ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಗೋವಿಂದ ಬಾಬು ಪೂಜಾರಿ ಬೈಂದೂರು ನೇಮಕ

ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿ ಪಕ್ಷ ಸಂಘಟನೆಗೆ ವಿಶೇಷ ಒತ್ತು ನೀಡುವ ಜೊತೆಗೆ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೈಂದೂರು ಇವರನ್ನು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷ ನೆಲ ನರೇಂದ್ರಬಾಬು ಆದೇಶ ಹೊರಡಿಸಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಲ್ಲ ವರ್ಗಗಳ ಏಳಿಗೆ ಬಿಜೆಪಿಯಿಂದ ಮಾತ್ರ ಸಾಧ್ಯ: ಯಶ್ಪಾಲ್ ಸುವರ್ಣ

ಉಡುಪಿ: ಸುದೀರ್ಘ ಅವಧಿಗೆ ದೇಶವನ್ನಾಳಿದ ಕಾಂಗ್ರೆಸ್ ಕೇವಲ ಮತ ಬ್ಯಾಂಕಿಗಾಗಿ ಹಿಂದುಳಿದ ವರ್ಗ ಹಾಗೂ ದಲಿತ ಸಮುದಾಯವನ್ನು ಬಳಕೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ‘ಸಬ್ಕೇ ಸಾಥ್ ಸಬ್ಕಾ ವಿಕಾಸ್’ ಮೂಲ ಮಂತ್ರದೊಂದಿಗೆ ಎಲ್ಲ ವರ್ಗಗಳ ಜನತೆಯ ಕಲ್ಯಾಣಕ್ಕೆ ನಾಂದಿ ಹಾಡಿ ಜನರ ಮನಸ್ಸನ್ನು ಗೆದ್ದಿದೆ. ಎಲ್ಲ ವರ್ಗಗಳ ಏಳಿಗೆ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಎ. ಸುವರ್ಣ ಹೇಳಿದರು. ಅವರು ಕುತ್ಪಾಡಿಯ ನವಚೇತನContinue reading “ಎಲ್ಲ ವರ್ಗಗಳ ಏಳಿಗೆ ಬಿಜೆಪಿಯಿಂದ ಮಾತ್ರ ಸಾಧ್ಯ: ಯಶ್ಪಾಲ್ ಸುವರ್ಣ”

Design a site like this with WordPress.com
Get started