ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶ್ರೀರಾಮನವಮಿ ಆಚರಣೆ

ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಇಂದು ಶ್ರೀರಾಮ ನವಮಿಯನ್ನು ಆಚರಿಸಲಾಯಿತು. ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು ಮತ್ತು ಪಕ್ಷದ ಮುಖಂಡರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಬಿಜೆಪಿ ಗೆಲುವು ನಿಶ್ಚಿತ; ಕಾಂಗ್ರೆಸ್ ಸೋಲು ಖಚಿತ : ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಮೇ 10ರಂದು ಕರ್ನಾಟಕ ರಾಜ್ಯ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಗೆ ಜಿಲ್ಲೆಯ ಐದು ಸ್ಥಾನಗಳ ಸಹಿತ ರಾಜ್ಯದಲ್ಲಿ 150ಕ್ಕೂ ಹೆಚ್ಚಿನ ಸ್ಥಾನಗಳ ಗೆಲುವು ಖಚಿತ; ಉಚಿತ ಪೊಳ್ಳು ಭಾಗ್ಯಗಳ ಆಮಿಷ ಒಡ್ಡಿರುವ ಭ್ರಷ್ಟ ಕಾಂಗ್ರೆಸ್ಸಿಗೆ ಸೋಲು ಖಚಿತ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಐತಿಹಾಸಿಕ ಮೀಸಲಾತಿ ಮತ್ತು ಒಳ ಮೀಸಲಾತಿ ಘೋಷಣೆಯ ಸಹಿತ ವಿವಿಧ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಹಾಗೂContinue reading “ಬಿಜೆಪಿ ಗೆಲುವು ನಿಶ್ಚಿತ; ಕಾಂಗ್ರೆಸ್ ಸೋಲು ಖಚಿತ : ಕುಯಿಲಾಡಿ ಸುರೇಶ್ ನಾಯಕ್”

Design a site like this with WordPress.com
Get started