ಬಿಜೆಪಿ ರಾಜ್ಯ ತಂಡದಿಂದ ಉಡುಪಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣಾ ಪೂರ್ವಸಿದ್ಧತಾ ಸಭೆ



ಉಡುಪಿ: ಮುಂಬರುವ ಲೋಕಸಭಾ ಚುನಾವಣೆಯ ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಲು ವಿಧಾನಸಭಾ ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವ ವಿ.ಸುನೀಲ್ ಕುಮಾರ್ ಮತ್ತು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ನೇತೃತ್ವದ ರಾಜ್ಯ ತಂಡದಿಂದ ಉಡುಪಿ ಜಿಲ್ಲಾ ಮಟ್ಟದ ಸಭೆಯು ಸೆ.14ರಂದು ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಜರಗಿತು.

ಮತದಾರರ ಪಟ್ಟಿ ಪರಿಷ್ಕರಣೆ ಸಹಿತ ಬೂತ್ ಮಟ್ಟದಿಂದ ಜಿಲ್ಲಾ ಸ್ತರದ ವರೆಗಿನ ಪಕ್ಷದ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳನ್ನು ಈಗಿಂದೀಗಲೇ ಚುನಾವಣೆಗೆ ಸಜ್ಜುಗೊಳಿಸಲು ನಿಶ್ಚಯಿಸಲಾಯಿತು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ ಗಂಟಿಹೊಳೆ, ಮಾಜಿ ಶಾಸಕ ಕೆ.ರಘುಪತಿ ಭಟ್, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ ಮತ್ತು ಮನೋಹರ್ ಎಸ್. ಕಲ್ಮಾಡಿ ಉಪಸ್ಥಿತರಿದ್ದರು.

Leave a comment

Design a site like this with WordPress.com
Get started