ರಾಜ್ಯದ ಅರಶಿನ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ತಕ್ಷಣ ಸ್ಪಂದಿಸಿದ ಕೇಂದ್ರ ಸರ್ಕಾರ- ಶೋಭಾ ಕರಂದ್ಲಾಜೆ.



ಬೆಂಗಳೂರು: ಅರಶಿನ ಬೆಳೆಗೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತದ‌ ಕಾರಣ ಮಾರುಕಟ್ಟೆ ಮದ್ಯಸ್ಥಿಕೆ‌ ಯೋಜನೆಯಡಿಯಲ್ಲಿ ಅರಶಿನ ಬೆಳೆಯನ್ನು ಖರೀದಿಸಬೇಕೆಂದು ರಾಜ್ಯದ ಅರಶಿನ ಬೆಳೆಗಾರರ ನಿಯೋಗ ಕಳೆದ ವಾರವಷ್ಟೆ ನನಗೆ ಮನವಿ ಸಲ್ಲಿಸಿ, ಅರಶಿನ ಬೆಳೆಗಾರರನ್ನು ಸಂಕಷ್ಟದಿಂದ ಪಾರು ಮಾಡಬೇಕೆಂದು ಮನವಿ‌ ಮಾಡಿದ್ದರು.



ಕರ್ನಾಟಕ ರಾಜ್ಯ ಸರ್ಕಾರವು ಸಹ ಕೇಂದ್ರ ಸರ್ಕಾರಕ್ಕೆ ಈ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಿತ್ರು.

ಮನವಿಗೆ ಸ್ಪಂದಿಸಿ ನಾನು ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕಾಗಿ ಆದೇಶಿಸಿದ್ದೆ. ಶೀಘೃವಾಗಿ‌‌ ಕೇಂದ್ರದಿಂದ‌ ಆದೇಶ ಹೊರಡಿಸಿ, ಅರಿಸಿಣ ಬೆಳೆಯ ರೈತರ ಕಷ್ಟಕ್ಕೆ ಕೇಂದ್ರ ಸರ್ಕಾರದಿಂದ ಪರಿಹಾರ ಒದಗಿಸಲಾಗಿದೆ.

2022-23 ನೆ, ಸಾಲಿಗೆ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಅರಿಸಿಣ ಖರೀದಿಗೆ ಪ್ರತಿ ಕ್ವಿಂಟಲ್ ಗೆ ರೂ.6,694/- ರಂತೆ ಅನುಮೋದನೆಯನ್ನು ದಿನಾಂಕ 22 ಮಾರ್ಚ್ 2023=ರಂದು ನೀಡಲಾಗಿದೆ.

ತ್ವರಿತವಾಗಿ ರಾಜ್ಯ ಸರ್ಕಾರ ಅರಶಿನದ ಖರೀದಿ ಪ್ರಕ್ರಿಯೆ ಕೈಗೊಳ್ಳಲಿದೆ.

ಅರಶಿನ ಬೆಳೆಗೆ ಪ್ರಚಲಿತ ಮಾರುಕಟ್ಟೆ ದರ ರೂ. 5200 (ಪ್ರತಿ ಕ್ವಿಂಟಲ್ ಗೆ) ಇರುತ್ತದೆ, ಪ್ರಸ್ತುತ ಕೇಂದ್ರ ಸರ್ಕಾರ ಘೋಷಿಸಿದ ಬೆಂಬಲ ಬೆಲೆ ರೂ. 6694/- (ಪ್ರತಿ ಕ್ವಿಂಟಲ್ ಗೆ) ಇರುತ್ತದೆ. ಆದುದರಿಂದ ರೈತರಿಗೆ ಮಾರುಕಟ್ಟೆ ಮದ್ಯ ಪ್ರವೇಶ ಯೋಜನೆಯಿಂದ ಪ್ರತಿ ಕ್ವಿಂಟಲ್ ಗೆ, ಅಂದಾಜು ರು. 1400 ರಿಂದ ರೂ.1500 ಗಳಷ್ಟು ಲಾಭವಾಗುತ್ತದೆ.

ಚಾಮರಾಜನಗರ, ಬೆಳಗಾವಿ, ಬಾಗಲಕೋಟೆ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳ ರೈತರಿಗೆ ಕೇಂದ್ರ‌ ಸರ್ಕಾರದ ಈ ಆದೇಶದಿಂದ ಅನುಕೂಲವಾಗಲಿದೆ.

ದೇಶದ ರೈತರ ಹಿತ ಕಾಯುವಲ್ಲಿ ಪ್ರದಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ‌ ಬಿಜೆಪಿ ಸರ್ಕಾರ ರೈತರ ನೆರವಿಗೆ ಧಾವಿಸುತ್ತಿದ್ದು, ಯಾವುದೇ ವಿಳಂಬಕ್ಕೆ ಅವಕಾಶವಿಲ್ಲದೆ ರಾಜ್ಯದ‌ ಅರಿಸಿಣ ಬೆಳೆಗಾರರ‌ ಕಷ್ಟಕ್ಕೆ ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಸ್ಪಂದಿಸಿದೆ.

ಕರ್ನಾಟಕ ರಾಜ್ಯದ ಅರಶಿನ ಬೆಳೆಗಾರರ ‌ಸಮಸ್ಯೆಗೆ‌ ತ್ವರಿತವಾಗಿ ಪರಿಹಾರವನ್ನು ಒದಗಿಸಿದ ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ‌ ಶ್ರೀ ನರೇಂದ್ರಸಿಂಗ್ ತೋಮರ್‌ ಅವರಿಗೆ ಮತ್ತು ಪ್ರಧಾನಮಂತ್ರಿ ಶ್ರೀ ನರೇಂದ್ರ‌ ಮೋದಿಜೀಯವರಿಗೆ ಅನಂತ ಧನ್ಯವಾದಗಳನ್ನು ತಿಳಿಸುತ್ತೇನೆ.

*(ಶೋಭಾ ಕರಂದ್ಲಾಜೆ-ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆಯ ಸಚಿವರು)*

Leave a comment

Design a site like this with WordPress.com
Get started