
ಕಾಪು: ಮೋದೀಜಿ ಜನ್ಮದಿನದ ಅಂಗವಾಗಿ ಇಂದು ಕಾಪು ಬಿಜೆಪಿ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ನೆರವೇರಿಸಿದರು. ಬಳಿಕ ಮಾತನಾಡಿದ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ ಜನ್ಮದಿನದಿಂದ ಗಾಂಧಿ ಜಯಂತಿ ತನಕ ನಡೆಯುವ ಸೇವಾ ಪಾಕ್ಷಿಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಈ ಎಲ್ಲ ಸೇವಾ ಕಾರ್ಯಗಳ ಪುಣ್ಯದ ಫಲ ನಮ್ಮ ವಿಶ್ವನಾಯಕ ಮೋದೀಜಿಯವರಿಗೆ ದೊರಕಲಿ ತನ್ಮೂಲಕ ಮತ್ತೆ ಮೋದೀಜಿಯವರ ನೇತ್ರತ್ವದಲ್ಲಿ ಚುನಾವಣೆಯಲ್ಲಿ ಗೆದ್ದು ಅವರ ನೇತ್ರತ್ವದಲ್ಲಿ ಭಾರತ ಭಾರತ ಪರಮವೈಭವಕ್ಕೆ ಸಾಗಲಿ ಎಂದು ಶುಭಹಾರೈಸಿದರು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಮೋದೀಜಿಯವರ ಕಾರ್ಯ ಚಟುವಟಿಕೆಗಳನ್ನು ಕೊಂಡಾಡಿ ಮೋದೀಜಿ ಇಂದು ಇಡೀ ವಿಶ್ವಕ್ಕೆ ವಿಶ್ವಶಾಂತಿಗೆ ಅನಿವಾರ್ಯ ನಾಯಕ ಎಂದು ಶುಭಹಾರೈಸಿದರು. ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಶುಭಹಾರೈಸಿದರು. ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಸರಕಾರಿ ಆಸ್ಪತ್ರೆಯ ರಕ್ತನಿಧಿಯ ವೈದ್ಯರಾದ ಡಾ.ವೀಣಾ, ಕಾರ್ಯಕ್ರಮದ ಸಂಚಾಲಕರಾದ ನವೀನ್ ಎಸ್ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ 53 ಬಾರಿ ರಕ್ತದಾನ ಮಾಡಿದ ರಾಘವೇಂದ್ರ ಪ್ರಭು ಕರ್ವಾಲು, ವಿಕಲಚೇತನರ ಪ್ಯಾರ ಒಲಂಪಿಕ್ಸ್ ನಲ್ಲಿ ಸೈಕ್ಲಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾಮ ಪಡೆದ ಯಶೋಧ ರಾಮಚಂದ್ರನ್ ಇವರಿಗೆ ಗೌರವಾರ್ಪಣೆ ನಡೆಯಿತು. ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ ಆಗಮಿಸಿ ಶುಭ ಹಾರೈಸಿದರು. ಹಿಂದುಳಿದ ವರ್ಗ ಮೋರ್ಚದ ಜಿಲ್ಲಾಧ್ಯಕ್ಷರಾದ ಸುರೇಂದ್ರ ಪಣಿಯೂರು, ರೈತ ಮೋರ್ಚ ಜಿಲ್ಲಾಧ್ಯಕ್ಷರಾದ ಪ್ರವೀಣ್ ಗುರ್ಮೆ, ಮಂಡಲ ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಪ್ರಮುಖರಾದ ಲತಾ ಆಚಾರ್ಯ, ಅನಿಲ್ ಕುಮಾರ್, ಹೈದರ್, ಸುರೇಖ ಶೈಲೇಶ್, ಶೈಲೇಶ್, ರಾಜ್ ಪಡುಬಿದ್ರೆ, ಶಶಿಧರ್ ವಾಗ್ಳೆ, ಕೇಸರಿ ಯುವರಾಜ್, ಶಶಿಪ್ರಭಾ ಶೆಟ್ಟಿ, ಅನಿಲ್ ಶೆಟ್ಟಿ ಮಲ್ಲಾರು ವಿವಿಧ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.