ಕಟಪಾಡಿ ಬೂತ್ ಸಂಖ್ಯೆ 81 ರಲ್ಲಿ ಕಾರ್ಯಕರ್ತರ ಸಭೆ

News By: ಜನತಾಲೋಕವಾಣಿನ್ಯೂಸ್

ಕಾಪು: ಬಿಜೆಪಿ ಕಾಪು ಮಂಡಲದ ಕಟಪಾಡಿ ಗ್ರಾಮ‌ಪಂಚಾಯತ್ ವ್ಯಾಪ್ತಿಯ ವಾರ್ಡ್ ಸಂಖ್ಯೆ 81 ರಲ್ಲಿ ಕಾರ್ಯಕರ್ತರ ಚುನಾವಣಾ ಪೂರ್ವಭಾವಿ ಸಭೆ ನಡೆಯಿತು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಬಿಜೆಪಿಯ ಇತಿಹಾಸದ ಬಗ್ಗೆ, ಪ್ರಸ್ತುತ ಬಿಜೆಪಿ ಆಡಳಿತದ ಬಗ್ಗೆ ಹಾಗೂ ಮುಂದೆ ಬಿಜೆಪಿ ಚುನಾವಣೆ ಗೆಲ್ಲುವ ಅನಿವಾರ್ಯತೆಯ ಬಗ್ಗೆ ವಿಸ್ತಾರವಾದ ಮಾಹಿತಿ ನೀಡಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿಯವರು ಮಾತನಾಡಿ ಪಕ್ಷದ ಗೆಲುವಿಗೆ ಶ್ರಮಿಸಲು ಕರೆ ನೀಡಿದರು. ಬೂತ್ ಅಧ್ಯಕ್ಷರಾದ ರಂಜಿತ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಗುರುಕ್ರಪಾ ರಾವ್, ಪಂಚಾಯತ್ ಸದಸ್ಯರಾದ ಕವಿತಾ , ಪಕ್ಷದ ಪ್ರಮುಖರಾದ ಗಂಗಾಧರ್ ಸುವರ್ಣ, ಮುರಳೀಧರ ಪೈ, ಇಂದುಶೇಖರ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಕ್ತಿ ಕೇಂದ್ರ ಪ್ರಮುಖ್ ಸಂತೋಷ್ ಸ್ವಾಗತಿಸಿ ಕಾರ್ಯಕ್ರಮ ನಡೆಸಿದರು.

Leave a comment

Design a site like this with WordPress.com
Get started