ಕಾಪು: ಉಡುಪಿ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರು ಇಂದು ಕಾಫು ಬಿಜೆಪಿ ಕಚೇರಿಗೆ ಪ್ರಥಮ ಭೇಟಿ ನೀಡಿದರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪ್ರಸ್ತಾವನೆ ಮಾತನಾಡಿ ನೂತನ ಅಧ್ಯಕ್ಷರಿಗೆ ಶುಭಹಾರೈಸಿದರು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್ ನೂತನ ಅಧ್ಯಕ್ಷರಿಗೆ ಅಭಿನಂದನಾ ಮಾತುಗಳನ್ನಾಡಿ ಶುಭಹಾರೈಸಿದರು. ನಂತರದಲ್ಲಿ ನೂತನ ಅಧ್ಯಕ್ಷರಿಗೆ ಗೌರವಾರ್ಪಣೆ ಮಾಡಲಾಯಿತು. ಹಾಗೂ ಈ ಸಂದರ್ಭದಲ್ಲಿ ರಾಜ್ಯ ಮಹಿಳಾಮೋರ್ಚದ ಪ್ರಧಾನಕಾರ್ಯದರ್ಶಿಯಾಗಿ ಆಯ್ಕೆಯಾದ ಶಿಲ್ಪಾ ಜಿ ಸುವರ್ಣ ಇವರಿಗೂContinue reading “ಉಡುಪಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾದ ಕಿಶೋರ್ ಕುಮಾರ್ ರವರು ಕಾಪು ಬಿಜೆಪಿ ಕಚೇರಿಗೆ ಭೇಟಿ”
Monthly Archives: January 2024
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ
ಉಡುಪಿ: ಮುಂಬರಲಿರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕರಾಗಿ ನೇಮಕಗೊಂಡಿರುವ ಕುತ್ಯಾರು ನವೀನ್ ಶೆಟ್ಟಿಯವರು ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು. ಸಂಘದ ಸ್ವಯಂಸೇವಕರಾಗಿ, ಭಾರತೀಯ ಜನತಾ ಪಾರ್ಟಿಯಲ್ಲಿ ಕಳೆದ 30 ವರ್ಷಗಳಿಂದ ಸಕ್ರಿಯ ಕಾರ್ಯಕರ್ತರಾಗಿರುವ ಕುತ್ಯಾರು ನವೀನ್ ಶೆಟ್ಟಿಯವರು ಬಿಜೆಪಿ ಕಾಪು ಮಂಡಲ ಯುವ ಮೋರ್ಚಾ ಅಧ್ಯಕ್ಷರಾಗಿ 2 ಬಾರಿ, ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ 2Continue reading “ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ”
ಉಡುಪಿ ಜಿಲ್ಲಾ ಬಿಜೆಪಿಯಿಂದ 75ನೆೇ ಗಣರಾಜ್ಯೋತ್ಸವ ಆಚರಣೆ
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ 75ನೇ ಗಣರಾಜ್ಯೋತ್ಸವವನ್ನು ಜಿಲ್ಲಾ ಕಛೇರಿಯ ಬಳಿ ಆಚರಿಸಲಾಯಿತು. ಬಿಜೆಪಿ ಮಂಗಳೂರು ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಧ್ವಜಾರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಮಹತ್ವವನ್ನು ವಿವರಿಸಿ ಪಕ್ಷದ ಪದಾಧಿಕಾರಿಗಳಿಗೆ, ಕಾರ್ಯಕರ್ತರಿಗೆ ಹಾಗೂ ನಾಡಿನ ಸಮಸ್ತ ಜನತೆಗೆ ಶುಭಾಶಯವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಅಂಡಾರು ದೇವಿ ಪ್ರಸಾದ್ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷContinue reading “ಉಡುಪಿ ಜಿಲ್ಲಾ ಬಿಜೆಪಿಯಿಂದ 75ನೆೇ ಗಣರಾಜ್ಯೋತ್ಸವ ಆಚರಣೆ”
‘ಶ್ರೀ ರಾಮನ ಆದರ್ಶವನ್ನು ಮೈಗೂಡಿಸಿಕೊಳ್ಳೋಣ’ : ಡಾ! ನಿ.ಬೀ. ವಿಜಯ ಬಲ್ಲಾಳ್ಅಂಬಲಪಾಡಿ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ
ಉಡುಪಿ: ಶತಮಾನಗಳ ಹೋರಾಟ, ತ್ಯಾಗ, ಬಲಿದಾನಗಳ ಫಲವಾಗಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಗೊಂಡು ಬಾಲ ರಾಮನಿಗೆ ಪ್ರಾಣ ಪ್ರತಿಷ್ಠೆ ಆಗುವಂತಾಗಿದೆ. ಇದು ದೇಶದ ಶ್ರೇಯಸ್ಸಿನ ಸಂಕೇತವಾಗಿದೆ. ಶ್ರೀ ರಾಮೋತ್ಸವ ಒಂದು ದಿನಕ್ಕೆ ಸೀಮಿತವಾಗಿರದೆ ನಿತ್ಯ ನಿರಂತರ ಮನೆ ಮನಗಳಲ್ಲಿ ಶ್ರೀ ರಾಮನ ಆರಾಧನೆ ಮಾಡುವಂತಾಗಲಿ ಎಂದು ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಹೇಳಿದರು. ಅವರು ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಆಶ್ರಯದಲ್ಲಿ ಶ್ರೀContinue reading “‘ಶ್ರೀ ರಾಮನ ಆದರ್ಶವನ್ನು ಮೈಗೂಡಿಸಿಕೊಳ್ಳೋಣ’ : ಡಾ! ನಿ.ಬೀ. ವಿಜಯ ಬಲ್ಲಾಳ್ಅಂಬಲಪಾಡಿ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ”
ಬಿಜೆಪಿಯಿಂದ ಗ್ರಾಮ ಚಲೋ, ಗೋಡೆ ಬರಹ, ಶ್ರೀ ರಾಮ ಮಂದಿರ ದರ್ಶನ ಅಭಿಯಾನ
ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ ವತಿಯಿಂದ ‘2024 ಮೋದಿ ಮತ್ತೊಮ್ಮೆ’ ಗೋಡೆ ಬರಹ, ಗ್ರಾಮ ಚಲೋ, ಅಯೋಧ್ಯಾ ಶ್ರೀ ರಾಮ ಮಂದಿರ ದರ್ಶನ ಅಭಿಯಾನ ಹಾಗೂ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದ ಕುರಿತು ಸಂಬಂಧಪಟ್ಟ ಜವಾಬ್ದಾರಿಗಳ ಪ್ರಮುಖರ ಸಭೆಯು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾಹಿತಿ ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಹಾಗೂ ಪಕ್ಷದ ಪ್ರಮುಖರುContinue reading “ಬಿಜೆಪಿಯಿಂದ ಗ್ರಾಮ ಚಲೋ, ಗೋಡೆ ಬರಹ, ಶ್ರೀ ರಾಮ ಮಂದಿರ ದರ್ಶನ ಅಭಿಯಾನ”
ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಉಡುಪಿಯಲ್ಲಿ ಸಿ.ಟಿ. ರವಿ ಚಾಲನೆ
ಉಡುಪಿ: ಮುಂದಿನ ಲೋಕಸಭಾ ಚುನಾವಣೆಯ ಪ್ರಯುಕ್ತ ‘ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಉಡುಪಿಯ ಕಡಿಯಾಳಿಯಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಉಪಾಧ್ಯಕ್ಷರುಗಳಾದ ರವಿ ಅಮೀನ್ ಬನ್ನಂಜೆ, ಪೆರಣಂಕಿಲ ಶ್ರೀಶ ನಾಯಕ್, ಬಿಜೆಪಿ ದ.ಕ. ಸಹ ಪ್ರಭಾರಿContinue reading “ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಉಡುಪಿಯಲ್ಲಿ ಸಿ.ಟಿ. ರವಿ ಚಾಲನೆ”
ಜ.22, ಸೋಮವಾರ ಮಧ್ಯಾಹ್ನ ಗಂಟೆ 3.00ಕ್ಕೆ ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧಿಕಾರ ಸ್ವೀಕಾರ
ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ ಇದರ ನೂತನ ಜಿಲ್ಲಾಧ್ಯಕ್ಷರಾಗಿ ನಿಯೋಜನೆಗೊಂಡಿರುವ ಕಿಶೋರ್ ಕುಮಾರ್ ಕುಂದಾಪುರ ಇವರು ಜ.22 ಸೋಮವಾರ ಮಧ್ಯಾಹ್ನ ಗಂಟೆ 3.00ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತ ಬಂಧುಗಳು ಮತ್ತು ಪಕ್ಷದ ಹಿತೈಷಿಗಳು ಉಪಸ್ಥಿತರಿರಬೇಕಾಗಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ ಪತ್ರಿಕಾContinue reading “ಜ.22, ಸೋಮವಾರ ಮಧ್ಯಾಹ್ನ ಗಂಟೆ 3.00ಕ್ಕೆ ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧಿಕಾರ ಸ್ವೀಕಾರ”
ಜ.22ರಂದು ಅಂಬಲಪಾಡಿ ದೇವಸ್ಥಾನದಲ್ಲಿ “ಶ್ರೀ ರಾಮೋತ್ಸವ” ಕಾರ್ಯಕ್ರಮ
ಉಡುಪಿ: ಜ.22ರಂದು ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಆಶ್ರಯದಲ್ಲಿ ಬೆಳಿಗ್ಗೆ ಗಂಟೆ 9.30ರಿಂದ ಮಧ್ಯಾಹ್ನ 1.00ರ ವರೆಗೆ “ಶ್ರೀ ರಾಮೋತ್ಸವ” ಕಾರ್ಯಕ್ರಮವು ‘ಶ್ರೀ ಭವಾನಿ ಮಂಟಪ’ದಲ್ಲಿ ನಡೆಯಲಿದೆ. ಬೆಳಿಗ್ಗೆ ಗಂಟೆ 9.30ಕ್ಕೆ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ರವರು ಜ್ಯೋತಿ ಬೆಳಗಿಸಿ “ಶ್ರೀ ರಾಮೋತ್ಸವ”ಕ್ಕೆ ಚಾಲನೆ ನೀಡಲಿದ್ದಾರೆ. ಭಜನೆ, ಹನುಮಾನ್ ಚಾಲೀಸ್Continue reading “ಜ.22ರಂದು ಅಂಬಲಪಾಡಿ ದೇವಸ್ಥಾನದಲ್ಲಿ “ಶ್ರೀ ರಾಮೋತ್ಸವ” ಕಾರ್ಯಕ್ರಮ”
ಭಗವಂತನಿಗೆ ಪ್ರಿಯವಾದ ಭಜನೆ ಮನೆ ಮನೆಗಳಲ್ಲಿ ಮೊಳಗಲಿ : ಪರ್ಯಾಯ ಶ್ರೀ ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ*ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ವತಿಯಿಂದ ಪರ್ಯಾಯೋತ್ಸವದ ಪ್ರಯುಕ್ತ ಭಜನಾ ಸೇವೆ
ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠದ ಆರಾಧ್ಯಮೂರ್ತಿ ನಾದ ಬ್ರಹ್ಮ ಪಾಂಡುರಂಗ ವಿಠಲನಿಗೆ ಅತ್ಯಂತ ಪ್ರಿಯವಾದ ಭಜನೆ ಸನ್ನಿದಾನದಲ್ಲಿ ನಿರಂತರವಾಗಿ ನಡೆಯುತ್ತಿದೆ. ಭಜನೆಯಿಂದ ಭಗವಂತನು ಸಂತುಷ್ಟನಾಗಿ ನಮ್ಮೆಲ್ಲರನ್ನು ಅನುಗ್ರಹಿಸಲಿ. ಇಂತಹ ಭಜನಾ ಕಾರ್ಯಕ್ರಮ ಎರಡು ವರ್ಷಗಳ ಸಮಯದಲ್ಲಿ ನಿರಂತರವಾಗಿ ನಡೆಯಲಿ. ಭಜನಾ ಸಂಘಗಳು ಬೆಳೆಯಲಿ. ಎಲ್ಲ ಮನೆಗಳಲ್ಲಿ ನಿರಂತರ ಭಜನೆ ಆಗುವಂತಾಗಲಿ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಅವರು ಹೇಳಿದರು. ಅವರು ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ಶ್ರೀ ಧರ್ಮಸ್ಥಳContinue reading “ಭಗವಂತನಿಗೆ ಪ್ರಿಯವಾದ ಭಜನೆ ಮನೆ ಮನೆಗಳಲ್ಲಿ ಮೊಳಗಲಿ : ಪರ್ಯಾಯ ಶ್ರೀ ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ*ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ವತಿಯಿಂದ ಪರ್ಯಾಯೋತ್ಸವದ ಪ್ರಯುಕ್ತ ಭಜನಾ ಸೇವೆ”
ಗ್ಯಾರಂಟಿಗಳ ಅಸಮರ್ಪಕ ಅನುಷ್ಠಾನದಿಂದ ರೋಸಿ ಹೋದ ಜನತೆ ಕಾಂಗ್ರೆಸ್ ಮುಖಂಡರ ತಲೆ ಬೋಳಿಸಿದರೂ ಆಶ್ಚರ್ಯವಿಲ್ಲ : ಕೆ. ರಾಘವೇಂದ್ರ ಕಿಣಿ
ಉಡುಪಿ: ಪಂಚ ಗ್ಯಾರoಟಿಗಳ ಆಮಿಷವೊಡ್ಡಿ ಅಧಿಕಾರಕ್ಕೇರಿದ ಕಾಂಗ್ರೆಸ್ ಗ್ಯಾರಂಟಿಗಳ ಅಸಮರ್ಪಕ ಅನುಷ್ಠಾನದಿಂದ ಜನತೆಯ ಆಕ್ರೋಶಕ್ಕೆ ಗುರಿಯಾಗಿದೆ. ಕಾಂಗ್ರೆಸ್ಸಿನ ಗೋಸುoಬೆತನದ ನಡೆಯಿಂದ ರೋಸಿ ಹೋಗಿರುವ ಜನತೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮುಖಂಡರ ತಲೆ ಬೋಳಿಸಿದರೂ ಆಶ್ಚರ್ಯವಿಲ್ಲ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದೂ ಉಚಿತ ಗ್ಯಾರಂಟಿಗಳನ್ನು ಯಾವುದೇ ಬದಲಾವಣೆ ಇಲ್ಲದೆ ಯಥಾವತ್ತಾಗಿ ಜಾರಿಗೆ ತಂದಲ್ಲಿ ತನ್ನ ತಲೆ ಬೋಳಿಸುವುದಾಗಿ ಹೇಳಿಕೆ ನೀಡಿದ್ದ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ತನ್ನContinue reading “ಗ್ಯಾರಂಟಿಗಳ ಅಸಮರ್ಪಕ ಅನುಷ್ಠಾನದಿಂದ ರೋಸಿ ಹೋದ ಜನತೆ ಕಾಂಗ್ರೆಸ್ ಮುಖಂಡರ ತಲೆ ಬೋಳಿಸಿದರೂ ಆಶ್ಚರ್ಯವಿಲ್ಲ : ಕೆ. ರಾಘವೇಂದ್ರ ಕಿಣಿ”