
News By: ಜನತಾಲೋಕವಾಣಿನ್ಯೂಸ್
ಕಾಪು: ಬೊಮ್ಮರಬೆಟ್ಟು ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಭೆ ಇಂದು ನಡೆಯಿತು. ಬೂತ್ ವಿಜಯ ಅಭಿಯಾನ ಹಾಗೂ ವಿಜಯ ಸಂಕಲ್ಪ ಅಭಿಯಾನದ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ರವರು ವರದಿ ಪಡೆದು ಮುಂದೆ ಮಾಡಬೇಕಾದ ಕಾರ್ಯಚಟುವಟಿಕೆಗಳ ಮಾಹಿತಿ ನೀಡಿದರು. ಶಾಸಕರಾದ ಲಾಲಾಜಿ ಆರ್ ಮೆಂಡನ್ ಹಿರಿಯಡ್ಕ ಪಂಚಾಯತ್ ವ್ಯಾಪ್ತಿಯಲ್ಲಿ ತಮ್ಮ ಅವಧಿಯಲ್ಲಿ ಆದ ಸುಮಾರು 19 ಕೋಟಿಯಷ್ಟು ಕಾಮಗಾರಿಗಳ ವಿವರ ನೀಡಿ ಮುಂದೆಯೂ ಗ್ರಾಮದ ಅಭಿವೃದ್ಧಿಗೆ ಬಿಜೆಪಿ ಯನ್ನು ಗೆಲ್ಲಿಸಲು ಕರೆ ನೀಡಿದರು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಚುನಾವಣಾ ಸಂದರ್ಭದಲ್ಲಿ ಪಕ್ಷವನ್ನು ಗೆಲ್ಲಿಸಲು ಮನೆ ಮನೆ ಭೇಟಿ ಸಂದರ್ಭದಲ್ಲಿ ನೀಡಬೇಕಾದ ಮಾಹಿತಿ ಬಗ್ಗೆ ಮಾಹಿತಿ ನೀಡಿದರು. ಕಾಪು ಚುನಾವಣಾ ಫ್ರಭಾರಿಗಳಾದ ಸುಲೋಚನಾ ಭಟ್ ಮಾತನಾಡಿ ಕಾರ್ಯಕರ್ತರಿಗೆ ಸ್ಪೂರ್ತಿ ತುಂಬಿದರು. ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ, ಗೋಪಾಲಕೃಷ್ಣ ರಾವ್, ಶಕ್ತಿಕೇಂದ್ರ ಪ್ರಮುಖರಾದ ವಿನಯ್ ಪೂಜಾರಿ ಹಾಗೂ ದಯಾನಂದ ಪೂಜಾರಿ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀಶ ನಾಯಕ್ , ಜಿಲ್ಲಾ ಕಾರ್ಯದರ್ಶಿ ಸುನೀತಾ ನಾಯ್ಕ್, ಮಂಡಲ ಉಪಾಧ್ಯಕ್ಷರಾದ ಸಂಧ್ಯಾ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.