ಉತ್ತಮ ಸಂಘಟಕರಾಗಿ ಸಾಮಾಜಿಕ, ಧಾರ್ಮಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಅಪಾರ ಸಾಧನೆಗೈದಿರುವ ಬಿಜೆಪಿ ಉಡುಪಿ ನಗರ ಮಂಡಲಾಧ್ಯಕ್ಷ ಮಹೇಶ್ ಠಾಕೂರ್ ರವರು ಪ್ರಸಕ್ತ ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ವಿವಿಧ ಕ್ರೀಡಾ ಕೂಟಗಳನ್ನು ಪರಿಣಾಮಕಾರಿಯಾಗಿ ಆಯೋಜಿಸುವ ಮೂಲಕ ಕ್ರೀಡಾ ಕ್ಷೇತ್ರಕ್ಕೆ ಗಣನೀಯ ಸೇವೆ ಸಲ್ಲಿಸಿರುವ ಠಾಕೂರ್ ರವರು ಇದೀಗ ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಪದೋನ್ನತಿContinue reading “ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಮಹೇಶ್ ಠಾಕೂರ್ ಆಯ್ಕೆ: ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ”
Monthly Archives: September 2023
ಬಿಜೆಪಿ ಅಂಬಲಪಾಡಿ ಬೂತ್ 178ರಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ
ಉಡುಪಿ: ಭಾರತೀಯ ಜನಸಂಘದ ಸಂಸ್ಥಾಪಕರಲ್ಲೊಬ್ಬರಾದ ಏಕಾತ್ಮ ಮಾನವತಾ ವಾದದ ಪ್ರತಿಪಾದಕರು, ಅಂತ್ಯೋದಯ ಪರಿಕಲ್ಪನೆಯನ್ನು ನಾಡಿಗೆ ನೀಡಿದ ಮಹಾನ್ ಚೇತನ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮ ದಿನಾಚರಣೆಯನ್ನು ಬಿಜೆಪಿ ಅಂಬಲಪಾಡಿ ಬೂತ್ 178ರ ವತಿಯಿಂದ ಬೂತ್ ಅಧ್ಯಕ್ಷ ಮಹೇಂದ್ರ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿಯವರ ನಿವಾಸದಲ್ಲಿ ಆಚರಿಸಲಾಯಿತು. ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಮಾತನಾಡಿ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ತತ್ವಾದರ್ಶಗಳು ಮತ್ತು ಜೀವನ ಮೌಲ್ಯಗಳ ಬಗ್ಗೆ ಮಾಹಿತಿ ನೀಡಿ, ಪಂಡಿತ್Continue reading “ಬಿಜೆಪಿ ಅಂಬಲಪಾಡಿ ಬೂತ್ 178ರಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ”
ಶಿಸ್ತುಬದ್ಧ ಜೀವನ ಕ್ರಮದಿಂದ ದುಶ್ಚಟ ಮುಕ್ತ ಸಮಾಜ ನಿರ್ಮಾಣ ಸಾಧ್ಯ : ಡಾ! ಸೌಜನ್ಯಾ
ಆದಿ ಉಡುಪಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಉಡುಪಿ: ವಿಧ್ಯಾರ್ಥಿಗಳು ತಮ್ಮ ಪ್ರೌಢಾವಸ್ಥೆಯಲ್ಲೇ ಕೆಡುಕು ಒಳಿತುಗಳ ಪರಾಮರ್ಶೆ ನಡೆಸಿ, ದುರಾಭ್ಯಾಸಗಳಿಂದ ದೂರವಿರುವ ಜೊತೆಗೆ ಸುಸಂಸ್ಕೃತಿ, ಸನ್ನಡೆಯನ್ನು ಮೈಗೂಡಿಸಿಕೊಂಡು ವಿದ್ಯಾರ್ಜನೆಗೆ ಹೆಚ್ಚಿನ ಒಲವು ತೋರುವುದು ಅತ್ಯಗತ್ಯ. ಶಿಸ್ತುಬದ್ಧ ಜೀವನ ಕ್ರಮದಿಂದ ದುಶ್ಚಟ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಉಡುಪಿ-ದೊಡ್ಡಣಗುಡ್ಡೆ ಡಾ! ಎ.ವಿ. ಬಾಳಿಗಾ ಆಸ್ಪತ್ರೆಯ ಮನೋರೋಗ ತಜ್ಞೆ ಡಾ! ಸೌಜನ್ಯಾ ತಿಳಿಸಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಂಬಲಪಾಡಿ ವಲಯ ಮತ್ತು ಅಖಿಲContinue reading “ಶಿಸ್ತುಬದ್ಧ ಜೀವನ ಕ್ರಮದಿಂದ ದುಶ್ಚಟ ಮುಕ್ತ ಸಮಾಜ ನಿರ್ಮಾಣ ಸಾಧ್ಯ : ಡಾ! ಸೌಜನ್ಯಾ”
ಜಿಲ್ಲೆಯ ಬಿಜೆಪಿ ಬೆಂಬಲಿತ ನೂತನ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಜಿಲ್ಲಾ ಬಿಜೆಪಿ ವತಿಯಿಂದ ಗೌರವಾರ್ಪಣೆ
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲೆಯ ಬಿಜೆಪಿ ಬೆಂಬಲಿತ ನೂತನ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳಿಗೆ ಗೌರವಾರ್ಪಣೆ ಕಾರ್ಯಕ್ರಮವು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಯವರ ಉಪಸ್ಥಿತಿಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಯಶ್‌ಪಾಲ್ ಸುವರ್ಣ, ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್Continue reading “ಜಿಲ್ಲೆಯ ಬಿಜೆಪಿ ಬೆಂಬಲಿತ ನೂತನ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಜಿಲ್ಲಾ ಬಿಜೆಪಿ ವತಿಯಿಂದ ಗೌರವಾರ್ಪಣೆ”
ಉಡುಪಿ ಕೇಂದ್ರೀಯ ವಿದ್ಯಾಲಯ ನೂತನ ಕಟ್ಟಡ ಶಂಕುಸ್ಥಾಪನ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ
ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಗತಿನಗರದಲ್ಲಿ “ಕೇಂದ್ರೀಯ ವಿದ್ಯಾಲಯ ಉಡುಪಿ” ಇದರ ನೂತನ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರ ಶಿಫಾರಸ್ಸಿನ ಮೇರೆಗೆ 25 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಶಂಕುಸ್ಥಾಪನೆಯನ್ನು ಇಂದು ದಿನಾಂಕ 25-09-2023 ರಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರು, ಸಂಸದರಾದ ಶೋಭಾ ಕರಂದ್ಲಾಜೆ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರುContinue reading “ಉಡುಪಿ ಕೇಂದ್ರೀಯ ವಿದ್ಯಾಲಯ ನೂತನ ಕಟ್ಟಡ ಶಂಕುಸ್ಥಾಪನ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ”
ಉಡುಪಿ ಜಿಲ್ಲಾ ಬಿಜೆಪಿಯಿಂದ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ
ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ದೇಶದ ನೂತನ ಸಂಸತ್ ಭವನ ‘ಕರ್ತವ್ಯ ಪಥ’ದ ಬಳಿ ನಿರ್ಮಾಣಗೊಳ್ಳಲಿರುವ ‘ಅಮೃತ ಉದ್ಯಾನವನ’ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಗ್ರಾಮಗಳಿಂದ ಮಣ್ಣು ಸಂಗ್ರಹಿಸುವ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಚಾಲನೆ ನೀಡಿದರು. ದೇಗುಲದ ಪರಿಸರದಲ್ಲಿContinue reading “ಉಡುಪಿ ಜಿಲ್ಲಾ ಬಿಜೆಪಿಯಿಂದ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ”
ಸೆ.24 : ಜಿಲ್ಲಾ ಬಿಜೆಪಿಯ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ; ನೂತನ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರಿಗೆ ಗೌರವಾರ್ಪಣೆ
ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆ, ದೇಶದ ನೂತನ ಸಂಸತ್ ಭವನ ‘ಕರ್ತವ್ಯ ಪಥ’ದ ಬಳಿ ‘ಅಮೃತ ಉದ್ಯಾನವನ’ ನಿರ್ಮಾಣ ಕಾರ್ಯಕ್ಕೆ ದೇಶದಾದ್ಯಂತ ಎಲ್ಲ ಗ್ರಾಮಗಳಿಂದ ಶೃದ್ಧಾಪೂರ್ವಕ ಮಣ್ಣು ಸಂಗ್ರಹದ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಸಜ್ಜಾಗಿದ್ದು, ಸೆ.24, ರವಿವಾರ ಬೆಳಿಗ್ಗೆ 10.00 ಗಂಟೆಗೆ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿContinue reading “ಸೆ.24 : ಜಿಲ್ಲಾ ಬಿಜೆಪಿಯ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ; ನೂತನ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರಿಗೆ ಗೌರವಾರ್ಪಣೆ”
ಮಹಿಳಾ ಮೀಸಲಾತಿ ಮಸೂದೆ ಮಂಡನೆ ಪ್ರಧಾನಿ ನರೇಂದ್ರ ಮೋದಿಯವರ ತಾಕತ್ತು; ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆ: ಕುಯಿಲಾಡಿ ಸುರೇಶ್ ನಾಯಕ್
ಮಹಿಳಾ ಮೀಸಲಾತಿ ಮಸೂದೆ ಮಂಡನೆ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ ಉಡುಪಿ: ಲೋಕಸಭೆ, ರಾಜ್ಯ ಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರ ಸದಸ್ಯತ್ವವನ್ನು ವಿಸ್ತರಿಸುವ ಗುರಿಯನ್ನು ಹೊಂದಿರುವ ಮಹಿಳಾ ಮೀಸಲಾತಿ ಮಸೂದೆಯನ್ನು ನೂತನ ಸಂಸತ್ ಕಟ್ಟಡದಲ್ಲಿ ನಡೆದ ಮೊದಲ ಕಲಾಪದಲ್ಲಿ ಮಂಡಿಸಿರುವುದು ಪ್ರಧಾನಿ ನರೇಂದ್ರ ಮೋದಿಯವರ ತಾಕತ್ತು. ಈ ಮಸೂದೆ ಮಂಡನೆ ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದContinue reading “ಮಹಿಳಾ ಮೀಸಲಾತಿ ಮಸೂದೆ ಮಂಡನೆ ಪ್ರಧಾನಿ ನರೇಂದ್ರ ಮೋದಿಯವರ ತಾಕತ್ತು; ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆ: ಕುಯಿಲಾಡಿ ಸುರೇಶ್ ನಾಯಕ್”
ಪ್ರಧಾನಿ ಮೋದಿ ಆಡಳಿತಾವಧಿಯಲ್ಲಿ ಬಿಜೆಪಿ ಕಾರ್ಯಕರ್ತರೆನಿಸುವುದು ಸುಯೋಗ : ಕುಯಿಲಾಡಿ ಸುರೇಶ್ ನಾಯಕ್ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ‘ಪ್ರಧಾನಿ ಮೋದಿ ಸಾಧನೆಗಳ ಪ್ರದರ್ಶಿನಿ’ಗೆ ಚಾಲನೆ
ಉಡುಪಿ: ದೇಶ ಕಂಡ ಅಪ್ರತಿಮ ದೇಶಭಕ್ತ, ವಿಶ್ವ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೇರಿಸಿದ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ಬಿಜೆಪಿ ಕಾರ್ಯಕರ್ತರೆನಿಸುವುದು ಸುಯೋಗ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ‘ಸೇವಾ ಪಾಕ್ಷಿಕ ಅಭಿಯಾನ’ದ ಅಂಗವಾಗಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಆಯೋಜಿಸಲಾದ ಪ್ರಧಾನಿ ನರೇಂದ್ರ ಮೋದಿಯವರ 9 ವರ್ಷಗಳ ಸಾಧನೆಗಳ ಪ್ರದರ್ಶಿನಿಗೆ ಚಾಲನೆ ನೀಡಿ ಮಾತನಾಡಿದರು. ಒಂದು ಕಾಲದಲ್ಲಿ ಹಾವಾಡಿಗರ ದೇಶ ಎಂಬ ಅಪಹಾಸ್ಯಕ್ಕೆ ಒಳಗಾಗಿದ್ದ ಭಾರತವನ್ನು ವಿಶ್ವ ಭೂಪಟದಲ್ಲಿ ಎದ್ದುContinue reading “ಪ್ರಧಾನಿ ಮೋದಿ ಆಡಳಿತಾವಧಿಯಲ್ಲಿ ಬಿಜೆಪಿ ಕಾರ್ಯಕರ್ತರೆನಿಸುವುದು ಸುಯೋಗ : ಕುಯಿಲಾಡಿ ಸುರೇಶ್ ನಾಯಕ್ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ‘ಪ್ರಧಾನಿ ಮೋದಿ ಸಾಧನೆಗಳ ಪ್ರದರ್ಶಿನಿ’ಗೆ ಚಾಲನೆ”
ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ : ಶ್ರೀ ಗಣೇಶ ಚತುರ್ಥಿ ಆಚರಣೆ
ಉಡುಪಿ: ಶ್ರೀ ಗಣೇಶ ಚತುರ್ಥಿ ಪ್ರಯುಕ್ತ ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಚೌತಿ ಪೂಜೆಯು ವಿಜೃಂಭಣೆಯಿಂದ ನೆರವೇರಿತು. ಭಕ್ತಾದಿಗಳು ವಿವಿಧ ಬಗೆಯ ಭಕ್ಷ್ಯಗಳನ್ನು ಶ್ರೀ ವಿನಾಯಕ ದೇವರಿಗೆ ಅರ್ಪಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿ ಮಹೇಂದ್ರ ಕೋಟ್ಯಾನ್ ಮತ್ತು ಅವಿನಾಶ್ ಪೂಜಾರಿ, ಆಡಳಿತ ಸಮಿತಿ ಸದಸ್ಯರಾದ ವಿನಯ್ ಕುಮಾರ್, ಜನಾರ್ದನ ಪೂಜಾರಿ, ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ,Continue reading “ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ : ಶ್ರೀ ಗಣೇಶ ಚತುರ್ಥಿ ಆಚರಣೆ”