಲ್ಲುವ ಅನಿವಾರ್ಯತೆಯ ಬಗ್ಗೆ ವಿಸ್ತಾರವಾದ ಮಾಹಿತಿ ನೀಡಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿಯವರು ಮಾತನಾಡಿ ಪಕ್ಷದ ಗೆಲುವಿಗೆ ಶ್ರಮಿಸಲು ಕರೆ ನೀಡಿದರು. ಬೂತ್ ಅಧ್ಯಕ್ಷರಾದContinue reading “ಕಟಪಾಡಿ ಬೂತ್ ಸಂಖ್ಯೆ 81 ರಲ್ಲಿ ಕಾರ್ಯಕರ್ತರ ಸಭೆ”

ರಾಜ್ಯದ ಅರಶಿನ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ತಕ್ಷಣ ಸ್ಪಂದಿಸಿದ ಕೇಂದ್ರ ಸರ್ಕಾರ- ಶೋಭಾ ಕರಂದ್ಲಾಜೆ.

ಬೆಂಗಳೂರು: ಅರಶಿನ ಬೆಳೆಗೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತದ‌ ಕಾರಣ ಮಾರುಕಟ್ಟೆ ಮದ್ಯಸ್ಥಿಕೆ‌ ಯೋಜನೆಯಡಿಯಲ್ಲಿ ಅರಶಿನ ಬೆಳೆಯನ್ನು ಖರೀದಿಸಬೇಕೆಂದು ರಾಜ್ಯದ ಅರಶಿನ ಬೆಳೆಗಾರರ ನಿಯೋಗ ಕಳೆದ ವಾರವಷ್ಟೆ ನನಗೆ ಮನವಿ ಸಲ್ಲಿಸಿ, ಅರಶಿನ ಬೆಳೆಗಾರರನ್ನು ಸಂಕಷ್ಟದಿಂದ ಪಾರು ಮಾಡಬೇಕೆಂದು ಮನವಿ‌ ಮಾಡಿದ್ದರು. ಕರ್ನಾಟಕ ರಾಜ್ಯ ಸರ್ಕಾರವು ಸಹ ಕೇಂದ್ರ ಸರ್ಕಾರಕ್ಕೆ ಈ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಿತ್ರು. ಮನವಿಗೆ ಸ್ಪಂದಿಸಿ ನಾನು ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕಾಗಿ ಆದೇಶಿಸಿದ್ದೆ. ಶೀಘೃವಾಗಿ‌‌ ಕೇಂದ್ರದಿಂದ‌ ಆದೇಶ ಹೊರಡಿಸಿ, ಅರಿಸಿಣ ಬೆಳೆಯ ರೈತರ ಕಷ್ಟಕ್ಕೆContinue reading “ರಾಜ್ಯದ ಅರಶಿನ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ತಕ್ಷಣ ಸ್ಪಂದಿಸಿದ ಕೇಂದ್ರ ಸರ್ಕಾರ- ಶೋಭಾ ಕರಂದ್ಲಾಜೆ.”

ಜನರಿಗೆ ಮೋಸ ಮಾಡಲು ಗ್ಯಾರಂಟಿ ಕಾರ್ಡ್ ಹಂಚುವ ಕಾಂಗ್ರೆಸ್ ಪಕ್ಷ: ಶೋಭಾ ಕರಂದ್ಲಾಜೆ

News By: ಜನತಾಲೋಕವಾಣಿನ್ಯೂಸ್ ಬೆಂಗಳೂರು: ಕಾಂಗ್ರೆಸ್‍ನವರು ಜನರನ್ನು ಮರುಳು ಮಾಡಲು, ಜನರಿಗೆ ಮೋಸ ಮಾಡಲು ಗ್ಯಾರಂಟಿ ಕಾರ್ಡ್ ಹಂಚುತ್ತಿದ್ದಾರೆ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಕು! ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ನೀವು 2013ರಿಂದ 2018ರವರೆಗೆ ಅಧಿಕಾರ ನಡೆಸಿದ್ದೀರಿ. ಆಗ ನೀವು ಒಂದು ಸಮುದಾಯದ ಓಲೈಕೆಗಾಗಿContinue reading “ಜನರಿಗೆ ಮೋಸ ಮಾಡಲು ಗ್ಯಾರಂಟಿ ಕಾರ್ಡ್ ಹಂಚುವ ಕಾಂಗ್ರೆಸ್ ಪಕ್ಷ: ಶೋಭಾ ಕರಂದ್ಲಾಜೆ”

ಕಟಪಾಡಿ ಬೂತ್ ಸಂಖ್ಯೆ 85 ರಲ್ಲಿ ಕಾರ್ಯಕರ್ತರ ಮತ್ತು ಮತದಾರರ ಸಭೆ

News By: ಜನತಾಲೋಕವಾಣಿನ್ಯೂಸ್ ಕಾಪು: ಬಿಜೆಪಿ ಕಾಪು ಮಂಡಲದ ಕಟಪಾಡಿ ಗ್ರಾಮ‌ಪಂಚಾಯತ್ ವ್ಯಾಪ್ತಿಯ ವಾರ್ಡ್ ಸಂಖ್ಯೆ 85 ರಲ್ಲಿ ಕಾರ್ಯಕರ್ತರು ಮತ್ತು ಮತದಾರರ ಚುನಾವಣಾ ಪೂರ್ವಭಾವಿ ಸಭೆ ನಡೆಯಿತು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಬಿಜೆಪಿಯ ಇತಿಹಾಸದ ಬಗ್ಗೆ, ಪ್ರಸ್ತುತ ಬಿಜೆಪಿ ಆಡಳಿತದ ಬಗ್ಗೆ ಹಾಗೂ ಮುಂದೆ ಬಿಜೆಪಿ ಚುನಾವಣೆ ಗೆಲ್ಲುವ ಅನಿವಾರ್ಯತೆಯ ಬಗ್ಗೆ ವಿಸ್ತಾರವಾದ ಮಾಹಿತಿ ನೀಡಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿಯವರು ಮಾತನಾಡಿ ಪಕ್ಷದ ಗೆಲುವಿಗೆ ಶ್ರಮಿಸಲು ಕರೆ ನೀಡಿದರು.Continue reading “ಕಟಪಾಡಿ ಬೂತ್ ಸಂಖ್ಯೆ 85 ರಲ್ಲಿ ಕಾರ್ಯಕರ್ತರ ಮತ್ತು ಮತದಾರರ ಸಭೆ”

Design a site like this with WordPress.com
Get started