ಕೇಂದ್ರ ಸರಕಾರದ 5 ಕೆ.ಜಿ. ಉಚಿತ ಅಕ್ಕಿಯ ಜೊತೆಗೆ ಕಾಂಗ್ರೆಸ್ ತನ್ನ ಗ್ಯಾರಂಟಿಯ 10 ಕೆ.ಜಿ. ಅಕ್ಕಿ ವಿತರಿಸಿ ಪೌರುಷ ತೋರಿಸಲಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಚುನಾವಣೆಯ ಸಂದರ್ಭದಲ್ಲಿ ಪೂರ್ವಾಪರ ಆಲೋಚಿಸದೆ ಬೇಕಾಬಿಟ್ಟಿಯಾಗಿ 5 ಉಚಿತ ಗ್ಯಾರಂಟಿಗಳನ್ನು ಘೋಷಿಸಿ, ತಮ್ಮ ವಾಗ್ದಾನದಂತೆ 24 ಗಂಟೆಗಳಲ್ಲಿ ಜಾರಿಗೊಳಿಸದೆ ರಾಜ್ಯದ ಜನತೆಯನ್ನು ಯಾಮಾರಿಸಿರುವ ಕಾಂಗ್ರೆಸ್ ಇದೀಗ ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನದ ಬದಲು ಕೇಂದ್ರ ಸರಕಾರ ರಾಜ್ಯಕ್ಕೆ ನೀಡುತ್ತಿರುವ ಉಚಿತ 5 ಕೆ.ಜಿ. ಅಕ್ಕಿಯನ್ನು ಹೊರತುಪಡಿಸಿ, ತಮ್ಮ ಗ್ಯಾರಂಟಿಯ 10 ಕೆ.ಜಿ. ಅಕ್ಕಿಯನ್ನು ಖರೀದಿಸಿ ಪ್ರತ್ಯೇಕವಾಗಿ ವಿತರಿಸಿ ಪೌರುಷ ತೋರಿಸಲಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ರಾಷ್ಟ್ರೀಯContinue reading “ಕೇಂದ್ರ ಸರಕಾರದ 5 ಕೆ.ಜಿ. ಉಚಿತ ಅಕ್ಕಿಯ ಜೊತೆಗೆ ಕಾಂಗ್ರೆಸ್ ತನ್ನ ಗ್ಯಾರಂಟಿಯ 10 ಕೆ.ಜಿ. ಅಕ್ಕಿ ವಿತರಿಸಿ ಪೌರುಷ ತೋರಿಸಲಿ: ಕುಯಿಲಾಡಿ ಸುರೇಶ್ ನಾಯಕ್”

ಗ್ಯಾರಂಟಿ ಜಾರಿಗೊಳಿಸಲು ವಿಫಲವಾಗಿರುವ ಕಾಂಗ್ರೆಸ್ಸಿಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ ಬಳಿ ಅಕ್ಕಿ ನೀಡುವಂತೆ ಒತ್ತಾಯಿಸಲು ನಾಚಿಕೆಯಾಗುವುದಿಲ್ಲವೆ?: ಮಹೇಶ್ ಠಾಕೂರ್ ಪ್ರಶ್ನೆ

ಉಡುಪಿ: ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ 10 ಕೆ.ಜಿ. ಅಕ್ಕಿಯನ್ನು ಫ್ರೀಯಾಗಿ ನೀಡುತ್ತೇವೆ ಎಂದು ಬೊಗಳೆ ಬಿಟ್ಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಮುಖಂಡರು ತಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ವಿಫಲಗೊಂಡು, ಇದೀಗ ಅಕ್ಕಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವನ್ನು ಒತ್ತಾಯಿಸಲು ನಾಚಿಕೆಯಾಗುವುದಿಲ್ಲವೆ ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಮುಖಂಡರು ಉಚಿತ 10 ಕೆ.ಜಿ.Continue reading “ಗ್ಯಾರಂಟಿ ಜಾರಿಗೊಳಿಸಲು ವಿಫಲವಾಗಿರುವ ಕಾಂಗ್ರೆಸ್ಸಿಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ ಬಳಿ ಅಕ್ಕಿ ನೀಡುವಂತೆ ಒತ್ತಾಯಿಸಲು ನಾಚಿಕೆಯಾಗುವುದಿಲ್ಲವೆ?: ಮಹೇಶ್ ಠಾಕೂರ್ ಪ್ರಶ್ನೆ”

ಉಡುಪಿ ಜಿಲ್ಲಾ ಬಿಜೆಪಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21ರಂದು ಉಡುಪಿಯ ಶೇಷಶಯನ ಸಭಾಂಗಣದಲ್ಲಿ ಆಚರಿಸಲಾಯಿತು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ,Continue reading “ಉಡುಪಿ ಜಿಲ್ಲಾ ಬಿಜೆಪಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ”

Create your own website, free on WordPress.com.Create your own website.
Start free