ಜೂ.21ರಂದು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21 ಬುಧವಾರ ಬೆಳಿಗ್ಗೆ ಗಂಟೆ 7.30ಕ್ಕೆ ಉಡುಪಿಯ ಶೇಷಶಯನ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಯೋಗಾಭ್ಯಾಸ ತರಗತಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Design a site like this with WordPress.com
Get started