ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜುಲೈ 22, ಶನಿವಾರ ಬೆಳಿಗ್ಗೆ ಗಂಟೆ 10.30ಕ್ಕೆ ಉಡುಪಿ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದ ಬಳಿ ರಾಜ್ಯ ಸರ್ಕಾರದ ಸರ್ವಾಧಿಕಾರಿ ಧೋರಣೆ, ಸಂವಿಧಾನ ವಿರೋಧಿ ನೀತಿ, ಹದಗೆಟ್ಟ ಕಾನೂನು ಸುವ್ಯವಸ್ಥೆ, ರೈತರ ಸರಣಿ ಆತ್ಮಹತ್ಯೆ, ಬೆಲೆ ಏರಿಕೆ ವಿರುದ್ದ ಹಾಗೂ ಬೆಂಗಳೂರಿನಲ್ಲಿ ಬಂಧಿತ ಶಂಕಿತ ಭಯೋತ್ಪಾದಕರ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿContinue reading “ಜು.22ರಂದು ರಾಜ್ಯ ಸರಕಾರದ ಸರ್ವಾಧಿಕಾರಿ ಧೋರಣೆ, ಸಂವಿಧಾನ ವಿರೋಧಿ ನೀತಿ, ಬೆಲೆ ಏರಿಕೆ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ”
Monthly Archives: July 2023
ಕಾಂಗ್ರೆಸ್ ಸರ್ವಾಧಿಕಾರಿ ಧೋರಣೆ; ಬಿಜೆಪಿ ಶಾಸಕರ ಅಮಾನತು ರಾಜ್ಯದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕುಯಿಲಾಡಿ
ಉಡುಪಿ: ಕಾಂಗ್ರೆಸ್ ದೇಶದೆಲ್ಲೆಡೆ ಕುಖ್ಯಾತರಾಗಿರುವ ಹಲವಾರು ಭ್ರಷ್ಟ ರಾಜಕೀಯ ಮುಖಂಡರನ್ನು ಬೆಂಗಳೂರಿಗೆ ಕರೆಸಿ ನಡೆಸಿರುವ ಸ್ವಯಂ ಸ್ವಾರ್ಥದ ರಾಜಕೀಯ ಸಮಾವೇಶಕ್ಕೆ ಸರಕಾರದ ಐಎಎಸ್ ಅಧಿಕಾರಿಗಳನ್ನು ನಿಯಮ ಬಾಹೀರವಾಗಿ ಬಳಸಿರುವ ಕ್ರಮದ ಕುರಿತು ವಿವರಣೆ ಕೇಳಿದ್ದ ಬಿಜೆಪಿಯ 10 ಶಾಸಕರನ್ನು ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ್ದಾರೆಂಬ ನೆಪವೊಡ್ಡಿ ಸರ್ವಾಧಿಕಾರಿ ಧೋರಣೆಯಿಂದ ಸದನದಿಂದ ಅಮಾನತುಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಹಾಗೂ ಈ ಬಾರಿಯ ಪ್ರಥಮ ಅಧಿವೇಶನದಲ್ಲೇ ನಡೆದ ಈ ಘಟನೆ ರಾಜ್ಯದ ಇತಿಹಾಸದಲ್ಲೇ ಕಪ್ಪು ಚುಕ್ಕೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ಕಾಂಗ್ರೆಸ್ ಸರ್ವಾಧಿಕಾರಿ ಧೋರಣೆ; ಬಿಜೆಪಿ ಶಾಸಕರ ಅಮಾನತು ರಾಜ್ಯದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕುಯಿಲಾಡಿ”
ಬಿಜೆಪಿ ಶಾಸಕರ ಅಮಾನತು ಮೂಲಕ ವಿಪಕ್ಷಗಳನ್ನು ಹತ್ತಿಕ್ಕಲು ಸ್ಪೀಕರ್ ಅಧಿಕಾರ ದುರ್ಬಳಕೆ ಮಾಡಿದ ಕಾಂಗ್ರೆಸ್ : ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್
ಉಡುಪಿ: ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಪ್ರಾಯೋಜಿತ ಹೊರ ರಾಜ್ಯಗಳ ಕಳಂಕಿತ ರಾಜಕಾರಿಣಿಗಳ ಸಮಾವೇಶಕ್ಕೆ ರಾಜ್ಯದ ಐಎಎಸ್ ಅಧಿಕಾರಿಗಳನ್ನು ನಿಯೋಜನೆ ಮಾಡಿ ಶಿಷ್ಟಾಚಾರ ಉಲ್ಲಂಘಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿದ ಬಿಜೆಪಿಯ 10 ಶಾಸಕರನ್ನು ಸದನದಿಂದ ಅಮಾನತುಗೊಳಿಸುವ ಮೂಲಕ ಕಾಂಗ್ರೆಸ್ ವಿಪಕ್ಷಗಳನ್ನು ಹತ್ತಿಕ್ಕಲು ಸ್ಪೀಕರ್ ಸ್ಥಾನದ ಅಧಿಕಾರವನ್ನು ದುರ್ಬಳಕೆ ಮಾಡಿರುವುದು ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ತಮ್ಮ ಹುಳುಕನ್ನು ಮುಚ್ಚಿಹಾಕಲು ಬಿಜೆಪಿ ಶಾಸಕರನ್ನು ಅಮಾನತುಗೊಳಿಸುವ ಜೊತೆಗೆContinue reading “ಬಿಜೆಪಿ ಶಾಸಕರ ಅಮಾನತು ಮೂಲಕ ವಿಪಕ್ಷಗಳನ್ನು ಹತ್ತಿಕ್ಕಲು ಸ್ಪೀಕರ್ ಅಧಿಕಾರ ದುರ್ಬಳಕೆ ಮಾಡಿದ ಕಾಂಗ್ರೆಸ್ : ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್”
ಶಂಕಿತ ಉಗ್ರರ ಜಾಲದ ತನಿಖೆಯನ್ನು ಎನ್‍ಐಎಗೆ ವಹಿಸಿ- ಸಿ.ಟಿ.ರವಿ ಆಗ್ರಹ
ಬೆಂಗಳೂರು: ಶಂಕಿತ ಉಗ್ರರನ್ನು ಬಂಧಿಸಿದ ಕ್ರಮವನ್ನು ಸ್ವಾಗತಿಸಿದ ಅವರು ಸಂಬಂಧಿಸಿದ ಇಲಾಖೆಯನ್ನು ಅಭಿನಂದಿಸಿದರು. ಇನ್ನೊಬ್ಬ ಶಂಕಿತ ಉಗ್ರ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಈ ಜಾಲದ ಕುರಿತು ತನಿಖೆಯನ್ನು ಎನ್‍ಐಎಗೆ ವಹಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಆಗ್ರಹಿಸಿದರು.ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಮಾತನಾಡಿದ ಅವರು, ಕರ್ನಾಟಕ ರಾಜ್ಯ ವ್ಯಾಪ್ತಿಯನ್ನು ಮೀರಿ ವಿದೇಶಕ್ಕೂ ಈ ಜಾಲ ಹರಡಿದೆ ಎಂಬ ಸಂಶಯವಿದೆ. ಆದ್ದರಿಂದ ಈ ಪ್ರಕರಣದ ತನಿಖೆಯನ್ನು ಎನ್‍ಐಎಗೆContinue reading “ಶಂಕಿತ ಉಗ್ರರ ಜಾಲದ ತನಿಖೆಯನ್ನು ಎನ್‍ಐಎಗೆ ವಹಿಸಿ- ಸಿ.ಟಿ.ರವಿ ಆಗ್ರಹ”
ಬಿಜೆಪಿ ಶಾಸಕರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ: ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ
ಉಡುಪಿ: ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಸದನದಿಂದ ಅಮಾನತುಗೊಳಿಸಿರುವ ಸ್ಪೀಕರ್ ರವರ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ಪ್ರಸ್ತುತ ಕಾಂಗ್ರೆಸ್ ನೇತೃತ್ವದ ಗೂಂಡಾರಾಜ್ ಆಡಳಿತ ಚಾಲ್ತಿಯಲ್ಲಿದೆ. ವಿಧಾನಸಭೆಯ ಸ್ಪೀಕರ್ ಕಾಂಗ್ರೆಸ್ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ ಶಾಸಕರು ಸದನದಲ್ಲಿ ಗೂಂಡಾಗಿರಿ ನಡೆಸಿರುವುದನ್ನು ರಾಜ್ಯದ ಜನತೆ ಮರೆತಿಲ್ಲ. ಆಗ ಯಾವುದೇ ಅವಸರದ ಕ್ರಮ ಕೈಗೊಂಡಿರುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಶ್ನಿಸುವ ಹಕ್ಕು ಎಲ್ಲರಿಗೂContinue reading “ಬಿಜೆಪಿ ಶಾಸಕರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ: ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ”
9 ವರ್ಷಗಳಲ್ಲಿ ಬಡವರ ಜೀವನ ಮಟ್ಟ ಸುಧಾರಣೆ; ಪ್ರಬುದ್ಧರ ಗೋಷ್ಠಿಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಮಣಿಪಾಲ, ಜು.14: ಕೊರೊನಾ ಕಾಲಘಟ್ಟದ ಸಂದಿಗ್ಧ ಪರಿಸ್ಥಿತಿ ಸಹಿತವಾಗಿ ಕಳೆದ 9 ವರ್ಷಗಳಿಂದ ಕೇಂದ್ರ ಸರಕಾರವು ದೇಶದ ಜನರಿಗೆ ಅಗತ್ಯ ಮೂಲ ಸೌಕರ್ಯ ಒದಗಿಸುವ ಎಲ್ಲ ವ್ಯವಸ್ಥೆ ಮಾಡಿದೆ ಮತ್ತು ದೇಶವು ಸೇವೆಯ ಉತ್ಕೃಷ್ಟತೆಯನ್ನು ಕಂಡಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಮಣಿಪಾಲದ ಕಂಟ್ರಿ ಇನ್ ಹೊಟೇಲ್ ನಲ್ಲಿ ಜು.14ರಂದು ಹಮ್ಮಿಕೊಂಡಿದ್ದ ಪ್ರಬುದ್ಧರ ಗೋಷ್ಠಿಯಲ್ಲಿ ಮಾತನಾಡಿ, ಕೊರೊನಾContinue reading “9 ವರ್ಷಗಳಲ್ಲಿ ಬಡವರ ಜೀವನ ಮಟ್ಟ ಸುಧಾರಣೆ; ಪ್ರಬುದ್ಧರ ಗೋಷ್ಠಿಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್”
ಬಿಜೆಪಿ ಉಡುಪಿ ಗ್ರಾಮಾಂತರ ಮಂಡಲ ಸಭೆ: ಮೋದಿ ಆಡಳಿತದ 9 ವರ್ಷಗಳ ಸಾಧನೆ ಪ್ರಚಲಿತಗೊಳಿಸಲು ‘ಮಹಾ ಸಂಪರ್ಕ ಅಭಿಯಾನ’
ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳನ್ನು ಜನಮಾನಸದಲ್ಲಿ ಪ್ರಚಲಿತಗೊಳಿಸುವ ಸಲುವಾಗಿ ಪಕ್ಷ ಹಮ್ಮಿಕೊಂಡಿರುವ ಸರಣಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಮತ್ತು ಮಹಾಸಂಪರ್ಕ ಅಭಿಯಾನದ ಕರಪತ್ರ ಬಿಡುಗಡೆ ಕಾರ್ಯಕ್ರಮವು ಬಿಜೆಪಿ ಉಡುಪಿ ಗ್ರಾಮಾಂತರ ಅಧ್ಯಕ್ಷೆ ವೀಣಾ ನಾಯ್ಕ್ ರವರ ಅಧ್ಯಕ್ಷತೆಯಲ್ಲಿ ಮಂಡಲ ಕಛೇರಿಯಲ್ಲಿ ನಡೆಯಿತು. ಅಭಿಯಾನದ ಸರಣಿ ಕಾರ್ಯಕ್ರಮಗಳ ಗ್ರಾಮಾಂತರ ಮಂಡಲ ಉಸ್ತುವಾರಿ ರೇಶ್ಮಾ ಉದಯ ಶೆಟ್ಟಿ ಮಾತನಾಡಿ, ಪಕ್ಷದ ಸೂಚನೆಯಂತೆ ಮಂಡಲ ಮಟ್ಟದಲ್ಲಿ ಹಿರಿಯ ಬಿಜೆಪಿಗರ ಸಮಾವೇಶ, ವ್ಯಾಪಾರಸ್ಥರ ಸಮಾವೇಶ,Continue reading “ಬಿಜೆಪಿ ಉಡುಪಿ ಗ್ರಾಮಾಂತರ ಮಂಡಲ ಸಭೆ: ಮೋದಿ ಆಡಳಿತದ 9 ವರ್ಷಗಳ ಸಾಧನೆ ಪ್ರಚಲಿತಗೊಳಿಸಲು ‘ಮಹಾ ಸಂಪರ್ಕ ಅಭಿಯಾನ’”
ಬಿಜೆಪಿ ಕಾರ್ಕಳ ಮಂಡಲ ಸಭೆ: ‘ಮಹಾ ಸಂಪರ್ಕ ಅಭಿಯಾನ’ದ ಕರಪತ್ರ ಬಿಡುಗಡೆ
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಆಡಳಿತದ 9 ವರ್ಷಗಳ ಸಾಧನೆಗಳ ಪ್ರಚಾರದ ಅಂಗವಾಗಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಮತ್ತು ಮಹಾಸಂಪರ್ಕ ಅಭಿಯಾನದ ಕರಪತ್ರ ಬಿಡುಗಡೆ ಕಾರ್ಯಕ್ರಮವು ಬಿಜೆಪಿ ಕಾರ್ಕಳ ಮಂಡಲಾಧ್ಯಕ್ಷ ಮಹಾವೀರ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಕಾರ್ಕಳ ಮಂಡಲ ಕಛೇರಿಯಲ್ಲಿ ನಡೆಯಿತು. ಅಭಿಯಾನದ ಕಾರ್ಕಳ ಮಂಡಲ ಉಸ್ತುವಾರಿಗಾಳಾದ ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯಕುಮಾರ್ ಉದ್ಯಾವರ ಮತ್ತು ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಮಾತನಾಡಿ, ಪಕ್ಷದ ಸೂಚನೆಯಂತೆ ಮಂಡಲ ಮಟ್ಟದಲ್ಲಿ ಹಿರಿಯ ಬಿಜೆಪಿಗರContinue reading “ಬಿಜೆಪಿ ಕಾರ್ಕಳ ಮಂಡಲ ಸಭೆ: ‘ಮಹಾ ಸಂಪರ್ಕ ಅಭಿಯಾನ’ದ ಕರಪತ್ರ ಬಿಡುಗಡೆ”
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತ
ಉಡುಪಿ: ಜು.14ರ ಬೆಳಿಗ್ಗೆ 11.00 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿರುವ ಪ್ರಬುದ್ಧರ ಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳ ಕುರಿತು ಮಾಹಿತಿ ಹಂಚಿಕೊಳ್ಳಲು ಜಿಲ್ಲೆಗೆ ಆಗಮಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಉಡುಪಿಯ ಪ್ರವಾಸಿ ಬಂಗಲೆಯಲ್ಲಿ ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯContinue reading “ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತ”
ಚಿಕ್ಕೋಡಿಯ ಜೈನಮುನಿಗಳ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳನ್ನು ಖಂಡಿಸಿ ಕಾಪು ಬಿಜೆಪಿಯ ನೇತ್ರತ್ವದಲ್ಲಿ ಪ್ರತಿಭಟನಾ ಸಭೆ
ಕಾಪು: ಚಿಕ್ಕೋಡಿಯಲ್ಲಿ ಜೈನ ಮುನಿಗಳ ಅಮಾನುಷ ಹತ್ಯೆ ಸರಣಿ ಹತ್ಯೆಗಳನ್ನು ಖಂಡಿಸಿ ರಾಜ್ಯ ಸರಕಾರದ ಅಲ್ಪಸಂಖ್ಯಾತ ತುಷ್ಟೀಕರಣ ನೀತಿಯನ್ನು ಖಂಡಿಸಿ ಪ್ರತಿಭಟನಾ ಸಭೆ ಕಾಪು ಬಿಜೆಪಿ ಕಚೇರಿ ಬಳಿ ನಡೆಯಿತು. ಸಭೆ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಳೆದ ಎರಡು ತಿಂಗಳಲ್ಲಿ ಎರಡನೇ ಬಾರಿ ನಾವುಬೀದಿಗಿಳಿದು ಹೋರಾಟ ಮಾಡುತ್ತಿದ್ದೇವೆ. ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಅಲ್ಪಸಂಖ್ಯಾರಿಗೆ ನೀಡಿದ ಪ್ರಾಧಾನ್ಯತೆಯಿಂದ ಪ್ರೇರಿತರಾದ ಸಮಾಜಘಾತುಕ ಶಕ್ತಿಗಳು ಜೈನ ಮುನಿಯ ಅಮಾನುಷ ಹತ್ಯೆ ಮಾಡಿದ್ದು, ಇದರ ಹಿಂದೆ ಮೂಲಭೂತವಾದಿಗಳContinue reading “ಚಿಕ್ಕೋಡಿಯ ಜೈನಮುನಿಗಳ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳನ್ನು ಖಂಡಿಸಿ ಕಾಪು ಬಿಜೆಪಿಯ ನೇತ್ರತ್ವದಲ್ಲಿ ಪ್ರತಿಭಟನಾ ಸಭೆ”