ಉಡುಪಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ನೇಮಕ

ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಕೂರ್ಮ ರಾವ್ ಎಂ. ಅವರಿಗೆ ವರ್ಗಾವಣೆ ನೀಡವಲಾಗಿದೆ.ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ.ಕೆ ಅವರು ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದವರು, ಇದೀಗ ಸರಕಾರದ ಆದೇಶದ ಮೇರೆಗೆ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದಾರೆ.

ಜು.14 ಮಣಿಪಾಲದ ಕಂಟ್ರಿ ಇನ್ ನಲ್ಲಿ ಪ್ರಬುದ್ದರ ಗೋಷ್ಠಿ; ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಜು.14 ಶುಕ್ರವಾರ ಬೆಳಿಗ್ಗೆ 11.00 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಈ ಕಾರ್ಯಕ್ರಮದ ಸಂಚಾಲಕರನ್ನಾಗಿ ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ರವರನ್ನು ನಿಯೋಜಿಸಲಾಗಿದೆ. ಜಿಲ್ಲೆಯ ಸಂಘ-ಸಂಸ್ಥೆಗಳ ಪ್ರಮುಖರು, ವೃತ್ತಿಪರರು, ಪ್ರಬುದ್ಧರು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತುContinue reading “ಜು.14 ಮಣಿಪಾಲದ ಕಂಟ್ರಿ ಇನ್ ನಲ್ಲಿ ಪ್ರಬುದ್ದರ ಗೋಷ್ಠಿ; ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿ: ಕುಯಿಲಾಡಿ ಸುರೇಶ್ ನಾಯಕ್”

ಕಾಪು ಬಿಜೆಪಿ‌ ಪದಾಧಿಕಾರಿಗಳ ಸಭೆ

ಕಾಪು: ನರೇಂದ್ರ ಮೋದೀಜಿ ಸರಕಾರ ಒಂಭತ್ತು ವರ್ಷ ಪೂರೈಸಿದ ಸಂದರ್ಭದಲ್ಲಿ ಸರಕಾರದ ಸಾಧನೆಗಳನ್ನು ಮ‌ನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಹಾಗೂ ಈ ಕುರಿತಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಪೂರ್ವಭಾವಿ ಸಭೆ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಈ‌ಕಾರ್ಯಕ್ರಮಗಳ ಜಿಲ್ಲಾ ಉಸ್ತುವಾರಿ ವೀಣಾ ಶೆಟ್ಟಿ, ಜಿಲ್ಲಾ ಬಿಜೆಪಿ‌ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಂಡಲ‌ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಹಿರಿಯರಾದ ಶೀಲಾ ಕೆ ಶೆಟ್ಟಿ ಉಪಸ್ಥಿತರಿದ್ದರು. ಪಕ್ಷದ ವಿವಿಧ ಜವಾಬ್ದಾರಿContinue reading “ಕಾಪು ಬಿಜೆಪಿ‌ ಪದಾಧಿಕಾರಿಗಳ ಸಭೆ”

ಜು.14ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿಗೆ; ಪ್ರಬುದ್ಧರ ಗೋಷ್ಠಿಯಲ್ಲಿ ಭಾಗಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಜು.14ರಂದು ಬೆಳಿಗ್ಗೆ 11.00 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆ ಮತ್ತು ಪ್ರಬುದ್ಧರ ಗೋಷ್ಠಿಯನ್ನುದ್ದೇಶಿಸಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಮಾತನಾಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದರು. ಅವರು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಉಡುಪಿ ನಗರ ಮಂಡಲದ ಸಭೆಯಲ್ಲಿ ಭಾಗವಹಿಸಿ, ‘ಮಹಾContinue reading “ಜು.14ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿಗೆ; ಪ್ರಬುದ್ಧರ ಗೋಷ್ಠಿಯಲ್ಲಿ ಭಾಗಿ: ಕುಯಿಲಾಡಿ ಸುರೇಶ್ ನಾಯಕ್”

ಅಧಿಕಾರಕ್ಕೆ ಬಂದ 2 ತಿಂಗಳಲ್ಲಿ ರಾಜ್ಯದಲ್ಲಿ 2 ಕೊಲೆ; ಕಾಂಗ್ರೆಸ್ ಸರಕಾರದ ಸಾಧನೆ : ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೊಲೆಗಡುಕರಿಗೆ, ಭಯೋತ್ಪಾದಕರಿಗೆ ಪುಷ್ಠಿ ನೀಡಿದಂತೆ ಎಂಬುದಕ್ಕೆ ಕಾಂಗ್ರೆಸ್ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದ ಎರಡೇ ತಿಂಗಳಲ್ಲಿ ರಾಜ್ಯದಲ್ಲಿ ಜೈನ ಮುನಿ ಮತ್ತು ಹಿಂದೂ ಕಾರ್ಯಕರ್ತನ 2 ಅಮಾನುಷ ಹತ್ಯೆ ನಡೆದಿರುವುದು ಜ್ವಲಂತ ನಿದರ್ಶನವಾಗಿದೆ. ಹಂತಕರಿಗೆ ಕಾನೂನಿನ ಭಯವಿಲ್ಲದೆ ಇಂತಹ ಭೀಕರ ಕೊಲೆಗಳು ನಿರಂತರ ನಡೆಯುತ್ತಿರುವುದು ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ‌ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ್Continue reading “ಅಧಿಕಾರಕ್ಕೆ ಬಂದ 2 ತಿಂಗಳಲ್ಲಿ ರಾಜ್ಯದಲ್ಲಿ 2 ಕೊಲೆ; ಕಾಂಗ್ರೆಸ್ ಸರಕಾರದ ಸಾಧನೆ : ಕುಯಿಲಾಡಿ ಸುರೇಶ್ ನಾಯಕ್”

ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಮಹಿಳಾ ಘಟಕದ ಸಂಚಾಲಕರಾಗಿ ಗೋದಾವರಿ ಮಂಜಪ್ಪ ಸುವರ್ಣ ಆಯ್ಕೆ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ 2023-25ನೇ ಸಾಲಿನ ಮಹಿಳಾ ಘಟಕದ ಸಂಚಾಲಕರಾಗಿ ಉಡುಪಿ-ಶಿರಿಬೀಡು ಶ್ರೀ ಸರಸ್ವತಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕಿ ಗೋದಾವರಿ ಮಂಜಪ್ಪ ಸುವರ್ಣ ಅಂಬಲಪಾಡಿ ಆಯ್ಕೆಯಾಗಿದ್ದಾರೆ. ಗೌರವ ಸಂಚಾಲಕರಾಗಿ ಶ್ರೀ ನಾರಾಯಣಗುರು ಅರ್ಬನ್ ಕೋ-ಅಪರೇಟಿವ್ ಬ್ಯಾಂಕ್ ಲಿ., ಉಡುಪಿ ಇದರ ಉಪಾಧ್ಯಕ್ಷೆ ವಿಜಯಾ ಗೋಪಾಲ್ ಬಂಗೇರ ಪಂದುಬೆಟ್ಟು ಇವರು ಆಯ್ಕೆಯಾಗಿದ್ದಾರೆ. ಇತರ ಪದಾಧಿಕಾರಿಗಳಾಗಿ ದೇವಕಿ ಕೆ. ಕೋಟ್ಯಾನ್ ಮತ್ತು ಜಯಂತಿ ಹರೀಶ್ (ಸಹ ಸಂಚಾಲಕರು),Continue reading “ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಮಹಿಳಾ ಘಟಕದ ಸಂಚಾಲಕರಾಗಿ ಗೋದಾವರಿ ಮಂಜಪ್ಪ ಸುವರ್ಣ ಆಯ್ಕೆ”

ಪ್ರಧಾನಿ ಮೋದಿ ಆಡಳಿತದ 9 ವರ್ಷಗಳ ಸಾಧನೆಗಳ ಪ್ರಚಾರ; ಜಿಲ್ಲಾ ಬಿಜೆಪಿಯಿಂದ ಸರಣಿ ಕಾರ್ಯಕ್ರಮಗಳು: ಕುಯಿಲಾಡಿ

ಉಡುಪಿ: ರಾಜ್ಯ ಬಿಜೆಪಿ ಸೂಚನೆಯಂತೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 9 ವರ್ಷಗಳ ಸಾರ್ಥಕ ಜನಪರ ಆಡಳಿತವನ್ನು ಪೂರೈಸಿ 10ನೇ ವರ್ಷಕ್ಕೆ ಪಾದಾರ್ಪಣೆಗೈದಿರುವ ಸುಸಂದರ್ಭದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಪ್ರಧಾನಿ ಮೋದಿ ಆಡಳಿತಾವಧಿಯ ಸಾಧನೆಗಳ ಪ್ರಚಾರ ಸಹಿತ ಸಂಘಟನಾತ್ಮಕ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ಕುಮಾರ್ ತಿಳಿಸಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ, ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆContinue reading “ಪ್ರಧಾನಿ ಮೋದಿ ಆಡಳಿತದ 9 ವರ್ಷಗಳ ಸಾಧನೆಗಳ ಪ್ರಚಾರ; ಜಿಲ್ಲಾ ಬಿಜೆಪಿಯಿಂದ ಸರಣಿ ಕಾರ್ಯಕ್ರಮಗಳು: ಕುಯಿಲಾಡಿ”

ಅಭಿವೃದ್ಧಿ ಯೋಜನೆ ರಹಿತ; ಸಾಲ ಸಹಿತ ನಕಲಿ ಗ್ಯಾರಂಟಿಯ ಬಜೆಟ್ : ಕುಯಿಲಾಡಿ

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ 2023-24ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ರಾಜ್ಯದ ಅಭಿವೃದ್ಧಿಯ ಬಗ್ಗೆ ಯಾವುದೇ ಯೋಜನೆಗಳಿಲ್ಲದೆ, ಕೇವಲ ಕಾಂಗ್ರೆಸ್ ಅಧಿಕಾರಕ್ಕೆ ಬರಲೆಂದೇ ಘೋಷಿಸಿದ್ದ ನಕಲಿ ಗ್ಯಾರಂಟಿಗಳಿಗಾಗಿ, ರಾಜ್ಯದ ಹಿತ ಮರೆತು ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳುವ ನಿರಾಶಾದಾಯಕ ಚುನಾವಣಾ ಗಿಮಿಕ್ ಬಜೆಟ್ ಆಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಬಜೆಟ್ ನಲ್ಲಿ ವಾಹನ, ಅಬಕಾರಿ, ಮುದ್ರಾಂಕ ತೆರಿಗೆಗಳನ್ನು ಹೆಚ್ಚಿಸಿರುವುದು ಎಲ್ಲಾ ವರ್ಗದ ಜನತೆಗೆ ದೊಡ್ಡ ಹೊಡೆತ ನೀಡಲಿದೆ. ನೂತನContinue reading “ಅಭಿವೃದ್ಧಿ ಯೋಜನೆ ರಹಿತ; ಸಾಲ ಸಹಿತ ನಕಲಿ ಗ್ಯಾರಂಟಿಯ ಬಜೆಟ್ : ಕುಯಿಲಾಡಿ”

ಪ್ರತೀಕಾರದ, ಪ್ರಗತಿಹೀನ ಬಜೆಟ್: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ ಒಂದು ರೀತಿ ಪ್ರತೀಕಾರದ ಬಜೆಟ್. ಈ ಬಜೆಟ್ ರಾಜ್ಯ ಸರಕಾರದ್ದೇ ಆದರೂ ಕೇಂದ್ರ ಬಿಜೆಪಿ ಸರಕಾರವನ್ನು ಗುರಿ ಮಾಡಿರುವುದು ಕಂಡುಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಟೀಕಿಸಿದ್ದಾರೆ. ಇದೊಂದು ನಿರಾಶಾದಾಯಕ, ಪ್ರಗತಿಹೀನ ಬಜೆಟ್ ಎಂದಿರುವ ಅವರು, ಬಜೆಟ್ ಮಂಡಿಸುವ ವೇಳೆ ಕೇಂದ್ರ ಸರಕಾರ, ಮೋದಿಜಿ ಅವರನ್ನು ಟೀಕಿಸುವುದಕ್ಕಾಗಿಯೇ ಈ ಅವಕಾಶವನ್ನು ಉಪಯೋಗ ಮಾಡಿಕೊಂಡಿದ್ದಾರೆ. ರಾಜ್ಯಗಳ ಒಕ್ಕೂಟದ ಒಳಗಡೆ ಕೇಂದ್ರದ ಜೊತೆ ಸಂಘರ್ಷ,Continue reading “ಪ್ರತೀಕಾರದ, ಪ್ರಗತಿಹೀನ ಬಜೆಟ್: ನಳಿನ್‍ಕುಮಾರ್ ಕಟೀಲ್”

ಡಾ! ಮುಖರ್ಜಿ, ಡಾ! ಆಚಾರ್ಯ ತತ್ವಾದರ್ಶಗಳು ಕಾರ್ಯಕರ್ತರಿಗೆ

ಉಡುಪಿ: ಭಾರತೀಯ ಜನ ಸಂಘದ ಸಂಸ್ಥಾಪಕರು ಹಾಗೂ ಸ್ವತಂತ್ರ ಭಾರತದ ಪ್ರಥಮ ಕೈಗಾರಿಕಾ ಸಚಿವರಾಗಿದ್ದ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ದಕ್ಷಿಣ ಭಾರತದಲ್ಲಿ ಜನಸಂಘದ ಪ್ರಪ್ರಥಮ ಆಡಳಿತದ ಉಡುಪಿ ಪುರಸಭೆಯ ಅಧ್ಯಕ್ಷರು ಹಾಗೂ ರಾಜ್ಯ ಗೃಹ ಸಚಿವರು, ವೈದ್ಯಕೀಯ, ಉನ್ನತ ಶಿಕ್ಷಣ ಸಚಿವರಾಗಿದ್ದ ಡಾ! ವಿ.ಎಸ್. ಆಚಾರ್ಯರವರ ತತ್ವಾದರ್ಶಗಳು ಬಿಜೆಪಿ ಕಾರ್ಯಕರ್ತರಿಗೆ ದಾರಿದೀಪ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿContinue reading “ಡಾ! ಮುಖರ್ಜಿ, ಡಾ! ಆಚಾರ್ಯ ತತ್ವಾದರ್ಶಗಳು ಕಾರ್ಯಕರ್ತರಿಗೆ”

Design a site like this with WordPress.com
Get started