ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ವಿಧಾನಪರಿಷತ್ ಚುನಾವಣೆಯ ಪೂರ್ವ ಸಿದ್ಧತಾ ಸಭೆ





ಕಾಪು: ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ವಿಧಾನಪರಿಷತ್ ಚುನಾವಣೆಯ ಕುರಿತಾಗಿ ಇಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಯಾವ ರೀತಿಯಲ್ಲಿ ಪ್ರತೀ ವಾರ್ಡ್ ಮಟ್ಟದಲ್ಲಿ ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು. ಪ್ರತೀ ಪಂಚಾಯತ್ ಗೆ ಉಸ್ತುವಾರಿಗಳನ್ನು ನೇಮಿಸಲಾಯಿತು. ಅವರು ಕೂಡಲೇ ಪ್ರತೀ ವಾರ್ಡ್ ಗೆ ಎರಡು- ಮೂರು ಜನರನ್ನು ಉಸ್ತುವಾರಿಯನ್ನು ಮಾಡಿ ಕೂಡಲೇ ಕಾರ್ಯಪ್ರವ್ರತ್ತರಾಗಲು ತಿಳಿಸಲಾಯಿತು. ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಗರಿಷ್ಠ ಮತದಾರರ ನೋಂದಣಿ ಮಾಡುವ ಬಗ್ಗೆ ಚರ್ಚಿಸಲಾಯಿತು

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿಯ ನಿಕಟಪೂರ್ವ ಶಾಸಕರಾದ ರಘುಪತಿ ಭಟ್ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಈ ಕಾರ್ಯಕ್ರಮದ ಜಿಲ್ಲಾ ಸಹಸಂಚಾಲಕರಾದ ಮುಳೀಧರ ಪೈ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರೂ‌ ಈ‌ ಮತದಾರರ ಪಟ್ಟಿಯ ನೋಂದಣಿಯ ಕಾಪು ಕ್ಷೇತ್ರ ಸಂಚಾಲಕರಾದ ಶಿಲ್ಪಾ ಜಿ ಸುವರ್ಣ, ಕಾಪು ಮಂಡಲ ಬಿಜೆಪಿ ಪ್ರಧಾನ ಸಹಸಂಚಾಲಕರಾದ ಪ್ರಸಾದ್ ಮಲ್ಯ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started