ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ- ಎಲ್ಲೂರು ಮಹಾಶಕ್ತಿಕೇಂದ್ರ ಪದಾಧಿಕಾರಿಗಳು ಹಾಗೂ‌ ಜನಪ್ರತಿನಿಧಿಗಳ ಸಭೆ



ಕಾಪು: ಚುನಾವಣಾ ಪೂರ್ವಭಾವಿಯಾಗಿ ಎಲ್ಲೂರಯ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರುಗಳು, ಶಕ್ತಿಕೇಂದ್ರ ಪ್ರಮುಖರು, ಪಂಚಾಯತ್ ಸದಸ್ಯರುಗಳು ಹಾಗೂ‌ ಪಕ್ಷದ ಪ್ರಮುಖರ ಸಭೆ ನಡೆಯಿತು. ಸಭೆಯಲ್ಲಿ ಮುಂದಿನ ದಿನದಲ್ಲಿ ಬೂತ್ ಮಟ್ಟದಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ರವರು ನೀಡಿದರು. ಶಾಸಕರಾದ ಲಾಲಾಜಿ ಆರ್ ಮೆಂಡನ್ ಕ್ಷೇತ್ರದ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಮಾತನಾಡಿ ಚುನಾವಣೆಗಾಗಿ ಎಲ್ಲರೂ ಸಮಯ ನೀಡಲು ವಿನಂತಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನ‌ಕಾರ್ಯದರ್ಶಿ ಶಿಲ್ಪಾ ಜಿ‌ ಸುವರ್ಣ, ಹಿಂದುಳಿದ ವರ್ಗ ಮೋರ್ಚದ ಜಿಲ್ಲಾಧ್ಯಕ್ಷರಾದ ಸುರೇಂದ್ರ ಪಣಿಯೂರು, ಪಂಚಾಯತ್ ಅಧ್ಯಕ್ಷರಾದ ಯೋಗಿನಿ‌ ಶೆಟ್ಟಿ, ಮಂಡಲ ಪ್ರಧಾನ‌ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಉಪಸ್ಥಿತರಿದ್ದರು ‌. ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಚಂದ್ರಶೇಖರ ಕೋಟ್ಯನ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯರಾದ ಪ್ರಸಾದ್ ಶೆಟ್ಟಿ ಕುತ್ಯಾರು, ನಾಗೇಶ್ ಭಟ್, ಮಂಡಲ ಕಾರ್ಯದರ್ಶಿ ಮಾಲಿನಿ ಶೆಟ್ಟಿ, ಲತಾ ಆಚಾರ್ಯ, ಉಚ್ಚಿಲ, ಎಲ್ಲೂರು, ಬೆಳಪು, ಮುದರಂಗಡಿ, ಕುತ್ಯಾರು ಹಾಗೂ ಮಜೂರು ಪಂಚಾಯತ್ ನ ಕಾರ್ಯಕರ್ತರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started