ಉಡುಪಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾದ ಕಿಶೋರ್ ಕುಮಾರ್ ರವರು ಕಾಪು ಬಿಜೆಪಿ ಕಚೇರಿಗೆ ಭೇಟಿ



ಕಾಪು: ಉಡುಪಿ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರು ಇಂದು ಕಾಫು ಬಿಜೆಪಿ ಕಚೇರಿಗೆ ಪ್ರಥಮ‌ ಭೇಟಿ ನೀಡಿದರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪ್ರಸ್ತಾವನೆ ಮಾತನಾಡಿ ನೂತನ ಅಧ್ಯಕ್ಷರಿಗೆ ಶುಭಹಾರೈಸಿದರು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್ ನೂತನ ಅಧ್ಯಕ್ಷರಿಗೆ ಅಭಿನಂದನಾ ಮಾತುಗಳನ್ನಾಡಿ ಶುಭಹಾರೈಸಿದರು. ನಂತರದಲ್ಲಿ ನೂತನ ಅಧ್ಯಕ್ಷರಿಗೆ ಗೌರವಾರ್ಪಣೆ ಮಾಡಲಾಯಿತು. ಹಾಗೂ ಈ ಸಂದರ್ಭದಲ್ಲಿ ರಾಜ್ಯ ಮಹಿಳಾಮೋರ್ಚದ ಪ್ರಧಾನ‌ಕಾರ್ಯದರ್ಶಿಯಾಗಿ ಆಯ್ಕೆಯಾದ ಶಿಲ್ಪಾ ಜಿ ಸುವರ್ಣ ಇವರಿಗೂ ಅಭಿನಂದನೆ ಗೌರವಾರ್ಪಣೆ ಸಲ್ಲಿಸಲಾಯಿತು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ದ.ಕ. ಜಿಲ್ಲಾ ಸಹ ಪ್ರಭಾರಿಗಳಾದ ರಾಜೇಶ್ ಕಾವೇರಿ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚ ಅಧ್ಯಕ್ಷರಾದ ಸುರೇಂದ್ರ ಪಣಿಯೂರು, ಮಂಡಲ ಮೋರ್ಚಗಳ ಅಧ್ಯಕ್ಷರುಗಳಾದ ಸಚಿನ್ ಸುವರ್ಣ, ಮಹಿಳಾ ಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ರೈತ ಮೋರ್ಚ ಅಧ್ಯಕ್ಷರಾದ ಗುರುನಂದನ್, ಮಂಡಲ ಉಪಾಧ್ಯಕ್ಷರುಗಳು, ಕಾರ್ಯದರ್ಶಿಗಳು, ಅನ್ಯಾನ್ಯ ಜವಾಬ್ದಾರಿ ಹೊಂದಿರುವ ಪದಾಧಿಕಾರಿಗಳು ಕಾರ್ಯಕರ್ತರು, ಜನಪ್ರತಿನಿಧಿಗಳು, ಪುರಸಭಾ ಸದಸ್ಯರುಗಳು ಮತ್ತಿತರರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started