ಕಾಪು: ಉದ್ಯಾವರ ಗರಡಿ ರಸ್ತೆಯ ಸಮೀಪದ ನಮ್ಮ ಕಾರ್ಯಕರ್ತರಾಗಿರುವ ರಕ್ಷಿತ್ ಕೋಟ್ಯಾನ್ ರವರ ಮನೆಗೆ ನುಗ್ಗಿ ಧಾಂಧಲೆ ನಡೆಸಿ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು ಖಂಡನೀಯ. ಈ ಕುರಿತಂತೆ ಪೋಲೀಸರು ಮೂರು ಜನರನ್ನು ಬಂಧಿಸಿದ್ದು ಇದರ ಮಾಸ್ಟರ್ ಮೈಂಡ್ ಉದ್ಯಾವರದ ಕಾಂಗ್ರೆಸ್ ಕಾರ್ಯಕರ್ತ ಎನ್ನುವ ಬಗ್ಗೆ ಬಂಧಿತರು ಹೇಳಿಕೆ ಕೊಟ್ಟಿದ್ದು ಪೋಲೀಸರು ಈ ಕೂಡಲೇ ಅವರನ್ನು ಬಂಧಿಸಬೇಕು. ಇಂತಹ ಗೂಂಡಾಗಿರಿಗಳಿಂದ ನಮ್ಮ ಕಾರ್ಯಕರ್ತರನ್ನು ಬೆದರಿಸಬಹುದು ಎಂದು ಕಾಂಗ್ರೆಸ್ ಅಂದುಕೊಂಡರೆ ಅದು ಅವರ ಭ್ರಮೆ. ತಪ್ಪಿತಸ್ಥ ಯಾರೇ ಇರಲಿ ಸೂಕ್ತContinue reading “ಉದ್ಯಾವರದಲ್ಲಿ ಕಾಂಗ್ರೆಸ್ ಪ್ರೇರಿತ ಗೂಂಡಾಗಿರಿ: ಶ್ರೀಕಾಂತ್ ನಾಯಕ್ ಖಂಡನೆ”
Monthly Archives: June 2023
ಕೇಂದ್ರದಿಂದ ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ : ಜಿಲ್ಲಾ ಬಿಜೆಪಿ
ಉಡುಪಿ: 2023-24ರ ಬೆಳೆ ವರ್ಷದಲ್ಲಿ ಬೆಳೆಯುವ ಮತ್ತು ಮುಂಗಾರು ಮಾರುಕಟ್ಟೆ ಅವಧಿಯಲ್ಲಿ ಖರೀದಿಸುವ ಎಲ್ಲ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಿ ಆದೇಶ ಹೊರಡಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತತ್ವದ ಕೇಂದ್ರ ಸರಕಾರದ ಕ್ರಮವನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ಕೃಷಿ ಪ್ರಧಾನ ದೇಶ ಭಾರತದಲ್ಲಿ ಬೆಳೆಗಳ ವೈವಿಧ್ಯತೆಗೆ ಉತ್ತೇಜನ ಮತ್ತು ಹೆಚ್ಚಿನ ಪ್ರದೇಶದಲ್ಲಿ ಬಿತ್ತನೆಗೆ ಪ್ರೋತ್ಸಾಹ ನೀಡುವ ಜೊತೆಗೆ ಗ್ರಾಮೀಣ ರೈತರ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕೈಗೊಂಡಿರುವ ಈ ಮಹತ್ವದ ನಿರ್ಧಾರContinue reading “ಕೇಂದ್ರದಿಂದ ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ : ಜಿಲ್ಲಾ ಬಿಜೆಪಿ”
ಅರೆಬೆಂದ ಗ್ಯಾರಂಟಿಗಳ ನಡುವೆ ಗೊಂದಲದ ಗೂಡಾಗಿರುವ ಕಾಂಗ್ರೆಸ್ ಸರಕಾರ; ತಾಳ್ಮೆ ಕಳೆದುಕೊಂಡ ಜನತೆ ಬೀದಿಗಿಳಿಯುವ ದಿನ ದೂರವಿಲ್ಲ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಅಭಿವೃದ್ಧಿಯ ವಿಚಾರದಲ್ಲಿ ಬಿಜೆಪಿಯನ್ನು ಎದುರಿಸಲು ಸಾಧ್ಯವಿಲ್ಲ ಎಂಬುದನ್ನು ಅರಿತಿರುವ ಕಾಂಗ್ರೆಸ್ 5 ಉಚಿತ ಗ್ಯಾರಂಟಿಗಳ ಆಮಿಷವೊಡ್ಡಿ ಚುನಾವಣೆಯನ್ನು ಗೆದ್ದರೂ, ಈ 5 ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸದೆ ರಾಜ್ಯದ ಜನತೆಗೆ ಮೋಸ ಎಸಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಸರಕಾರದ 5 ಗ್ಯಾರಂಟಿ ಯೋಜನೆ ಜಾರಿ ಬಳಿಕ ಬಿಜೆಪಿ ಜನರಲ್ಲಿ ಗೊಂದಲ ಮೂಡಿಸುತ್ತಿದೆ ಎಂಬ ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಚುನಾವಣಾ ಪೂರ್ವದಲ್ಲಿ ಬೇಕಾಬಿಟ್ಟಿContinue reading “ಅರೆಬೆಂದ ಗ್ಯಾರಂಟಿಗಳ ನಡುವೆ ಗೊಂದಲದ ಗೂಡಾಗಿರುವ ಕಾಂಗ್ರೆಸ್ ಸರಕಾರ; ತಾಳ್ಮೆ ಕಳೆದುಕೊಂಡ ಜನತೆ ಬೀದಿಗಿಳಿಯುವ ದಿನ ದೂರವಿಲ್ಲ: ಕುಯಿಲಾಡಿ ಸುರೇಶ್ ನಾಯಕ್”
ಕಾಂಗ್ರೆಸ್ಸಿನ ಗೊಡ್ಡು ಬೆದರಿಕೆಗಳಿಗೆ ಬಿಜೆಪಿ ಬೆದರುವುದಿಲ್ಲ; ಎಲ್ಲಾ ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸಿ: ಕುಯಿಲಾಡಿಕಾಂಗ್ರೆಸ್ಸಿನ ಜನವಿರೋಧಿ ನೀತಿ ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ
ಉಡುಪಿ: ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಜನತೆಗೆ ನೀಡಿರುವ 5 ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ 24 ಗಂಟೆಗಳೊಳಗೆ ಯಥಾವತ್ತಾಗಿ ಜಾರಿಗೊಳಿಸದೆ ರಾಜ್ಯದ ಜನತೆಗೆ ದ್ರೋಹ ಬಗೆದಿದೆ. 200 ಯುನಿಟ್ ಉಚಿತ ವಿದ್ಯುತ್ ಎಂದಿರುವ ಕಾಂಗ್ರೆಸ್ ಇದೀಗ 1 ವರ್ಷದ ಸರಾಸರಿ ಎಂದು ವರಸೆ ಬದಲಿಸಿ, ವಿದ್ಯುತ್ ದರವನ್ನು ಕೂಡಾ ದಿಡೀರ್ ಹೆಚ್ಚಿಸಿರುವುದು ಖಂಡನೀಯ. ದಿನಕ್ಕೊಂದು ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಗೊಂದಲ ಸೃಷ್ಠಿಸುವ ಬದಲು ಸರಕಾರ ಜನಪರ ಆಡಳಿತದತ್ತ ಗಮನ ಹರಿಸುವುದು ಉತ್ತಮ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ಕಾಂಗ್ರೆಸ್ಸಿನ ಗೊಡ್ಡು ಬೆದರಿಕೆಗಳಿಗೆ ಬಿಜೆಪಿ ಬೆದರುವುದಿಲ್ಲ; ಎಲ್ಲಾ ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸಿ: ಕುಯಿಲಾಡಿಕಾಂಗ್ರೆಸ್ಸಿನ ಜನವಿರೋಧಿ ನೀತಿ ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ”
ರಾಜ್ಯ ಸರಕಾರದ ವಚನಭ್ರಷ್ಟತೆ ನೀತಿ ಖಂಡಿಸಿ ಕಾಪುವಿನಲ್ಲಿ ಪ್ರತಿಭಟನೆ
ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ವತಿಯಿಂದ ಕಾಪು ಪೇಟೆಯಲಿ ಕಾಂಗ್ರೆಸ್ ನೇತ್ರತ್ವದ ರಾಜ್ಯ ಸರಕಾರದ ವಿರುಧ್ಧ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ರಾಜ್ಯ ಸರಕಾರ 200 ಯುನಿಟ್ ವಿದ್ಯುತ್ ಎಲ್ಲರಿಗೂ ಉಚಿತ ಎಂದು ಹೇಳಿ ಇದೀಗ ವಾರ್ಷಿಕ ಸರಾಸರಿಯ ಶೇ.10 ರಷ್ಟು ಹೆಚ್ಚು ಮಾತ್ರ ಉಚಿತ ಎಂದು ಹೇಳಿ ಜನರಿಗೆ ಕೊಟ್ಟ ವಚನ ಮುರಿದು ವಚನಭ್ರಷ್ಟ ರಾಗಿದ್ದಾರೆ, ಅಲ್ಲದೆ ಪ್ರತಿ ಯುನಿಟ್Continue reading “ರಾಜ್ಯ ಸರಕಾರದ ವಚನಭ್ರಷ್ಟತೆ ನೀತಿ ಖಂಡಿಸಿ ಕಾಪುವಿನಲ್ಲಿ ಪ್ರತಿಭಟನೆ”
ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಏಕನಾಥ ಶಿಂಧೆ ಭೇಟಿ
ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಏಕನಾಥ ಶಿಂಧ ಅವರನ್ನು ಇಂದು ದಿನಾಂಕ 05-06-2023 ರಂದು ಮುಂಬೈನಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭೇಟಿಯಾದರು. ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಪು ಕ್ಷೇತ್ರಕ್ಕೆ ತನ್ನ ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಮುಖ್ಯಮಂತ್ರಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಮುಖ್ಯಮಂತ್ರಿಗಳಾದ ಏಕನಾಥ ಶಿಂಧೆ ಅವರು ಕಾಪು ಕ್ಷೇತ್ರ ಸರ್ವಾಂಗೀಣ ರೀತಿಯಲ್ಲಿ ಅಭಿವೃದ್ಧಿ ಹೊಂದುವಂತಾಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಹೋಟೆಲ್ ಉದ್ಯಮಿಗಳಾದ ರಿತೇಶ್ ಶೆಟ್ಟಿ,Continue reading “ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಏಕನಾಥ ಶಿಂಧೆ ಭೇಟಿ”
ಮದುವೆ ಮನೆ ಮೆಹೆಂದಿ ಕಾರ್ಯಕ್ರಮದಲ್ಲಿ ಕುಣಿತ, ಕುಡಿತಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗುವುದನ್ನು ನಿಲ್ಲಿಸಿ:ರಾಜು ಪೂಜಾರಿ
ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಳ್ಳೂರು ಜನ ಜಾಗೃತಿ ವೇದಿಕೆಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಭಾನುವಾರ ಕೊಳಲಗಿರಿ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಪ್ಪೂರು ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ರಾಜು ಪೂಜಾರಿ ಅವರು, ಮಹಿಳೆಯರು ಕೇವಲ ತಂಬಾಕನ್ನು ಮಾತ್ರ ವಿರೋಧಿಸುವುದಲ್ಲದೆ ಮೆಹೆಂದಿ ಕಾರ್ಯಕ್ರಮದಲ್ಲಿ ಕುಣಿತ ಮತ್ತು ಕುಡಿತಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗುವುದನ್ನು ನಿಲ್ಲಿಸುವಂತೆ ಜಾಗೃತಿ ಮೂಡಿಸಬೇಕು ಎಂದರು. ನಂತರ ಕೊಳಲಗಿರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಧೂಮಪಾನದಿಂದಾಗುವContinue reading “ಮದುವೆ ಮನೆ ಮೆಹೆಂದಿ ಕಾರ್ಯಕ್ರಮದಲ್ಲಿ ಕುಣಿತ, ಕುಡಿತಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗುವುದನ್ನು ನಿಲ್ಲಿಸಿ:ರಾಜು ಪೂಜಾರಿ”
ನನ್ನ ಮಾತಿಗೆ ಈಗಲೂ ಬದ್ಧನಾಗಿದ್ದೇನೆ; ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಪ್ರಧಾನಿ ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇನೆ ಎಂದಿರುವುದನ್ನು ಮೊದಲು ಸಾಬೀತುಪಡಿಸಲಿ: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸವಾಲು
ಉಡುಪಿ: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಬೇಕಾಬಿಟ್ಟಿಯಾಗಿ ಘೋಷಿಸಿರುವ 5 ಉಚಿತಗಳ ಗ್ಯಾರಂಟಿಗಳನ್ನು ಯಾವುದೇ ಷರತ್ತುಗಳಿಲ್ಲದೆ ಯಥಾಪ್ರಕಾರ 5 ವರ್ಷ ಪೂರ್ತಿ ಅನುಷ್ಠಾನಗೊಳಿಸಿದರೆ 2028 ಮೇ ತಿಂಗಳಲ್ಲಿ ತಲೆ ಬೋಳಿಸಿ ಕೆಪಿಸಿಸಿ ಕಛೇರಿಯ ಮುಂದೆ ಕುಳಿತುಕೊಳ್ಳುವ ಮಾತಿಗೆ ನಾನು ಈಗಲೂ ಬದ್ಧನಾಗಿದ್ದೇನೆ. ನಿರಂತರ ಸುಳ್ಳು ಹೇಳಿಕೆಗಳಲ್ಲಿ ನಿರತರಾಗಿರುವ ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಪ್ರಧಾನಿ ನರೇಂದ್ರ ಮೋದಿಯವರು ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇನೆ ಎಂದಿರುವುದನ್ನು ಮೊದಲು ದಾಖಲೆ ಸಮೇತ ಸಾಬೀತುಪಡಿಸಲಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ನನ್ನ ಮಾತಿಗೆ ಈಗಲೂ ಬದ್ಧನಾಗಿದ್ದೇನೆ; ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಪ್ರಧಾನಿ ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇನೆ ಎಂದಿರುವುದನ್ನು ಮೊದಲು ಸಾಬೀತುಪಡಿಸಲಿ: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸವಾಲು”
ವಿಶ್ವದಲ್ಲೇ ಭಾರತದ ಆರ್ಥಿಕಾಭಿವೃದ್ಧಿಗೆ ಪ್ರಥಮ ಸ್ಥಾನ : ಜಿಲ್ಲಾ ಬಿಜೆಪಿ ಅಭಿನಂದನೆ
ಉಡುಪಿ: ವಿಶ್ವದ ಅನೇಕ ರಾಷ್ಟ್ರಗಳು ದಿವಾಳಿತನದ ಅಂಚಿನಲ್ಲಿ ಸಾಗುತ್ತಿರುವ ಸಂದಿಗ್ಧ ಕಾಲಘಟ್ಟದಲ್ಲಿ ಭಾರತದ ಆರ್ಥಿಕತೆ ಪ್ರಸಕ್ತ ಸಾಲಿನಲ್ಲಿ ಶೇ.7.2 ಜಿಡಿಪಿ ದರದ ನಿರೀಕ್ಷೆಯೊಂದಿಗೆ ಸದೃಢವಾಗಿದ್ದು, ವಿಶ್ವದ ಅತ್ಯಂತ ವೇಗದ ಆರ್ಥಿಕಾಭಿವೃದ್ಧಿಯಲ್ಲಿ ಪ್ರಥಮ ಸ್ಥಾನ ಗಳಿಸಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ಕೇಂದ್ರ ಸರಕಾರದ ಸಾಂಖ್ಯಿಕ ಮತ್ತು ಯೋಜನೆಗಳ ಅನುಷ್ಠಾನ ಸಚಿವಾಲಯ ಬಿಡುಗಡೆ ಮಾಡಿರುವ ದತ್ತಾಂಶಗಳಲ್ಲಿ ಈ ವಿಷಯ ಸ್ಪಷ್ಟವಾಗಿದ್ದು, ಜನರ ದೃಢವಾದ ಬೆಂಬಲ ಮತ್ತು ಅರ್ಥ ವ್ಯವಸ್ಥೆಯ ವಿವಿಧ ಕ್ಷೇತ್ರಗಳಲ್ಲಿನ ಸಾಧನೆಯೇ ಇದಕ್ಕೆ ಕಾರಣ ಎಂದಿರುವ ಪ್ರಧಾನಿContinue reading “ವಿಶ್ವದಲ್ಲೇ ಭಾರತದ ಆರ್ಥಿಕಾಭಿವೃದ್ಧಿಗೆ ಪ್ರಥಮ ಸ್ಥಾನ : ಜಿಲ್ಲಾ ಬಿಜೆಪಿ ಅಭಿನಂದನೆ”