
ಕಾಪು: ವಿಶ್ವಹಿಂದೂಪರಿಷತ್ ಬಜರಂಗದಳ ಉಡುಪಿ ಜಿಲ್ಲೆ ಇವರು ಇದೇ ಬರುವ ಸೋಮವಾರ ಜೂನ್ 19 ರಂದು ಸಂಜೆ 4.00 ಗಂಟೆಗೆ ರಾಜ್ಯ ಸರಕಾರ ಮತಾಂತರ ನಿಷೇಧ ಕಾಯ್ದೆ ವಾಪಾಸ್ ಪಡೆದು ಹಿಂದೂ ವಿರೋಧಿ ನೀತಿ ಅನುಸರಿಸಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಬಳಿ ನಡೆಸುವ ಪ್ರತಿಭಟನೆಗೆ ಕಾಪು ಬಿಜೆಪಿಯಿಂದ ಸಂಪೂರ್ಣ ಬೆಂಬಲವಿದೆ. ಅಲ್ಲದೆ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಈ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಲಿದ್ದು ರಾಜ್ಯ ಸರಕಾರದ ಹಿಂದೂ ವಿರೋಧೀ ದೋರಣೆಗೆ ನಮ್ಮ ಸ್ಪಷ್ಟ ವಿರೋಧವಿದ್ದು ಮುಂದಿನ ದಿನಗಳಲ್ಲಿ ಪಕ್ಷದ ವತಿಯಿಂದಲೂ ತೀವ್ರವಾದ ಹೋರಾಟ ನಡೆಸಲಾಗುವುದು ಎಂದು ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.