ಉಡುಪಿ, ನ.29: ಭಾರತದಾದ್ಯಂತ ನವೆಂಬರ್ 15ರಿಂದ ಜನವರಿ 26ರವರೆಗೆ ನಡೆಯುತ್ತಿರುವ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ಗೆ ಉಡುಪಿಯ ಅಂಬಲಪಾಡಿ ಗ್ರಾಮ ಪಂಚಾಯತ್ ನಲ್ಲಿ ನ.30ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ ನೀಡಲಿದ್ದಾರೆ. ಅಂಬಲಪಾಡಿ ಗ್ರಾಮ ಪಂಚಾಯತ್ ಆವರಣದಲ್ಲಿ ಬೆಳಿಗ್ಗೆ ಗಂಟೆ 9.30ಕ್ಕೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಇದರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭಾಷಣದ ನೇರಪ್ರಸಾರ ನಡೆಯಲಿದೆ. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹಾಗೂ ಜಿಲ್ಲೆಯContinue reading “ನಾಳೆ ಉಡುಪಿಯಲ್ಲಿ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ”
Monthly Archives: November 2023
ಬಿಟ್ಟಿ ಭಾಗ್ಯಗಳಿಗೆ ಮರುಳಾದ ಜನತೆ ಬೆಲೆ ತೆರುವ ಸಮಯ ಬಂದಿದೆ: ಕುಯಿಲಾಡಿ
ಉಡುಪಿ: ಉಚಿತ ಗ್ಯಾರಂಟಿಗಳನ್ನು ಘೋಷಿಸಿ ಕೈಸುಟ್ಟುಕೊಂಡಿರುವ ರಾಜ್ಯ ಕಾಂಗ್ರೆಸ್ ಸರಕಾರ, ಇದೀಗ ಗಾಯದ ಮೇಲೆ ಬರೆ ಹಾಕಲು ಪ್ರಾರಂಭಿಸಿದೆ. ಪಹಣಿ ಪತ್ರದ ಶುಲ್ಕವನ್ನು ರೂ.10 ರಿಂದ ರೂ.25ಕ್ಕೆ ಏರಿಸಿರುವ ರಾಜ್ಯ ಸರಕಾರ ವಿಳಂಬಿತ ಜನನ ಮರಣ ದೃಢೀಕರಣ ಪತ್ರದ ಶುಲ್ಕವನ್ನು ರೂ.50 ರಿಂದ ರೂ.100ಕ್ಕೆ ಹೆಚ್ಚಿಸಿದೆ. ಉಚಿತ ಭಾಗ್ಯಗಳಿಗೆ ಮರುಳಾದ ಜನತೆ ಇಂದು ಬೆಲೆ ತೆರುವ ಸಮಯ ಸನ್ನಿಹಿತವಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಸಮಸ್ಯೆಗಳ ಸರಮಾಲೆ ಮುಗಿಯುತ್ತಲೇContinue reading “ಬಿಟ್ಟಿ ಭಾಗ್ಯಗಳಿಗೆ ಮರುಳಾದ ಜನತೆ ಬೆಲೆ ತೆರುವ ಸಮಯ ಬಂದಿದೆ: ಕುಯಿಲಾಡಿ”
ಓರ್ವ ಜನಪ್ರತಿನಿಧಿಯಾಗಿ ಗೂಂಡಾ ಸಂಸ್ಕೃತಿ ಪ್ರದರ್ಶಿಸುವ ರಮೇಶ್ ಕಾಂಚನ್ ಯಾವ ಸೀಮೆಯ ದೊಣ್ಣೆ ನಾಯಕ?: ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಪ್ರಶ್ನೆ
ಓರ್ವ ಜನಪ್ರತಿನಿಧಿಯಾಗಿ ಶಾಸಕರು ಹಾಗೂ ಮಾಜಿ ಸಚಿವರ ಬಗ್ಗೆ ಮಾತನಾಡುವಾಗ ಯಾವ ರೀತಿಯ ಪದ ಬಳಕೆ ಮಾಡಬೇಕು ಎನ್ನುವ ಕನಿಷ್ಠ ಪರಿಜ್ಞಾನ ಇಲ್ಲದ ಮತ್ತು ಈ ಹಿಂದೆ ಉಡುಪಿ ನಗರಸಭಾ ಅಧಿವೇಶನದಲ್ಲಿ ದಾರಿಯ ಸಮಸ್ಯೆಯೊಂದರ ಇತ್ಯರ್ಥದ ಸಂದರ್ಭದಲ್ಲಿ ನಾಗರಿಕರೊಬ್ಬರ ಮೇಲೆ ಹಾಗೂ ತಮ್ಮದೇ ಪಕ್ಷದ ಮಹಿಳಾ ನಗರಸಭಾ ಸದಸ್ಯೆಯ ಮೇಲೆ ಕೈಮಾಡಿ ನೂಕಾಟ ತಳ್ಳಾಟ ನಡೆಸಿ ಗೂಂಡಾಗಿರಿ ಪ್ರದರ್ಶಿಸಿದ್ದ ನಗರಸಭಾ ಸದಸ್ಯ ರಮೇಶ್ ಕಾಂಚನ್ ಯಾವ ಸೀಮೆಯ ದೊಣ್ಣೆ ನಾಯಕ ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್Continue reading “ಓರ್ವ ಜನಪ್ರತಿನಿಧಿಯಾಗಿ ಗೂಂಡಾ ಸಂಸ್ಕೃತಿ ಪ್ರದರ್ಶಿಸುವ ರಮೇಶ್ ಕಾಂಚನ್ ಯಾವ ಸೀಮೆಯ ದೊಣ್ಣೆ ನಾಯಕ?: ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಪ್ರಶ್ನೆ”
ದುಡಿಯುವವರ ಮೇಲೆ ಕೇಸ್ ದಾಖಲು, ಹೊಟ್ಟೆ ತುಂಬಿದವರ ಕೇಸ್ ವಾಪಸ್; ಇದು ಕಾಂಗ್ರೆಸ್ ಸರಕಾರದ ದ್ವಿಮುಖ ನೀತಿ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಕೂಳಿಗಾಗಿ ದುಡಿಯುವ ಕಾರ್ಮಿಕ ವರ್ಗದ ಮೇಲೆ ಕೇಸ್ ದಾಖಲು; ಹೊಟ್ಟೆ ತುಂಬಿದ ಕುಬೇರ ಮೇಲಿನ ಕೇಸ್ ವಾಪಸ್; ಇದು ರಾಜ್ಯ ಕಾಂಗ್ರೆಸ್ ಸರಕಾರದ ದ್ವಿಮುಖ ನೀತಿಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕಟ್ಟಡ ಸಾಮಗ್ರಿ ಸಾಗಾಟದ ಹಳೇ ಲಾರಿಗಳ ಮಾಲಕ, ಚಾಲಕರ ಮೇಲೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಅತ್ತ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದಡಿ ಸಿಬಿಐContinue reading “ದುಡಿಯುವವರ ಮೇಲೆ ಕೇಸ್ ದಾಖಲು, ಹೊಟ್ಟೆ ತುಂಬಿದವರ ಕೇಸ್ ವಾಪಸ್; ಇದು ಕಾಂಗ್ರೆಸ್ ಸರಕಾರದ ದ್ವಿಮುಖ ನೀತಿ: ಕುಯಿಲಾಡಿ ಸುರೇಶ್ ನಾಯಕ್”
ಹೊಟ್ಟೆಪಾಡಿಗೆ ದುಡಿಯುವ ಲಾರಿ ಚಾಲಕ, ಕಾರ್ಮಿಕರ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನಡೆ ಖಂಡನೀಯ : ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್
ಉಡುಪಿ: ನ.24ರಂದು ಮಣಿಪಾಲದ ರಜತಾದ್ರಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾಜಿ ಸಚಿವ, ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ರವರು, ಕಟ್ಟಡ ಸಾಮಗ್ರಿ ಸಾಗಾಟದ ಲಾರಿ ಮಾಲಕರು, ಚಾಲಕರು ಮತ್ತು ಕಾರ್ಮಿಕರು ನಡೆಸಿರುವ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ನೋಟಿಸ್ ನೀಡಿರುವ ಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರ ಬಳಿ ಪ್ರಶ್ನಿಸಿರುವುದು ನ್ಯಾಯಸಮ್ಮತವಾಗಿದೆ. ಆದರೆ ಶಾಸಕರ ಮೇಲಿನ ದ್ವೇಷದಿಂದ ಈ ವಿಚಾರವನ್ನು ರಾಜಕೀಯಗೊಳಿಸಿ ಹೊಟ್ಟೆಪಾಡಿಗೆ ದುಡಿಯುವ ಲಾರಿ ಚಾಲಕ, ಕಾರ್ಮಿಕರ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷContinue reading “ಹೊಟ್ಟೆಪಾಡಿಗೆ ದುಡಿಯುವ ಲಾರಿ ಚಾಲಕ, ಕಾರ್ಮಿಕರ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನಡೆ ಖಂಡನೀಯ : ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್”
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಅಂಬಲಪಾಡಿ ವಲಯ ಕಛೇರಿಯಲ್ಲಿ ಧನಲಕ್ಷ್ಮೀ ಪೂಜೆ
ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಇದರ ಅಂಬಲಪಾಡಿ ವಲಯ ಕಛೇರಿಯಲ್ಲಿ ಧನಲಕ್ಷ್ಮೀ ಪೂಜೆಯು ಭಜನಾ ಸೇವೆಯೊಂದಿಗೆ ವಿಜೃಂಭಣೆಯಿoದ ನೆರವೇರಿತು. ಈ ಸಂದರ್ಭದಲ್ಲಿ ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕ ಶಿವರಾಯ ಪ್ರಭು, ಉಡುಪಿ ತಾಲೂಕು ಯೋಜನಾಧಿಕಾರಿ ರಾಮ ಎಮ್., ಜನಜಾಗೃತಿ ವೇದಿಕೆಯ ಜಿಲ್ಲಾ ಸಮಿತಿ ಸದಸ್ಯ ಶಿವಕುಮಾರ್ ಅಂಬಲಪಾಡಿ, ತಾಲೂಕು ಸಮಿತಿ ಸದಸ್ಯರಾದ ಗಣೇಶ್ ಕುಮಾರ್ ಸಂಪಿಗೆನಗರ, ಪ್ರತಾಪ್ ಕುಮಾರ್ ಉದ್ಯಾವರ, ವಲಯ ಮೇಲ್ವಿಚಾರಕಿ ಪ್ರೇಮಾ, ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು, ಒಕ್ಕೂಟಗಳ ಅಧ್ಯಕ್ಷರು, ಕಾರ್ಯದರ್ಶಿಗಳು,Continue reading “ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಅಂಬಲಪಾಡಿ ವಲಯ ಕಛೇರಿಯಲ್ಲಿ ಧನಲಕ್ಷ್ಮೀ ಪೂಜೆ”
ನೇಜಾರು ಅಮಾನುಷ ಹತ್ಯೆ ಪ್ರಕರಣ ಭೇದಿಸಿ ಆರೋಪಿಯನ್ನು ಬಂಧಿಸಿದ ಪೊಲೀಸ್ ಇಲಾಖೆಯ ಕಾರ್ಯವೈಖರಿ ಶ್ಲಾಘನೀಯ: ಕುಯಿಲಾಡಿ
ಉಡುಪಿ: ಉಡುಪಿ ಜಿಲ್ಲೆಯ ಇತಿಹಾಸದಲ್ಲೇ ನೇಜಾರು ತೃಪ್ತಿ ಲೇಔಟ್ ನಲ್ಲಿ ಅತ್ಯಂತ ಕ್ರೂರ ರೀತಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ಕು ಮಂದಿಯ ಅಮಾನುಷ ಹತ್ಯೆ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದೆ. ಪೊಲೀಸ್ ಇಲಾಖೆ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿ ಸಿಸಿ ಟಿವಿ ಹಾಗೂ ಇನ್ನಿತರ ಮೂಲಗಳ ಜಾಡು ಹಿಡಿದು ಕೊಲೆ ಆರೋಪಿಯನ್ನು ಬಂಧಿಸಿರುವುದು ಶ್ಲಾಘನೀಯ. ಆರೋಪಿಯನ್ನು ಶೀಘ್ರ ವಿಚಾರಣೆಗೆ ಒಳಪಡಿಸಿ ಕಾನೂನಾತ್ಮಕ ಶಿಕ್ಷೆಗೆ ಗುರಿಪಡಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ. ಉಡುಪಿContinue reading “ನೇಜಾರು ಅಮಾನುಷ ಹತ್ಯೆ ಪ್ರಕರಣ ಭೇದಿಸಿ ಆರೋಪಿಯನ್ನು ಬಂಧಿಸಿದ ಪೊಲೀಸ್ ಇಲಾಖೆಯ ಕಾರ್ಯವೈಖರಿ ಶ್ಲಾಘನೀಯ: ಕುಯಿಲಾಡಿ”
ಅಂಗನವಾಡಿ ಕೇಂದ್ರ ಬoಕೇರಕಟ್ಟ ಅಂಬಲಪಾಡಿ : ಮಕ್ಕಳ ದಿನಾಚರಣೆ, ಸ್ಟೀಲ್ ಕವಾಟು ಕೊಡುಗೆ ಹಸ್ತಾಂತರ
ಉಡುಪಿ: ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬಲಪಾಡಿ ಬಂಕೇರಕಟ್ಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಪುಟಾಣಿಗಳಿಗೆ ಸಿಹಿ ತಿಂಡಿ ಹಂಚುವ ಮೂಲಕ ಆಚರಿಸಲಾಯಿತು. ಸ್ಥಳೀಯ ಉದ್ಯಮಿ, ಶ್ರೀ ನಾಗರಾಜ ಸೇವಾ ಸಮಿತಿ ಬಂಕೇರಕಟ್ಟ ಇದರ ಗೌರವಾಧ್ಯಕ್ಷ ಎ.ವಿಶ್ವನಾಥ್ ಹೆಗ್ಡೆಯವರು ಕೊಡುಗೆ ನೀಡಿದ ಸ್ಟೀಲ್ ಕವಾಟನ್ನು ಅಂಗನವಾಡಿ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸ್ಥಳೀಯ ವಾರ್ಡ್ ಸದಸ್ಯ ರಾಜೇಶ್ ಸುವರ್ಣ, ಮಾಜಿ ಅಧ್ಯಕ್ಷರಾದ ರಾಜೇಂದ್ರ ಪಂದುಬೆಟ್ಟು, ಭಾರತಿ ಭಾಸ್ಕರ್, ಮಾಜಿ ಉಪಾಧ್ಯಕ್ಷರಾದ ಶಿವಕುಮಾರ್ ಅಂಬಲಪಾಡಿ, ಸೋಮನಾಥ್Continue reading “ಅಂಗನವಾಡಿ ಕೇಂದ್ರ ಬoಕೇರಕಟ್ಟ ಅಂಬಲಪಾಡಿ : ಮಕ್ಕಳ ದಿನಾಚರಣೆ, ಸ್ಟೀಲ್ ಕವಾಟು ಕೊಡುಗೆ ಹಸ್ತಾಂತರ”
ಬಿಜೆಪಿ ಹಿರಿಯ ಕಾರ್ಯಕರ್ತ ಕರಾಮತ್ ಆಲಿ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸಂತಾಪ
ಉಡುಪಿ: ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಗೃಹ ಸಚಿವ ಡಾ! ವಿ.ಎಸ್. ಆಚಾರ್ಯರವರ ನಿಕಟವರ್ತಿ, ಕುಂಜಿಬೆಟ್ಟು ಕಟ್ಟೆ ಆಚಾರ್ಯ ಮಾರ್ಗ ನಿವಾಸಿ ಕರಾಮತ್ ಆಲಿ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪಕ್ಷದ ಅಲ್ಪಸಂಖ್ಯಾತ ಮೋರ್ಚಾದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಅಲ್ಪಸಂಖ್ಯಾತ ಸಮುದಾಯವನ್ನು ಬಿಜೆಪಿ ಜೊತೆ ಜೋಡಿಸುವ ಜೊತೆಗೆ ಸರಕಾರದ ವಿವಿಧ ಸೌಲಭ್ಯಗಳನ್ನು ಸಮುದಾಯಕ್ಕೆ ತಲುಪಿಸುವ ಮೂಲಕ ಪಕ್ಷContinue reading “ಬಿಜೆಪಿ ಹಿರಿಯ ಕಾರ್ಯಕರ್ತ ಕರಾಮತ್ ಆಲಿ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸಂತಾಪ”
ಕುಟುಂಬ ರಾಜಕಾರಣದಲ್ಲೇ ಸುದೀರ್ಘ ಆಳ್ವಿಕೆ ನಡೆಸಿದ ಕಾಂಗ್ರೆಸ್ಸಿಗೆ ಬಿಜೆಪಿ ರಾಜ್ಯ ನಾಯಕತ್ವದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಮಹೇಶ್ ಠಾಕೂರ್
ಉಡುಪಿ: ಸ್ವಾತಂತ್ರ್ಯಾನಂತರ ನಕಲಿ ಗಾಂಧಿ ಪರಿವಾರದ ಸುಪರ್ದಿಯಲ್ಲೇ ಸುಧೀರ್ಘ ಅವಧಿಗೆ ದೇಶವನ್ನಾಳಿದ ಕಾಂಗ್ರೆಸ್ ಕುಟುಂಬ ರಾಜಕಾರಣದ ಪಿತಾಮಹ ಎಂಬುದು ಜಗಜ್ಜಾಹೀರಾಗಿದೆ. ಜೀವನ ಪರ್ಯಂತ ಒಂದೇ ಕುಟುಂಬಕ್ಕೆ ಬಹು ಪರಾಕ್ ಹೇಳುವ ಕಾಂಗ್ರೆಸಿಗರಿಗೆ ಬಿಜೆಪಿ ರಾಜ್ಯ ನಾಯಕತ್ವದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ರವರ ಕುಟುಂಬ ರಾಜಕಾರಣದ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಕಾರ್ಯಕರ್ತ ಆಧಾರಿತ ರಾಜಕೀಯ ಪಕ್ಷ,Continue reading “ಕುಟುಂಬ ರಾಜಕಾರಣದಲ್ಲೇ ಸುದೀರ್ಘ ಆಳ್ವಿಕೆ ನಡೆಸಿದ ಕಾಂಗ್ರೆಸ್ಸಿಗೆ ಬಿಜೆಪಿ ರಾಜ್ಯ ನಾಯಕತ್ವದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಮಹೇಶ್ ಠಾಕೂರ್”