ಕಾಪು: ಚುನಾವಣಾ ಪೂರ್ವಭಾವಿಯಾಗಿ ಅಲೆವೂರು ಪಂಚಾಯತ್ ವ್ಯಾಪ್ತಿಯ ಬೂತ್ ಅಧ್ಯಕ್ಷರುಗಳು, ಶಕ್ತಿಕೇಂದ್ರ ಪ್ರಮುಖರು, ಪಂಚಾಯತ್ ಸದಸ್ಯರುಗಳು ಹಾಗೂ ಪಕ್ಷದ ಪ್ರಮುಖ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಮುಂದಿನ ದಿನದಲ್ಲಿ ಬೂತ್ ಮಟ್ಟದಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ರವರು ನೀಡಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ ಸರಕಾರದ ಸಾಧನೆಗಳ ಬಗ್ಗೆ ಮಾತನಾಡಿ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಎಲ್ಲರೂ ಸಮಯ ನೀಡಲು ವಿನಂತಿಸಿದರು. ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್,Continue reading “ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ – ಅಲೆವೂರು ಪಂಚಾಯತ್ ವ್ಯಾಪ್ತಿಯ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆ”
Monthly Archives: April 2023
ಕಾಂಗ್ರೆಸ್ಸಿನ ಗ್ಯಾರಂಟಿ ಕಾರ್ಡಿಗೆ ವಾರಂಟಿ ಇಲ್ಲ : ಕೋಟ ಶ್ರೀನಿವಾಸ ಪೂಜಾರಿ ಬಿಜೆಪಿ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಕಾರ್ಯಾಗಾರದ ಉದ್ಘಾಟನೆ
ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಯಾವುದೇ ಸರಕಾರ ಬಡವರಿಗೆ ನ್ಯಾಯವನ್ನು ಕೊಡುತ್ತಿರುವಾಗ ಇಲ್ಲಿಯವರೆಗೆ ಗ್ಯಾರಂಟಿ ಕಾರ್ಡನ್ನು ಕೊಟ್ಟಿಲ್ಲ. ಗ್ಯಾರಂಟಿ ಕಾರ್ಡ್ ಕೊಡುತ್ತೇವೆ ಎಂಬುದರ ಅರ್ಥವೇನೆಂದರೆ ಜನ ತಮ್ಮನ್ನು ನಂಬುವುದಿಲ್ಲ ಎಂಬುದಾಗಿದೆ. ಈ ಕಾರಣಕ್ಕಾಗಿ ಕಾಂಗ್ರೆಸ್ ವಿತರಿಸುತ್ತಿರುವ ಗ್ಯಾರಂಟಿ ಕಾರ್ಡುಗಳಿಗೆ ಯಾವುದೇ ವಾರಂಟಿ ಇಲ್ಲ ಎಂದು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಉಡುಪಿ ಪುರಭವನದಲ್ಲಿ ನಡೆದContinue reading “ಕಾಂಗ್ರೆಸ್ಸಿನ ಗ್ಯಾರಂಟಿ ಕಾರ್ಡಿಗೆ ವಾರಂಟಿ ಇಲ್ಲ : ಕೋಟ ಶ್ರೀನಿವಾಸ ಪೂಜಾರಿ ಬಿಜೆಪಿ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಕಾರ್ಯಾಗಾರದ ಉದ್ಘಾಟನೆ”
ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ- ಎಲ್ಲೂರು ಮಹಾಶಕ್ತಿಕೇಂದ್ರ ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆ
ಕಾಪು: ಚುನಾವಣಾ ಪೂರ್ವಭಾವಿಯಾಗಿ ಎಲ್ಲೂರಯ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರುಗಳು, ಶಕ್ತಿಕೇಂದ್ರ ಪ್ರಮುಖರು, ಪಂಚಾಯತ್ ಸದಸ್ಯರುಗಳು ಹಾಗೂ ಪಕ್ಷದ ಪ್ರಮುಖರ ಸಭೆ ನಡೆಯಿತು. ಸಭೆಯಲ್ಲಿ ಮುಂದಿನ ದಿನದಲ್ಲಿ ಬೂತ್ ಮಟ್ಟದಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ರವರು ನೀಡಿದರು. ಶಾಸಕರಾದ ಲಾಲಾಜಿ ಆರ್ ಮೆಂಡನ್ ಕ್ಷೇತ್ರದ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಮಾತನಾಡಿ ಚುನಾವಣೆಗಾಗಿ ಎಲ್ಲರೂ ಸಮಯ ನೀಡಲು ವಿನಂತಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ,Continue reading “ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ- ಎಲ್ಲೂರು ಮಹಾಶಕ್ತಿಕೇಂದ್ರ ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆ”
ಎ.12ರ ಬಿಜೆಪಿ ಮಂಗಳೂರು ವಿಭಾಗದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನ ಯಶಸ್ವಿಗೊಳಿಸಲು ಪ್ರಸಾದ್ ಕುಮಾರ್ ಕರೆ
ಉಡುಪಿ: ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಏ.12ರಂದು ಬೆಳಿಗ್ಗೆ 10.00 ಗಂಟೆಗೆ ಕಾಪು ಉಚ್ಚಿಲ ಮೊಗವೀರ ಭವನದಲ್ಲಿ ನಡೆಯಲಿರುವ ಬಿಜೆಪಿ ಮಂಗಳೂರು ವಿಭಾಗದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನವನ್ನು ಯೋಜನಾಬದ್ದ ಪೂರ್ವಸಿದ್ಧತೆ ಹಾಗೂ ಸಕ್ರಿಯ ಭಾಗವಹಿಸುವಿಕೆ ಮೂಲಕ ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಪಕ್ಷದ ಸಾಮಾಜಿಕ ಜಾಲತಾಣದ ಸಕ್ರಿಯ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದContinue reading “ಎ.12ರ ಬಿಜೆಪಿ ಮಂಗಳೂರು ವಿಭಾಗದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನ ಯಶಸ್ವಿಗೊಳಿಸಲು ಪ್ರಸಾದ್ ಕುಮಾರ್ ಕರೆ”
ಏ.12ರಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಉಡುಪಿಗೆ; ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಭಾಗಿ : ಕುಯಿಲಾಡಿ
ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ರವರು ಏ.12ರಂದು ಉಡುಪಿ ಜಿಲ್ಲೆಗೆ ಬೇಟಿ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಏ.12ರ ಬೆಳಗ್ಗೆ 10.00 ಗಂಟೆಗೆ ಕಾಪು ಉಚ್ಚಿಲದ ಮೊಗವೀರ ಭವನದಲ್ಲಿ ನಡೆಯಲಿರುವ ಬಿಜೆಪಿ ಮಂಗಳೂರು ವಿಭಾಗ ಮಟ್ಟದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಹಿರಿಯರ ಚಿಂತನೆ, ದೂರದರ್ಶಿತ್ವ ದೇಶದ ಪ್ರಗತಿಗೆ ಪೂರಕವಾಗಿದೆ : ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಬಿಜೆಪಿ ಹಿರಿಯರ ಚಿಂತನೆ, ದೂರದರ್ಶಿತ್ವ ಮತ್ತು ಅವರು ಹಾಕಿ ಕೊಟ್ಟ ಮಾರ್ಗ ಇಂದು ಸರ್ವವ್ಯಾಪಿ ಆಡಳಿತದ ಮೂಲಕ ದೇಶದ ಪ್ರಗತಿಗೆ ಪೂರಕವಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಸ್ಥಾಪನಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಭಾರತ ಮಾತೆ ಮತ್ತು ಪಕ್ಷದ ಸಂಸ್ಥಾಪಕರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು. ಇತರ ರಾಜಕೀಯ ಪಕ್ಷಗಳು ಕೇವಲ ಅಧಿಕಾರದ ಸ್ವಾರ್ಥ ರಾಜಕಾರಣ ಮತ್ತು ಕುಟುಂಬದ ಹಿತಕ್ಕೆ ಸೀಮಿತವಾಗಿದ್ದರೆ, ಬಿಜೆಪಿContinue reading “ಬಿಜೆಪಿ ಹಿರಿಯರ ಚಿಂತನೆ, ದೂರದರ್ಶಿತ್ವ ದೇಶದ ಪ್ರಗತಿಗೆ ಪೂರಕವಾಗಿದೆ : ಕುಯಿಲಾಡಿ ಸುರೇಶ್ ನಾಯಕ್”
ಬಿಜೆಪಿ ಮಹಾಶಕ್ತಿ ಕೇಂದ್ರ-ಉದ್ಯಾವರಪದಾಧಿಕಾರಿಗಳು, ಜನಪ್ರತಿನಿಧಿಗಳ ಚುನಾವಣಾ ಪೂರ್ವಭಾವಿ ಸಭೆ
ಕಾಪು: ಉದ್ಯಾವರ ಮಹಾಶಕ್ತಿಕೇಂದ್ರ ವ್ಯಾಪ್ತಿಯ ಚುನಾವಣಾ ಪೂರ್ವಬಾವಿ ಸಭೆಯು ಸೌಂದರ್ಯ ಸಭಾಂಗಣ ದಲ್ಲಿ ನಡೆಯಿತು. ಬೂತ್ ಗಳಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ವಿಸ್ತಾರವಾಗಿ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಮಾಹಿತಿ ನೀಡಿದರು. ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಮಂಡಲ ಪ್ರದಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಉದ್ಯಾವರ ಉಸ್ತುವಾರಿ ನವೀನ್ ಎಸ್ ಕೆ, ಜಿಲ್ಲಾ ಪ್ರಕೋಷ್ಟಗಳ ಸಂಚಾಲಕ ವಿಜಯ ಕುಮಾರ್ ಉದ್ಯಾವರ ವಿಸ್ತರಕ್ ದಿನಕರ ಪೂಜಾರಿ ಮಂಡಲ ಕಾರ್ಯದರ್ಶಿ ರಾಜೇಶ್ ಕುಂದರ್Continue reading “ಬಿಜೆಪಿ ಮಹಾಶಕ್ತಿ ಕೇಂದ್ರ-ಉದ್ಯಾವರಪದಾಧಿಕಾರಿಗಳು, ಜನಪ್ರತಿನಿಧಿಗಳ ಚುನಾವಣಾ ಪೂರ್ವಭಾವಿ ಸಭೆ”
ಏ.6 ಬಿಜೆಪಿ ಸ್ಥಾಪನಾ ದಿನ, ಏ.14 ಅಂಬೇಡ್ಕರ್ ಜಯಂತಿ ಆಚರಣೆ, ಮನೆ ಮನೆ ಸಂಪರ್ಕ: ಕುಯಿಲಾಡಿ
ಉಡುಪಿ: ಬಿಜೆಪಿ ಸ್ಥಾಪನಾ ದಿನವನ್ನು ಏ.6ರಂದು ಬೆಳಿಗ್ಗೆ 9.00 ಗಂಟೆಗೆ ಜಿಲ್ಲೆಯ ಎಲ್ಲ 1,111 ಬೂತ್ ಗಳಲ್ಲಿ ಬೂತ್ ಅಧ್ಯಕ್ಷರ ಮನೆಯ ಮೇಲೆ ಪಕ್ಷದ ಧ್ವಜಾರೋಹಣವನ್ನು ನೆರವೇರಿಸಿ, ಪಕ್ಷದ ತತ್ವ ಸಿದ್ಧಾಂತ ಹಾಗೂ ಕಾರ್ಯ ಪದ್ಧತಿಗಳ ಚಿಂತನಾ ಸಭೆಯೊಂದಿಗೆ ಆಚರಿಸಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಏ.6ರ ಬೆಳಿಗ್ಗೆ 9.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ ನಡೆಯಲಿದ್ದು, ಬೆಳಿಗ್ಗೆ 9.40ಕ್ಕೆ ವೆಬೆಕ್ಸ್ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷContinue reading “ಏ.6 ಬಿಜೆಪಿ ಸ್ಥಾಪನಾ ದಿನ, ಏ.14 ಅಂಬೇಡ್ಕರ್ ಜಯಂತಿ ಆಚರಣೆ, ಮನೆ ಮನೆ ಸಂಪರ್ಕ: ಕುಯಿಲಾಡಿ”
ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರ-ಕುರ್ಕಾಲು ಮಹಾಶಕ್ತಿಕೇಂದ್ರ ಪದಾಧಿಕಾರಿಗಳು ಜನಪ್ರತಿನಿಧಿಗಳ ಸಭೆ
ಕಾಪು: ಕುರ್ಕಾಲು ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬೂತ್ ಅಧ್ಯಕ್ಷರ, ಜನಪ್ರತಿನಿಧಿಗಳ ಹಾಗೂ ಪದಾಧಿಕಾರಿಗಳ ಸಭೆ ನಡೆಯಿತು. ಬೂತ್ ಮಟ್ಟದಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾಹಿತಿ ನೀಡಿದರು. ಸಭೆಯಲ್ಲಿ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಚುನಾವಣಾ ಪ್ರಭಾರಿ ಸುಲೋಚನಾ ಭಟ್, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯಮಹಿಳಾ ಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ವಿಶ್ವನಾಥ್ ಕುರ್ಕಾಲು, ಪ್ರಧಾನ ಕಾರ್ಯದರ್ಶಿContinue reading “ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರ-ಕುರ್ಕಾಲು ಮಹಾಶಕ್ತಿಕೇಂದ್ರ ಪದಾಧಿಕಾರಿಗಳು ಜನಪ್ರತಿನಿಧಿಗಳ ಸಭೆ”