ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತ

ಉಡುಪಿ: ಜು.14ರ ಬೆಳಿಗ್ಗೆ 11.00 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿರುವ ಪ್ರಬುದ್ಧರ ಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳ ಕುರಿತು ಮಾಹಿತಿ ಹಂಚಿಕೊಳ್ಳಲು ಜಿಲ್ಲೆಗೆ ಆಗಮಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಉಡುಪಿಯ ಪ್ರವಾಸಿ ಬಂಗಲೆಯಲ್ಲಿ ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯContinue reading “ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತ”

ಚಿಕ್ಕೋಡಿಯ ಜೈನಮುನಿಗಳ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳನ್ನು ಖಂಡಿಸಿ ಕಾಪು ಬಿಜೆಪಿಯ ನೇತ್ರತ್ವದಲ್ಲಿ ಪ್ರತಿಭಟನಾ ಸಭೆ

ಕಾಪು: ಚಿಕ್ಕೋಡಿಯಲ್ಲಿ ಜೈನ ಮುನಿಗಳ ಅಮಾನುಷ ಹತ್ಯೆ ಸರಣಿ ಹತ್ಯೆಗಳನ್ನು ಖಂಡಿಸಿ ರಾಜ್ಯ ಸರಕಾರದ ಅಲ್ಪಸಂಖ್ಯಾತ ತುಷ್ಟೀಕರಣ ನೀತಿಯನ್ನು ಖಂಡಿಸಿ ಪ್ರತಿಭಟನಾ ಸಭೆ ಕಾಪು ಬಿಜೆಪಿ ಕಚೇರಿ ಬಳಿ ನಡೆಯಿತು. ಸಭೆ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಳೆದ ಎರಡು ತಿಂಗಳಲ್ಲಿ ಎರಡನೇ ಬಾರಿ ನಾವು‌ಬೀದಿಗಿಳಿದು ಹೋರಾಟ ಮಾಡುತ್ತಿದ್ದೇವೆ. ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಅಲ್ಪಸಂಖ್ಯಾರಿಗೆ ನೀಡಿದ ಪ್ರಾಧಾನ್ಯತೆಯಿಂದ ಪ್ರೇರಿತರಾದ ಸಮಾಜಘಾತುಕ ಶಕ್ತಿಗಳು ಜೈನ ಮುನಿಯ ಅಮಾನುಷ ಹತ್ಯೆ ಮಾಡಿದ್ದು, ಇದರ ಹಿಂದೆ ಮೂಲಭೂತವಾದಿಗಳContinue reading “ಚಿಕ್ಕೋಡಿಯ ಜೈನಮುನಿಗಳ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳನ್ನು ಖಂಡಿಸಿ ಕಾಪು ಬಿಜೆಪಿಯ ನೇತ್ರತ್ವದಲ್ಲಿ ಪ್ರತಿಭಟನಾ ಸಭೆ”

ಉಡುಪಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ನೇಮಕ

ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಕೂರ್ಮ ರಾವ್ ಎಂ. ಅವರಿಗೆ ವರ್ಗಾವಣೆ ನೀಡವಲಾಗಿದೆ.ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ.ಕೆ ಅವರು ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದವರು, ಇದೀಗ ಸರಕಾರದ ಆದೇಶದ ಮೇರೆಗೆ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದಾರೆ.

Create your own website, free on WordPress.com.Create your own website.
Start free