ಕಾಂಗ್ರೆಸ್ ಬೆಂಬಲಿಗರ ಪಾಕ್ ಪರ ಘೋಷಣೆಯನ್ನು ಖಂಡಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಬೃಹತ್ ಪ್ರತಿಭಟನೆ, ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ

ಉಡುಪಿ, ಫೆ.28: ಕಾಂಗ್ರೆಸ್ಸಿನ ನೂತನ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚಾರಣೆಯಲ್ಲಿ ಕಾಂಗ್ರೆಸ್ ಬೆಂಬಲಿಗರಿಂದ ನಡೆದ ದೇಶ ವಿರೋಧಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಯನ್ನು ಖಂಡಿಸಿ, ಉಡುಪಿ ಜಿಲ್ಲಾ ಬಿಜೆಪಿ ಮತ್ತು ಬಿಜೆಪಿ ಜಿಲ್ಲಾ ಯುವ ಮೋರ್ಚಾ ನೇತೃತ್ವದಲ್ಲಿ ಉಡುಪಿಯ ಬ್ರಹ್ಮಗಿರಿ ಸರ್ಕಲ್ ಬಳಿ ಬೃಹತ್ ಪ್ರತಿಭಟನಾ ಸಭೆ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ ನಡೆಯಿತು. ಬೃಹತ್ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಉಡುಪಿ ಶಾಸಕ ಯಶ್ಪಾಲ್ ಎ.ಸುವರ್ಣ, ಬಿಜೆಪಿ ಯುವ ಮೋರ್ಚಾ ರಾಜ್ಯContinue reading “ಕಾಂಗ್ರೆಸ್ ಬೆಂಬಲಿಗರ ಪಾಕ್ ಪರ ಘೋಷಣೆಯನ್ನು ಖಂಡಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಬೃಹತ್ ಪ್ರತಿಭಟನೆ, ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ”

ಬೂತ್ ಗೆಲ್ಲುವ ಗುರಿಯೊಂದಿಗೆ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳೋಣ : ಕ್ಲಸ್ಟರ್ ಪ್ರಭಾರಿ ಎಮ್.ಬಿ. ಭಾನುಪ್ರಕಾಶ್

ಉಡುಪಿ: ಮುಂಬರಲಿರುವ ಲೋಕಸಭಾ ಚುನಾವಣೆ ದೇಶ ಕಟ್ಟುವ ಚುನಾವಣೆಯಾಗಿದೆ. ಚುನಾವಣಾ ನಿರ್ವಹಣಾ ಸಮಿತಿಯ ಸದಸ್ಯರು ಎಲ್ಲರನ್ನೂ ಜೊತೆಯಾಗಿಸಿಕೊಂಡು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಬೂತ್ ಗೆಲ್ಲಿಸುವ ಗುರಿಯೊಂದಿಗೆ ಪಕ್ಷದ ವಿಜಯ ಯಾತ್ರೆಯನ್ನು ಮುಂದುವರಿಸಲು ಕಂಕಣಬದ್ಧರಾಗಿ ಶ್ರಮಿಸಬೇಕು ಎಂದು ಲೋಕಸಭಾ ಚುನಾವಣಾ ಕರಾವಳಿ-ಮಲೆನಾಡು ಕ್ಲಸ್ಟರ್ ಪ್ರಭಾರಿ ಎಮ್.ಬಿ. ಭಾನುಪ್ರಕಾಶ್ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಲೋಕಸಭಾ ಚುನಾವಣಾ ಕಾರ್ಯಾಲಯದಲ್ಲಿ ನಡೆದ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯContinue reading “ಬೂತ್ ಗೆಲ್ಲುವ ಗುರಿಯೊಂದಿಗೆ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳೋಣ : ಕ್ಲಸ್ಟರ್ ಪ್ರಭಾರಿ ಎಮ್.ಬಿ. ಭಾನುಪ್ರಕಾಶ್”

ಪ.ಜಾ. ಜನಾಂಗದ ಅಭಿವೃದ್ಧಿಗೆ ಮೀಸಲಾಗಿಟ್ಟ ಅನುದಾನದ ದುರ್ಬಳಕೆ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಪ್ರತಿಭಟನೆ, ಅನುದಾನ ಹಿoತಿರುಗಿಸಲು ಆಗ್ರಹ

ಪರಿಶಿಷ್ಟ ಜನಾಂಗದ ಅಭಿವೃದ್ಧಿಗಾಗಿ ಮೀಸಲಾಗಿಟ್ಟ ಅನುದಾನವನ್ನು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಗೆ ದುರ್ಬಳಕೆ ಮಾಡಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಎಸ್.ಸಿ. ಮೋರ್ಚಾದ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಪ್ರತಿಭಟನೆಯ ಬಳಿಕ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿ, ಅನುದಾನವನ್ನು ಇಲಾಖೆಗೆ ಹಿಂದಿರುಗಿಸಿರುವಂತೆ ಆಗ್ರಹ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾದ ಅಧ್ಯಕ್ಷ ಗೋಪಾಲ ಕಳಂಜೆ, ಉಪಾಧ್ಯಕ್ಷ ಅನಂದ ಮಟಪಾಡಿ, ಪ್ರಧಾನ ಕಾರ್ಯದರ್ಶಿಗಳಾದContinue reading “ಪ.ಜಾ. ಜನಾಂಗದ ಅಭಿವೃದ್ಧಿಗೆ ಮೀಸಲಾಗಿಟ್ಟ ಅನುದಾನದ ದುರ್ಬಳಕೆ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಪ್ರತಿಭಟನೆ, ಅನುದಾನ ಹಿoತಿರುಗಿಸಲು ಆಗ್ರಹ”

ಬಿಜೆಪಿ ಯುವ ಮೋರ್ಚಾದ ನೂತನ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿಯವರಿಗೆ ಉಡುಪಿ ನಗರ ಬಿಜೆಪಿಯಿಂದ ಅಭಿನಂದನೆ

ಉಡುಪಿ: ಬಿಜೆಪಿ ಯುವ ಮೋರ್ಚಾದ ನೂತನ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ವಿಖ್ಯಾತ್ ಶೆಟ್ಟಿಯವರನ್ನು ಬಿಜೆಪಿ ಉಡುಪಿ ನಗರ ವತಿಯಿಂದ ನಗರಾಧ್ಯಕ್ಷ ದಿನೇಶ್ ಅಮೀನ್ ರವರು ನಗರ ಕಛೇರಿಯಲ್ಲಿ ಶಾಲು ಹೊದೆಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯ ಗಿರೀಶ್ ಎಮ್. ಅಂಚನ್, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಅಕ್ಷಿತ್ ಶೆಟ್ಟಿ ಹೆರ್ಗ, ಉಡುಪಿ ನಗರ ಯುವ ಮೋರ್ಚಾ ಅಧ್ಯಕ್ಷ ರೋಶನ್ ಶೆಟ್ಟಿ, ಪ್ರಮುಖರಾದ ರಾಘವೇಂದ್ರ ಕುತ್ಪಾಡಿ, ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಪ್ರಜಿತ್ ಆಚಾರ್ಯ ಮುಂತಾದವರುContinue reading “ಬಿಜೆಪಿ ಯುವ ಮೋರ್ಚಾದ ನೂತನ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿಯವರಿಗೆ ಉಡುಪಿ ನಗರ ಬಿಜೆಪಿಯಿಂದ ಅಭಿನಂದನೆ”

‘ಯುವ ಚೌಪಾಲ್’ ಸಹಿತ ಸರಣಿ ಅಭಿಯಾನಗಳ ಯಶಸ್ಸಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಕರೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ದಾರವರ ಕರೆಯಂತೆ ಫೆ.23ರಿಂದ ಮಾ.5ರ ವರೆಗೆ ಉಡುಪಿ ಜಿಲ್ಲೆಯ ವಿಧ ಗ್ರಾಮಗಳಲ್ಲಿ ‘ನಮೋ ಯುವ ಭಾರತ’ ಅಭಿಯಾನದಡಿ ‘ಯುವ ಚೌಪಾಲ್’, 18ರಿಂದ 25 ವರ್ಷ ವಯೋಮಿತಿಯೊಳಗಿನ ಹೊಸ ಯುವ ಮತದಾರರ ‘ಯುವ ಸಂವಾದ’ ಕಾರ್ಯಕ್ರಮ ನಡೆಯಲಿದೆ. ಈ ಅಭಿಯಾನವು ಮೇ 25ರಂದು ಜಿಲ್ಲೆಯ ಎಲ್ಲಾ ಮಂಡಲಗಳಲ್ಲಿ ಶಾಸಕರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡು, ಮಾ.3ರ ತನಕ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ನಡೆಯಲಿದೆ. ಈ ಅಭಿಯಾನದ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದContinue reading “‘ಯುವ ಚೌಪಾಲ್’ ಸಹಿತ ಸರಣಿ ಅಭಿಯಾನಗಳ ಯಶಸ್ಸಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಕರೆ”

ಜವಾಬ್ದಾರಿಯನ್ನು ಅರಿತು ಒಂದು ತಂಡವಾಗಿ ಕೆಲಸ ಮಾಡೋಣ: ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ನೂತನ ತಂಡ ರಚನೆ ಆಗಿದೆ. ಜಿಲ್ಲಾ ಸಮಿತಿ ಮತ್ತು ಮಂಡಲ, ಮೋರ್ಚಾ, ಪ್ರಕೋಷ್ಠಗಳ ಸಹಿತ ಎಲ್ಲರೂ ತಮ್ಮ ಜವಾಬ್ದಾರಿಯನ್ನು ಅರಿತು ಒಂದು ಉತ್ತಮ ತಂಡವಾಗಿ ಕೆಲಸ ಮಾಡಬೇಕಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ನೂತನ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿದರು. ಬಿಜೆಪಿ ಕಾರ್ಯಕರ್ತ ಆಧಾರಿತ ಪಕ್ಷ. ಕಾರ್ಯಕರ್ತರ ಸಮರ್ಪಣಾಭಾವದ ಸೇವೆ ಮತ್ತುContinue reading “ಜವಾಬ್ದಾರಿಯನ್ನು ಅರಿತು ಒಂದು ತಂಡವಾಗಿ ಕೆಲಸ ಮಾಡೋಣ: ಕಿಶೋರ್ ಕುಮಾರ್ ಕುಂದಾಪುರ”

ಲೋಕಸಭಾ ಚುನಾವಣೆಗೆ ಬಿಜೆಪಿ ಸಜ್ಜು : ಉಡುಪಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಗೆ ಪ್ರಭಾರಿಗಳು ಮತ್ತು ಸಂಚಾಲಕರ ನೇಮಕ

ಉಡುಪಿ: ಲೋಕಸಭಾ ಚುನಾವಣೆಯ ಪ್ರಯುಕ್ತ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಡುಪಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಪ್ರಭಾರಿಗಳು ಮತ್ತು ಸಂಚಾಲಕರನ್ನಾಗಿ ಈ ಕೆಳಗಿನಂತೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ನೇಮಕ ಮಾಡಿರುತ್ತಾರೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುಂದಾಪುರ : ನಯನಾ ಗಣೇಶ್ (ಪ್ರಭಾರಿ), ಸತೀಶ್ ಪೂಜಾರಿ (ಸಂಚಾಲಕರು) ಉಡುಪಿ : ರಾಜೇಶ್ ಕಾವೇರಿ (ಪ್ರಭಾರಿ), ಗಿರೀಶ್ ಎಮ್. ಅಂಚನ್ (ಸಂಚಾಲಕರು)Continue reading “ಲೋಕಸಭಾ ಚುನಾವಣೆಗೆ ಬಿಜೆಪಿ ಸಜ್ಜು : ಉಡುಪಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಗೆ ಪ್ರಭಾರಿಗಳು ಮತ್ತು ಸಂಚಾಲಕರ ನೇಮಕ”

ನಾಳೆ ಫೆ.15 ಸಂಜೆ 5.30ಕ್ಕೆ ಕಡಿಯಾಳಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ  ಕಚೇರಿಯ ಉದ್ಘಾಟನೆ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಕಛೇರಿಯ ಉದ್ಘಾಟನಾ ಸಮಾರಂಭವು ನಾಳೆ ಫೆ.15 ಗುರುವಾರ ಸಂಜೆ ಗಂಟೆ 5.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯ ಬಳಿಯ ‘ಮಾಂಡವಿ ಟ್ರೇಡ್ ಸೆಂಟರ್’ ಸಂಕೀರ್ಣ ಕಡಿಯಾಳಿ ಇದರ ತಳ ಅಂತಸ್ತಿನಲ್ಲಿ ನಡೆಯಲಿದೆ. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿ ಹಾಲಿ ಶಾಸಕರು ಮಾಜಿ ಸಚಿವರು ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಪ್ರಭಾರಿ ಅರಗ ಜ್ಞಾನೇಂದ್ರ ಇವರು ಚುನಾವಣಾ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರುContinue reading “ನಾಳೆ ಫೆ.15 ಸಂಜೆ 5.30ಕ್ಕೆ ಕಡಿಯಾಳಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ  ಕಚೇರಿಯ ಉದ್ಘಾಟನೆ”

ಡಾ! ಆಚಾರ್ಯ ಪಕ್ಷ ನಿಷ್ಠೆ, ದಕ್ಷತೆ, ಪ್ರಾಮಾಣಿಕತೆ ಕಾರ್ಯಕರ್ತರಿಗೆ ದಾರಿ ದೀಪ : ಲೋಕಸಭಾ ಚುನಾವಣಾ ಕ್ಲಸ್ಟರ್ ಸಂಚಾಲಕ ಎಮ್.ಬಿ. ಭಾನುಪ್ರಕಾಶ್

ಉಡುಪಿ ಜಿಲ್ಲಾ ಬಿಜೆಪಿಯಿಂದ ಡಾ! ವಿ.ಎಸ್. ಆಚಾರ್ಯ ಸಂಸ್ಮರಣೆ ಉಡುಪಿ: ನವ ಉಡುಪಿಯ ನಿರ್ಮಾತೃ, ಮಾಜಿ ಸಚಿವ ಡಾ! ವಿ.ಎಸ್. ಆಚಾರ್ಯ ರವರ ಪಕ್ಷ ನಿಷ್ಠೆ, ದಕ್ಷತೆ, ಬದ್ಧತೆ ಹಾಗೂ ಪ್ರಾಮಾಣಿಕತೆ ಪಕ್ಷದ ಕಾರ್ಯಕರ್ತರಿಗೆ ದಾರಿ ದೀಪ ಎಂದು ಲೋಕಸಭಾ ಚುನಾವಣಾ ಕ್ಲಸ್ಟರ್ ಸಂಚಾಲಕ (ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ) ಎಮ್.ಬಿ. ಬಾನುಪ್ರಕಾಶ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಡಾ! ವಿ.ಎಸ್. ಆಚಾರ್ಯ ಅವರ 12ನೇ ಪುಣ್ಯ ಸಂಸ್ಮರಣೆ ಕಾರ್ಯಕ್ರಮದಲ್ಲಿContinue reading “ಡಾ! ಆಚಾರ್ಯ ಪಕ್ಷ ನಿಷ್ಠೆ, ದಕ್ಷತೆ, ಪ್ರಾಮಾಣಿಕತೆ ಕಾರ್ಯಕರ್ತರಿಗೆ ದಾರಿ ದೀಪ : ಲೋಕಸಭಾ ಚುನಾವಣಾ ಕ್ಲಸ್ಟರ್ ಸಂಚಾಲಕ ಎಮ್.ಬಿ. ಭಾನುಪ್ರಕಾಶ್”

ಬಿಜೆಪಿ ಉಡುಪಿ ಜಿಲ್ಲೆ ಮತ್ತು ನಗರ ವತಿಯಿಂದ ಡಾ! ವಿ.ಎಸ್. ಆಚಾರ್ಯ ಪ್ರತಿಮೆಗೆ ಮಾಲಾರ್ಪಣೆ, ಪುಷ್ಪ ನಮನ

ಉಡುಪಿ: ಬಿಜೆಪಿ ಹಿರಿಯ ನಾಯಕ, ನವ ಉಡುಪಿಯ ನಿರ್ಮಾತೃ, ಮಾಜಿ ಗೃಹ ಸಚಿವ ಡಾ! ವಿ.ಎಸ್. ಆಚಾರ್ಯ ಅವರ 12ನೇ ಪುಣ್ಯ ಸಂಸ್ಮರಣೆಯ ಪ್ರಯುಕ್ತ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಸಂಕೀರ್ಣ ಮಣಿಪಾಲದ  ರಜತಾದ್ರಿಯ ಮುಂಭಾಗದಲ್ಲಿರುವ ಡಾ! ವಿ.ಎಸ್. ಆಚಾರ್ಯ ಅವರ ಪ್ರತಿಮೆಗೆ ಮಾಲಾರ್ಪಣೆಗೈದು ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿಯ ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಕೆ.ರಾಘವೇಂದ್ರ ಕಿಣಿ, ಡಾ! ವಿ.ಎಸ್. ಆಚಾರ್ಯರವರ ಪುತ್ರರಾದ ಡಾ! ರವಿರಾಜ್Continue reading “ಬಿಜೆಪಿ ಉಡುಪಿ ಜಿಲ್ಲೆ ಮತ್ತು ನಗರ ವತಿಯಿಂದ ಡಾ! ವಿ.ಎಸ್. ಆಚಾರ್ಯ ಪ್ರತಿಮೆಗೆ ಮಾಲಾರ್ಪಣೆ, ಪುಷ್ಪ ನಮನ”

Design a site like this with WordPress.com
Get started