ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣೆ

ಅಜಾತಶತ್ರು ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ದಿನಾಚರಣೆಯನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಛೇರಿಯಲ್ಲಿ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಕಾರ್ಯದರ್ಶಿContinue reading “ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣೆ”

ಬಿ.ಕೆ. ಹರಿಪ್ರಸಾದ್ ಹೇಳಿಕೆ ಅವರ ಹತಾಶ ಮಾನಸಿಕತೆಯ ಪ್ರತಿಬಿಂಬ: ಕೆ.ಉದಯಕುಮಾರ್ ಶೆಟ್ಟಿ

ಉಡುಪಿ:ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆ ಅವರ ಹತಾಶ ಮಾನಸಿಕತೆಯನ್ನು ಬಿಂಬಿಸುತ್ತದೆ. ಬ್ರಿಟಿಷರ ಬೂಟು ನೆಕ್ಕುವ ಸಂಸ್ಕೃತಿ ನಮ್ಮದಲ್ಲ. ಬಿಜೆಪಿ ದೇಶಕ್ಕಾಗಿ ಹೋರಾಟ ಮಾಡಿದ ಸ್ವಾತಂತ್ರ್ಯ ವೀರರ, ಗಡಿಯಲ್ಲಿ ನಮ್ಮನ್ನು ಕಾಯುವ ವೀರ ಯೋಧರ ಹಾಗೂ ಶೋಷಿತ ಸಮಾಜದ ಕಟ್ಟಕಡೆಯ ವ್ಯಕ್ತಿಯ ಬೂಟು ಒರೆಸುವ ಕೆಲಸ ಮಾಡುತ್ತದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ ಹೇಳಿದ್ದಾರೆ. ನೀವು ಇಟಲಿ ಮಹಿಳೆಯ ಸೆರಗಿನ ಹಿಂದೆ ರಾಜಕೀಯ ಮಾಡುತ್ತಾ ಇನ್ನೂ ಅದೇ ಪಳಿಯುಳಿಕೆಗೆ ಜೋತು ಬಿದ್ದವರು. ನಿಮಗೆContinue reading “ಬಿ.ಕೆ. ಹರಿಪ್ರಸಾದ್ ಹೇಳಿಕೆ ಅವರ ಹತಾಶ ಮಾನಸಿಕತೆಯ ಪ್ರತಿಬಿಂಬ: ಕೆ.ಉದಯಕುಮಾರ್ ಶೆಟ್ಟಿ”

ಹಿಜಾಬ್ ಆದೇಶ ಹಿಂಪಡೆತ – ಮುಸಲ್ಮಾನರ ತುಷ್ಠೀಕರಣವೇ ಸಿಧ್ದರಾಮಯ್ಯವರ ಏಕೈಕ ಅಜೆಂಡಾ – ಶ್ರೀಕಾಂತ ನಾಯಕ್

ಉಡುಪಿ:ರಾಜ್ಯ ಸರಕಾರದ ಮುಖ್ಯಮಂತ್ರಿಗಳಾದ ಸಿಧ್ಧರಾಮಯ್ಯರವರು ಹಿಂದಿನ ಸರಕಾರ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಕುರಿತಂತೆ ನೀಡಿದ ಆದೇಶ ಹಿಂಪಡೆಯುವ ಮಾತನ್ನಾಡಿ ತಮ್ಮ ಮುಸ್ಲಿಮರ ತುಷ್ಠೀಕರಣದ ಪರಮಾವಧಿ ತಲುಪುತ್ತಿದ್ದಾರೆ. ಸಿಧ್ಧರಾಮಯ್ಯರವರಿಗೆ ಹಿಂದೂಗಳೆಂದರೆ ಅಸಡ್ಡೆ. ಈ ಹಿಂದೆ ಮುಸಲ್ಮಾನರಿಗೆ ಹತ್ತು ಸಾವಿರ ಕೋಟಿ ಅನುದಾನ ನೀಡುತ್ತೇನೆ, ದೇಶದ ಸಂಪತ್ತನ್ನು ನಿಮಗೆ ಹಂಚುತ್ತೇನೆ ಇತ್ಯಾದಿ ಮಾತುಗಳಿಂದ ತನ್ನ ಮುಸ್ಲಿಂ ಪ್ರೀತಿಯನ್ನು ಬಹಿರಂಗವಾಗಿ ತೋರ್ಪಡಿಸಿದ್ದಾರೆ. ಅವರ ಉಪಮುಖ್ಯಮಂತ್ರಿಗಳಾದ ಡಿಕೆಶಿಯವರು ದೆ ಆರ್ ಆಲ್ ಮೈ ಬ್ರದರ್ಸ್, ಅವರ ಮೇಲಿನ‌ ಕೋಮು ಗಲಭೆ ಕೇಸುಗಳನ್ನುContinue reading “ಹಿಜಾಬ್ ಆದೇಶ ಹಿಂಪಡೆತ – ಮುಸಲ್ಮಾನರ ತುಷ್ಠೀಕರಣವೇ ಸಿಧ್ದರಾಮಯ್ಯವರ ಏಕೈಕ ಅಜೆಂಡಾ – ಶ್ರೀಕಾಂತ ನಾಯಕ್”

ಸಿ.ಎಂ. ಹಿಜಾಬ್ ಹೇಳಿಕೆ ಅತಿರೇಕದ ಪರಮಾವಧಿ : ಕೆ.ಉದಯಕುಮಾರ್ ಶೆಟ್ಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿಜಾಬ್ ನಿಷೇಧ ಹಿoಪಡೆಯುತ್ತೇನೆ ಎನ್ನುವ ಹೇಳಿಕೆ ಅತಿರೇಕದ ಪರಮಾವಧಿ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ ಹೇಳಿದ್ದಾರೆ. ಸಿದ್ದರಾಮಯ್ಯ ಹಿಂದಿನಿಂದಲೂ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಾ ಬಂದವರು. ಅದು ಶಾಲಾ ವಿದ್ಯಾರ್ಥಿಗಳ ಬಗ್ಗೆ ಇರಬಹುದು ಅಥವಾ ಧರ್ಮದ ಬಗ್ಗೆ ಇರಬಹುದು. ಇದು ಮುಸ್ಲಿಂ ಓಲೈಕೆಯ ಮುಂದುವರಿದ ಭಾಗವಾಗಿದೆ. ಪಂಚ ರಾಜ್ಯ ಚುನಾವಣೆಯಲ್ಲಿ ಹೀನಾಯ ಸೋಲನ್ನು ಕಂಡ ಕಾಂಗ್ರೆಸ್ ಗೆ ಲೋಕಸಭಾ ಚುನಾವಣೆಗೆ ಬತ್ತಳಿಕೆಯಲ್ಲಿ ಯಾವುದೇ ಅಸ್ತ್ರಗಳಿಲ್ಲ. ನ್ಯಾಯಾಲಯದಲ್ಲಿ ಇತ್ಯರ್ಥಗೊಂಡ ಅಧ್ಯಾಯವನ್ನುContinue reading “ಸಿ.ಎಂ. ಹಿಜಾಬ್ ಹೇಳಿಕೆ ಅತಿರೇಕದ ಪರಮಾವಧಿ : ಕೆ.ಉದಯಕುಮಾರ್ ಶೆಟ್ಟಿ”

ಉಡುಪಿ ನಗರಸಭೆಯ ಮೂಡು ಪೆರಂಪಳ್ಳಿ ವಾರ್ಡ್ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜಾ ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ ನಗರಸಭೆಯ ಮೂಡು ಪೆರಂಪಳ್ಳಿ ವಾರ್ಡಿನ ಉಪ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜಾರವರು ಡಿ.15ರಂದು ಪಕ್ಷದ ಮುಖಂಡರು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರೊಂದಿಗೆ ನಗರಸಭೆಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಉಪಾಧ್ಯಕ್ಷ ಶ್ರೀಶ ನಾಯಕ್ ಪೆರ್ಣಂಕಿಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಬಿಜೆಪಿ ಉಡುಪಿ ನಗರಾಧ್ಯಕ್ಷContinue reading “ಉಡುಪಿ ನಗರಸಭೆಯ ಮೂಡು ಪೆರಂಪಳ್ಳಿ ವಾರ್ಡ್ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜಾ ನಾಮಪತ್ರ ಸಲ್ಲಿಕೆ”

ಜಮ್ಮು ಕಾಶ್ಮೀರದ 370ನೇ ವಿಧಿ ರದ್ದತಿ ತೀರ್ಮಾನವನ್ನು ಎತ್ತಿ ಹಿಡಿದ ಸುಪ್ರೀಂ ತೀರ್ಪು ಸ್ವಾಗತಾರ್ಹ: ಕುಯಿಲಾಡಿ

ಉಡುಪಿ: ಭಾರತದ ಅವಿಭಾಜ್ಯ ಅಂಗ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿ ಅಲ್ಲಿನ ಹಿಂದೂಗಳ ಬದುಕನ್ನು ನರಕ ಸದೃಶ ಮಾಡಿದ್ದ 370ನೇ ವಿಧಿ ರದ್ದತಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕೈಗೊಂಡಿರುವ ಐತಿಹಾಸಿಕ ನಿರ್ಣಯವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ಸುಪ್ರೀಂ ತೀರ್ಪು ಸತ್ಯಕ್ಕೆ ಸಂದ ಜಯವಾಗಿದೆ. ನ್ಯಾಯ ಸಮ್ಮತ ತೀರ್ಪಿನಿಂದ ದೇಶದ ಏಕತೆ ಮತ್ತು ಅಖಂಡತೆಗೆ ಸವಾಲು ಒಡ್ಡಿದ್ದ ವಿಭಜನಕಾರಿ ಕಾಂಗ್ರೆಸ್ಸಿಗೆ ಕಪಾಳ ಮೋಕ್ಷ ಆದಂತಾಗಿದೆ ಎಂದುContinue reading “ಜಮ್ಮು ಕಾಶ್ಮೀರದ 370ನೇ ವಿಧಿ ರದ್ದತಿ ತೀರ್ಮಾನವನ್ನು ಎತ್ತಿ ಹಿಡಿದ ಸುಪ್ರೀಂ ತೀರ್ಪು ಸ್ವಾಗತಾರ್ಹ: ಕುಯಿಲಾಡಿ”

ಡಿ.13ರಂದು ಬಿಜೆಪಿ ಬೃಹತ್ ಹೋರಾಟ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರದಿಂದ ಬಳಲಿರುವ ರೈತರ ಮೇಲೆ ಈ ಸರಕಾರ ಬರೆ ಎಳೆಯುತ್ತಿದೆ; ಬರಗಾಲ ನಿರ್ವಹಣೆಯಲ್ಲಿ ಅದು ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆಕ್ಷೇಪಿಸಿದರು. ಬೆಳಗಾವಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಮೊದಲೇ ವಿದ್ಯುತ್ ಕೊರತೆ ಇದೆ. ನಾವು 7 ಗಂಟೆ ವಿದ್ಯುತ್ ಕೊಡುತ್ತಿದ್ದೆವು. ಈ ಸರಕಾರ 5 ಗಂಟೆಯಷ್ಟೂ ವಿದ್ಯುತ್ ಸರಬರಾಜು ಮಾಡುತ್ತಿಲ್ಲ. ಹೊಸ ಬೋರ್‍ವೆಲ್ ಕೊರೆಸಿದಾಗ ವಿದ್ಯುತ್ ಸಂಪರ್ಕಕ್ಕೆContinue reading “ಡಿ.13ರಂದು ಬಿಜೆಪಿ ಬೃಹತ್ ಹೋರಾಟ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್”

ಮರಳು ಸಹಿತ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ; ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಛೇರಿಗೆ ಮುತ್ತಿಗೆ: ಕುಯಿಲಾಡಿ

ಉಡುಪಿ: ಮರಳು ಸಹಿತ ಉಡುಪಿ ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಮುಂದಿನ 10 ದಿನಗಳೊಳಗೆ ಪರಿಹರಿಸದೇ ಇದ್ದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಜಿಲ್ಲಾಧಿಕಾರಿಗಳ ಕಛೇರಿಗೆ ಮುತ್ತಿಗೆ ಹಾಕಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ರಾಜ್ಯ ಸರಕಾರ ಅಸ್ತಿತ್ವಕ್ಕೆ ಬಂದು ಆರು ತಿಂಗಳು ಕಳೆದರೂ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳು ನಡೆಯುತ್ತಿಲ್ಲ, ಜನತೆಗೆ ಮರಳು ಸಿಗುತ್ತಿಲ್ಲ, ಭೂ ಪರಿವರ್ತನೆ ಸಹಿತ ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಂಗಲ್ ಲೇಔಟ್ ಪ್ರಕ್ರಿಯೆಗಳು ಸಮರ್ಪಕವಾಗಿ ನಡೆಯುತ್ತಿಲ್ಲ, ಹೊಸ ರೇಷನ್Continue reading “ಮರಳು ಸಹಿತ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ; ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಛೇರಿಗೆ ಮುತ್ತಿಗೆ: ಕುಯಿಲಾಡಿ”

ಉಡುಪಿ ಜಿಲ್ಲೆಯಲ್ಲಿ ತೀವ್ರಗೊಂಡ ಮರಳು ಸಮಸ್ಯೆ; 7 ಸದಸ್ಯರ ಮರಳು ಸಮಿತಿ (ಸಿ.ಆರ್.ಝಡ್)ಗೆ ಗುರುಪ್ರಸಾದ್ ಶೆಟ್ಟಿ ಕಟಪಾಡಿ ರಾಜೀನಾಮೆ

ಉಡುಪಿ, ಡಿ.7: ಜಿಲ್ಲೆಯಲ್ಲಿ ತಲೆದೋರಿರುವ ಮರಳಿನ ಸಮಸ್ಯೆಗೆ ಪರಿಹಾರ ಕಾಣದೆ ಜಿಲ್ಲೆಯ ಸಾವಿರಾರು ಬಡ ಜನತೆಯ ನಿರ್ಮಾಣ ಹಂತದಲ್ಲಿರುವ ಮನೆಗಳು ಅತಂತ್ರ ಸ್ಥಿತಿಯಲ್ಲಿ ಸ್ಥಗಿತಗೊಂಡಿವೆ. ಇದರ ಜೊತೆಗೆ ಕಟ್ಟಡದ ನಿರ್ಮಾಣ ಕ್ಷೇತ್ರದಲ್ಲಿಯೂ ವಿಪರೀತ ತೊಂದರೆ ಉಂಟಾಗಿದೆ. ಸಾಮಾನ್ಯ ಜನರ ನಿತ್ಯ ಬವಣೆ ಅರಣ್ಯರೋಧನವಾಗಿದೆ. ಸಾರ್ವಜನಿಕರು, ವಿವಿಧ ಸಂಘಟನೆಗಳು ಹಾಗೂ ಕಾರ್ಮಿಕರು ಹಲವಾರು ಮನವಿಗಳನ್ನು ನೀಡಿದರೂ, ಮುಷ್ಕರಗಳನ್ನು ನಡೆಸಿದರೂ ಸರಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ದೊರೆತಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಜಿಲ್ಲೆಯ ಜನತೆಯ ಮರಳಿನ ಬೇಡಿಕೆಯನ್ನು ಪೂರೈಸುವಲ್ಲಿContinue reading “ಉಡುಪಿ ಜಿಲ್ಲೆಯಲ್ಲಿ ತೀವ್ರಗೊಂಡ ಮರಳು ಸಮಸ್ಯೆ; 7 ಸದಸ್ಯರ ಮರಳು ಸಮಿತಿ (ಸಿ.ಆರ್.ಝಡ್)ಗೆ ಗುರುಪ್ರಸಾದ್ ಶೆಟ್ಟಿ ಕಟಪಾಡಿ ರಾಜೀನಾಮೆ”

ದೇಶದ ಸಂಪತ್ತನ್ನು ಒಂದೇ ಕೋಮಿಗೆ ಹಂಚಲು ಅದೇನು ಸಿದ್ಧರಾಮಯ್ಯನವರ ಪಿತ್ರಾರ್ಜಿತ ಆಸ್ತಿಯೆ?: ಕುಯಿಲಾಡಿ ಪ್ರಶ್ನೆ

ಉಡುಪಿ: ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ ಎನ್ನಲು ಸಿದ್ಧರಾಮಯ್ಯನವರೇನು ದೇಶದ ಪ್ರಧಾನ ಮಂತ್ರಿಯೇ ಅಥವಾ ದೇಶದ ಸಂಪತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಪಿತ್ರಾರ್ಜಿತ ಆಸ್ತಿಯೇ? ದೇಶದ ಸಂಪತ್ತನ್ನು ಒಂದೇ ಕೋಮಿಗೆ ಹಂಚಲು ಇವರಿಗೇನು ಹಕ್ಕಿದೆ? ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಶ್ನಿಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ದಕ್ಷಿಣ ಭಾರತದ ಮುಸ್ಲಿಂ ಗುರುಗಳ ಸಮಾವೇಶದಲ್ಲಿ ಕೇವಲ ರಾಜಕೀಯ ಲಾಭಕ್ಕಾಗಿ ಮುಸ್ಲಿಂ ಸಮುದಾಯವನ್ನು ಖುಷಿಪಡಿಸುವ ಸಲುವಾಗಿ ಇಂತಹ ಸಂವಿಧಾನ ವಿರೋಧಿ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ದೇಶದ ಅತೀContinue reading “ದೇಶದ ಸಂಪತ್ತನ್ನು ಒಂದೇ ಕೋಮಿಗೆ ಹಂಚಲು ಅದೇನು ಸಿದ್ಧರಾಮಯ್ಯನವರ ಪಿತ್ರಾರ್ಜಿತ ಆಸ್ತಿಯೆ?: ಕುಯಿಲಾಡಿ ಪ್ರಶ್ನೆ”

Design a site like this with WordPress.com
Get started