ಸಮಾನ ಮನಸ್ಕರ ತಂಡದ ವತಿಯಿಂದ ವಿಧ್ಯಾರ್ಥಿಗಳಿಗೆ ಉಚಿತ ಪುಸ್ತಕ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ

ಶಶಿಧರ ಪುರೋಹಿತ ಕಟಪಾಡಿ ಇವರ ನೇತೃತ್ವದಲ್ಲಿ ಸಮಾನ ಮನಸ್ಕರ ತಂಡದ ವತಿಯಿಂದ ವಿದ್ಯಾರ್ಥಿಗಳಿಗೆ ಕೊಡಮಾಡಿದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಇಂದು ದಿನಾಂಕ 29-06-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಉಚಿತ ಪುಸ್ತಕ ವಿತರಣೆ ಮಾಡಿದ ಶಾಸಕರು ಸಮಾನ ಮನಸ್ಕ ತಂಡಕ್ಕೆ ಮತ್ತು ಇದಕ್ಕೆ ಸಹಕರಿಸಿದ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಶಿಧರ ಪುರೋಹಿತ, ಸದಾಶಿವ ಆಚಾರ್ಯ, ಸಹನಾ ದೇವರಾಜ ಆಚಾರ್ಯ, ಅಚ್ಚುತ ಆಚಾರ್ಯ ಕಾಪು, ನಿವೃತ್ತ ತಹಶೀಲ್ದಾರರಾದ ಕೆ. ಮುರಳಿಧರContinue reading “ಸಮಾನ ಮನಸ್ಕರ ತಂಡದ ವತಿಯಿಂದ ವಿಧ್ಯಾರ್ಥಿಗಳಿಗೆ ಉಚಿತ ಪುಸ್ತಕ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ”

’10 ಕೆ.ಜಿ. ಅಕ್ಕಿ ಫ್ರೀ’ ಗ್ಯಾರಂಟಿಗೆ ಕೇವಲ 5 ಕೆ.ಜಿ. ಅಕ್ಕಿಯ ಹಣವನ್ನು ನೀಡುವುದು ರಾಜ್ಯ ಕಾಂಗ್ರೆಸ್ ಸರಕಾರ ಜನತೆಗೆ ಬಗೆದ ದ್ರೋಹ; ಉಚಿತ ಅಕ್ಕಿ ನೀಡುತ್ತಿರುವುದು ಕೇಂದ್ರ ಸರಕಾರ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ’10 ಕೆ.ಜಿ. ಅಕ್ಕಿ ಫ್ರೀ… ಬೇಕಾ ಬೇಡ್ವಾ…’ ಎಂದು ಘಂಟಾಘೋಷವಾಗಿ ಸಾರಿದ್ದ ಸಿ.ಎಂ. ಸಿದ್ದರಾಮಯ್ಯನವರು ಇದೀಗ ರಾಗ ಬದಲಿಸಿ, ಸಚಿವ ಸಂಪುಟ ಸಭೆಯ ತೀರ್ಮಾನದಂತೆ 10 ಕೆ.ಜಿ. ಅಕ್ಕಿಯ ಬದಲಿಗೆ ಕೇವಲ 5 ಕೆ.ಜಿ. ಅಕ್ಕಿಯ ಮೌಲ್ಯವನ್ನು ಪ್ರತೀ ಕೆ.ಜಿ.ಗೆ ರೂ.34ರಂತೆ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ ನೀಡುತ್ತೇವೆ ಎಂದಿರುವುದು ರಾಜ್ಯದ ಜನತೆಗೆ ಬಗೆದ ದ್ರೋಹವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಜ್ಯದ ಜನತೆಗೆ ನೀಡುತ್ತಿರುವ ಉಚಿತContinue reading “’10 ಕೆ.ಜಿ. ಅಕ್ಕಿ ಫ್ರೀ’ ಗ್ಯಾರಂಟಿಗೆ ಕೇವಲ 5 ಕೆ.ಜಿ. ಅಕ್ಕಿಯ ಹಣವನ್ನು ನೀಡುವುದು ರಾಜ್ಯ ಕಾಂಗ್ರೆಸ್ ಸರಕಾರ ಜನತೆಗೆ ಬಗೆದ ದ್ರೋಹ; ಉಚಿತ ಅಕ್ಕಿ ನೀಡುತ್ತಿರುವುದು ಕೇಂದ್ರ ಸರಕಾರ: ಕುಯಿಲಾಡಿ ಸುರೇಶ್ ನಾಯಕ್”

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ, “ಮೇರಾ ಬೂತ್ ಸಬ್ಸೇ ಮಜ್ಬೂತ್” ಅಭಿಯಾನದಡಿ ಪ್ರಧಾನಿ ನರೇಂದ್ರ ಮೋದಿಯವರ ಸಂವಾದದ ನೇರ ಪ್ರಸಾರ ವೀಕ್ಷಣೆ

ಉಡುಪಿ: “ಮೇರಾ ಬೂತ್ ಸಬ್ಸೇ ಮಜ್ಬೂತ್” (ನನ್ನ ಬೂತ್ ಎಲ್ಲಕ್ಕಿಂತಲೂ ಬಲಿಷ್ಠ) ಅಭಿಯಾನದಡಿ ಜೂ.27ರಂದು ಮಧ್ಯಪ್ರದೇಶದ ಭೋಪಾಲ್ ನಲ್ಲಿ ಎಲ್ಲ ರಾಜ್ಯಗಳ ಬಿಜೆಪಿ ಕಾರ್ಯಕರ್ತ ಪ್ರತಿನಿಧಿಗಳ ಸಮ್ಮುಖದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ‘ಕಾರ್ಯಕರ್ತರೊಂದಿಗೆ ಸಂವಾದ’ದ ನೇರ ಪ್ರಸಾರವನ್ನು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರ ನೇತೃತ್ವದಲ್ಲಿ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ವೀಕ್ಷಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆContinue reading “ಬಿಜೆಪಿ ಜಿಲ್ಲಾ ಕಛೇರಿಯಲ್ಲಿ, “ಮೇರಾ ಬೂತ್ ಸಬ್ಸೇ ಮಜ್ಬೂತ್” ಅಭಿಯಾನದಡಿ ಪ್ರಧಾನಿ ನರೇಂದ್ರ ಮೋದಿಯವರ ಸಂವಾದದ ನೇರ ಪ್ರಸಾರ ವೀಕ್ಷಣೆ”

ಉಡುಪಿಯ ನೂತನ ಶಾಸಕ ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣರವರಿಗೆ ಜಿಲ್ಲಾ ಒಬಿಸಿ ಮೋರ್ಚಾ ವತಿಯಿಂದ ಸನ್ಮಾನ

ಉಡುಪಿ: ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಪ್ರಸಕ್ತ ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವ ಜೊತೆಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಹೆಚ್ಚಿನ ಅಂತರದ ಮತಗಳಿಂದ ಗೆಲುವು ಸಾಧಿಸಿರುವ ಯಶ್ಪಾಲ್ ಎ. ಸುವರ್ಣರವರನ್ನು ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು,Continue reading “ಉಡುಪಿಯ ನೂತನ ಶಾಸಕ ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣರವರಿಗೆ ಜಿಲ್ಲಾ ಒಬಿಸಿ ಮೋರ್ಚಾ ವತಿಯಿಂದ ಸನ್ಮಾನ”

ಜಿಲ್ಲೆಯಲ್ಲಿ ಬಿಜೆಪಿ ಜಯಭೇರಿಗೆ ನೇತೃತ್ವ ವಹಿಸಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರಿಗೆ ಜಿಲ್ಲಾ ಒಬಿಸಿ ಮೋರ್ಚಾ ವತಿಯಿಂದ ಸನ್ಮಾನ

ಉಡುಪಿ: ಕಳೆದ ಮೂರು ವರ್ಷಗಳಿಂದ ಜಿಲ್ಲೆಯಾದ್ಯಂತ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟನಾತ್ಮಕವಾಗಿ ಸದೃಢಗೊಳಿಸುವ ಜೊತೆಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಂಘಟಿತ ಪ್ರಯತ್ನದ ಮೂಲಕ ಬಿಜೆಪಿ ಉಡುಪಿ ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಜಿಲ್ಲೆಯ ನೇತೃತ್ವ ವಹಿಸಿರುವ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರನ್ನು ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಹಾಗೂ ಬಿಜೆಪಿ ಒಬಿಸಿContinue reading “ಜಿಲ್ಲೆಯಲ್ಲಿ ಬಿಜೆಪಿ ಜಯಭೇರಿಗೆ ನೇತೃತ್ವ ವಹಿಸಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರಿಗೆ ಜಿಲ್ಲಾ ಒಬಿಸಿ ಮೋರ್ಚಾ ವತಿಯಿಂದ ಸನ್ಮಾನ”

ಶ್ಯಾಮಪ್ರಸಾದ್ ಮುಖರ್ಜಿ ಜೀವನಾದರ್ಶ ಕಾರ್ಯಕರ್ತರಿಗೆ ಪ್ರೇರಣಾದಾಯಕ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಅಖಂಡ ಭಾರತದ ಸಾರ್ವಭೌಮತೆಗೆ ವಿಶೇಷ ಒತ್ತು ನೀಡುವ ಜೊತೆಗೆ ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನವನ್ನು ವಿರೋಧಿಸುತ್ತಾ ತನ್ನ ಜೀವಿತಾವಧಿಯನ್ನು ದೇಶದ ಸಮಗ್ರತೆ ಮತ್ತು ಅಖಂಡತೆಗಾಗಿ ಸಮರ್ಪಿಸಿದ ಭಾರತೀಯ ಜನಸಂಘದ ಸಂಸ್ಥಾಪಕಲ್ಲೊಬ್ಬರಾದ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಜೀವನಾದರ್ಶ ಬಿಜೆಪಿ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಜೂ.23ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಸಂಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದುContinue reading “ಶ್ಯಾಮಪ್ರಸಾದ್ ಮುಖರ್ಜಿ ಜೀವನಾದರ್ಶ ಕಾರ್ಯಕರ್ತರಿಗೆ ಪ್ರೇರಣಾದಾಯಕ: ಕುಯಿಲಾಡಿ ಸುರೇಶ್ ನಾಯಕ್”

ಆಕಾಶ, ಭೂಮಿ, ಪಾತಾಳದಲ್ಲಿ ಕಾಂಗ್ರೆಸ್ ಹಗರಣ; ಬೆಲೆ ಏರಿಕೆ ಮೂಲಕ ಜನತೆಗೆ ಮೋಸ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿಬಿಜೆಪಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ

ಉಡುಪಿ: ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಅಧಿಕಾರದಲ್ಲಿದ್ದಾಗ ಆಕಾಶ, ಭೂಮಿ, ಪಾತಾಳದಲ್ಲೂ ಹಗರಣಗಳನ್ನು ನಡೆಸಿತ್ತು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಬೆಲೆ ಏರಿಕೆಯ ಮೂಲಕ ಕಾಂಗ್ರೆಸ್ ಜನರಿಗೆ ಮಹಾ ಮೋಸ ಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಾಗ್ದಾಳಿ ನಡೆಸಿದರು. ಅವರು ಜೂ.22ರಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಉಡುಪಿಯ ಹೋಟೆಲ್ ಕಿದಿಯೂರು ಶೇಷಶಯನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಉಡುಪಿ ಜಿಲ್ಲಾ ಮಟ್ಟದ ಬಿಜೆಪಿContinue reading “ಆಕಾಶ, ಭೂಮಿ, ಪಾತಾಳದಲ್ಲಿ ಕಾಂಗ್ರೆಸ್ ಹಗರಣ; ಬೆಲೆ ಏರಿಕೆ ಮೂಲಕ ಜನತೆಗೆ ಮೋಸ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿಬಿಜೆಪಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ”

ಕೇಂದ್ರ ಸರಕಾರದ 5 ಕೆ.ಜಿ. ಉಚಿತ ಅಕ್ಕಿಯ ಜೊತೆಗೆ ಕಾಂಗ್ರೆಸ್ ತನ್ನ ಗ್ಯಾರಂಟಿಯ 10 ಕೆ.ಜಿ. ಅಕ್ಕಿ ವಿತರಿಸಿ ಪೌರುಷ ತೋರಿಸಲಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಚುನಾವಣೆಯ ಸಂದರ್ಭದಲ್ಲಿ ಪೂರ್ವಾಪರ ಆಲೋಚಿಸದೆ ಬೇಕಾಬಿಟ್ಟಿಯಾಗಿ 5 ಉಚಿತ ಗ್ಯಾರಂಟಿಗಳನ್ನು ಘೋಷಿಸಿ, ತಮ್ಮ ವಾಗ್ದಾನದಂತೆ 24 ಗಂಟೆಗಳಲ್ಲಿ ಜಾರಿಗೊಳಿಸದೆ ರಾಜ್ಯದ ಜನತೆಯನ್ನು ಯಾಮಾರಿಸಿರುವ ಕಾಂಗ್ರೆಸ್ ಇದೀಗ ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನದ ಬದಲು ಕೇಂದ್ರ ಸರಕಾರ ರಾಜ್ಯಕ್ಕೆ ನೀಡುತ್ತಿರುವ ಉಚಿತ 5 ಕೆ.ಜಿ. ಅಕ್ಕಿಯನ್ನು ಹೊರತುಪಡಿಸಿ, ತಮ್ಮ ಗ್ಯಾರಂಟಿಯ 10 ಕೆ.ಜಿ. ಅಕ್ಕಿಯನ್ನು ಖರೀದಿಸಿ ಪ್ರತ್ಯೇಕವಾಗಿ ವಿತರಿಸಿ ಪೌರುಷ ತೋರಿಸಲಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ರಾಷ್ಟ್ರೀಯContinue reading “ಕೇಂದ್ರ ಸರಕಾರದ 5 ಕೆ.ಜಿ. ಉಚಿತ ಅಕ್ಕಿಯ ಜೊತೆಗೆ ಕಾಂಗ್ರೆಸ್ ತನ್ನ ಗ್ಯಾರಂಟಿಯ 10 ಕೆ.ಜಿ. ಅಕ್ಕಿ ವಿತರಿಸಿ ಪೌರುಷ ತೋರಿಸಲಿ: ಕುಯಿಲಾಡಿ ಸುರೇಶ್ ನಾಯಕ್”

ಗ್ಯಾರಂಟಿ ಜಾರಿಗೊಳಿಸಲು ವಿಫಲವಾಗಿರುವ ಕಾಂಗ್ರೆಸ್ಸಿಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ ಬಳಿ ಅಕ್ಕಿ ನೀಡುವಂತೆ ಒತ್ತಾಯಿಸಲು ನಾಚಿಕೆಯಾಗುವುದಿಲ್ಲವೆ?: ಮಹೇಶ್ ಠಾಕೂರ್ ಪ್ರಶ್ನೆ

ಉಡುಪಿ: ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ 10 ಕೆ.ಜಿ. ಅಕ್ಕಿಯನ್ನು ಫ್ರೀಯಾಗಿ ನೀಡುತ್ತೇವೆ ಎಂದು ಬೊಗಳೆ ಬಿಟ್ಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಮುಖಂಡರು ತಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ವಿಫಲಗೊಂಡು, ಇದೀಗ ಅಕ್ಕಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವನ್ನು ಒತ್ತಾಯಿಸಲು ನಾಚಿಕೆಯಾಗುವುದಿಲ್ಲವೆ ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಮುಖಂಡರು ಉಚಿತ 10 ಕೆ.ಜಿ.Continue reading “ಗ್ಯಾರಂಟಿ ಜಾರಿಗೊಳಿಸಲು ವಿಫಲವಾಗಿರುವ ಕಾಂಗ್ರೆಸ್ಸಿಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ ಬಳಿ ಅಕ್ಕಿ ನೀಡುವಂತೆ ಒತ್ತಾಯಿಸಲು ನಾಚಿಕೆಯಾಗುವುದಿಲ್ಲವೆ?: ಮಹೇಶ್ ಠಾಕೂರ್ ಪ್ರಶ್ನೆ”

ಉಡುಪಿ ಜಿಲ್ಲಾ ಬಿಜೆಪಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21ರಂದು ಉಡುಪಿಯ ಶೇಷಶಯನ ಸಭಾಂಗಣದಲ್ಲಿ ಆಚರಿಸಲಾಯಿತು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ,Continue reading “ಉಡುಪಿ ಜಿಲ್ಲಾ ಬಿಜೆಪಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ”

Design a site like this with WordPress.com
Get started